ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವ ಕಲ್ಯಾಣ; ಉಪ ಚುನಾವಣೆ ಟಿಕೆಟ್ ಬೇಡ ಎಂದ ಖೇಣಿ!

|
Google Oneindia Kannada News

ಬೀದರ್, ಜನವರಿ 24: ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದಾಗಿ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಉಪ ಚುನಾವಣೆ ಸಿದ್ಧತೆಯನ್ನು ನಡೆಸುತ್ತಿವೆ.

ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್ ಖೇಣಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಬಸವಕಲ್ಯಾಣ ಉಪ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ವರಿಷ್ಠರು ಮನವಿ ಮಾಡಿದರು" ಎಂದು ಹೇಳಿದರು.

ಬಸವಕಲ್ಯಾಣ ಉಪ ಚುನಾವಣೆ; ಬಿ. ವೈ. ವಿಜಯೇಂದ್ರ ಸಭೆ!ಬಸವಕಲ್ಯಾಣ ಉಪ ಚುನಾವಣೆ; ಬಿ. ವೈ. ವಿಜಯೇಂದ್ರ ಸಭೆ!

"ಸ್ವಕ್ಷೇತ್ರ ಬೀದರ್ ದಕ್ಷಿಣ ಬಿಟ್ಟು ಬೇಡೆ ಕಡೆಯಿಂದ ಸ್ಪರ್ಧಿಸಲಾರೆ ಎಂದು ನಯವಾಗಿ ನಿರಾಕರಿಸಿದ್ದೇನೆ. ಬಿ. ನಾರಾಯಣರಾವ್ ಪತ್ನಿ, ಪುತ್ರನಿಗೆ ಟಿಕೆಟ್ ನೀಡುವುದು ಪಕ್ಷದ ವರಿಷ್ಠರು, ಸ್ಪರ್ಧಿಸಲು ಇಚ್ಛಿಸುವವರಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ" ಎಂದು ಅಶೋಕ್ ಖೇಣಿ ಸ್ಪಷ್ಟಪಡಿಸಿದರು.

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಬಲಿ ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಬಲಿ

Ashok Kheny Rejected Basavakalyan By Elections

"ಬಸವಕಲ್ಯಾಣದಲ್ಲಿ ಅದೇ ಕ್ಷೇತ್ರದವರು ಸ್ಪರ್ಧಿಸಬೇಕು. ಹೊರಗಿನವರು ಸ್ಪರ್ಧಿಸಿದರೆ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು ಆಗುವುದಿಲ್ಲ. ಮತದಾರರ ಚುನಾಯಿತ ಪ್ರತಿನಿಧಿಯನ್ನು ಸುಲಭವಾಗಿ ಸಂಪರ್ಕಿಸಲು ಆಗುವುದಿಲ್ಲ" ಎಂದು ಅಶೋಕ್ ಖೇಣಿ ಹೇಳಿದರು.

ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ ಮಸ್ಕಿ, ಬಸವಕಲ್ಯಾಣ ಉಪಚುನಾವಣೆ: ಕುಮಾರಸ್ವಾಮಿ ಶಸ್ತ್ರತ್ಯಾಗ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಚುನಾವಣಾ ದಿನಾಂಕವನ್ನು ಇನ್ನು ಆಯೋಗ ಘೋಷಣೆ ಮಾಡಿಲ್ಲ. 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಬಿ.ನಾರಾಯಣರಾವ್ (67) ಸೆಪ್ಟೆಂಬರ್‌ನಲ್ಲಿ ನಿಧನ ಹೊಂದಿದ್ದು. ಉಪ ಚುನಾವಣೆ ಎದುರಾಗಿದೆ.

2018ರಲ್ಲಿ ಬಸವಕಲ್ಯಾಣದಲ್ಲಿ ಬಿ. ನಾರಾಯಣ ರಾವ್ 61,425 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಪಿ. ಜಿ. ಆರ್. ಸಿಂಧ್ಯಾ 31,414 ಮತ ಪಡೆದಿದ್ದರು.

Recommended Video

'Parakram' ವೇದಿಕೆಯಲ್ಲಿ ಪ್ರಭಾವಿಗಳ ಮುಖಾಮುಖಿ-ನಾ ಅತ್ತ.. ನೀ ಇತ್ತ ಅಂತಿದ್ದಾರೆ ಮೋದಿ-ದೀದಿ | Oneindia Kannada

ಬಿಜೆಪಿ ಉಪ ಚುನಾವಣೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಕ್ಷೇತ್ರದ ನಾಯಕರ ಜೊತೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ.

English summary
Congress leader approached Ashok Kheny for Basavakalyan by elections. Bidar South former MLA Ashok Kheny not approved for contest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X