Get Updates
Get notified of breaking news, exclusive insights, and must-see stories!

ಚುನಾವಣೋತ್ತರ ಸಮೀಕ್ಷೆ; ಬಸವಕಲ್ಯಾಣದಲ್ಲಿ ಕಾಂಗ್ರೆಸ್‌ಗೆ ಜಯ!

ಬೀದರ್, ಏಪ್ರಿಲ್ 29; ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದ ತೆರವಾದ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಎಂಬದು ಮೇ 2ರಂದು ತಿಳಿಯಲಿದೆ.

Recommended Video

      ExitPolls : ಪಂಚರಾಜ್ಯಗಳ ಕದನದ ಚುನಾವಣೋತ್ತರ ಸಮೀಕ್ಷೆ ಬಹಿರಂಗ..! | Oneindia Kannada

      ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ್, ಕಾಂಗ್ರೆಸ್‌ನಿಂದ ದಿ. ಬಿ. ನಾರಾಯಣರಾವ್ ಪತ್ನಿ ಮಾಲಾ, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಅಭ್ಯರ್ಥಿಗಳು. ಮಲ್ಲಿಕಾರ್ಜುನ ಖೂಬಾ ಬಿಜೆಪಿ ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

      ಗುರುವಾರ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಯ ಪ್ರಕಾರ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ಪ್ರಬಲ ಪೈಪೋಟಿಯನ್ನು ನೀಡಲಿದೆ.

      Basavakalyan Assembly By Elections Publictv Exit polls Results 2021

      ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಶೇ 49ರಷ್ಟು ಮತಗಳನ್ನು ಪಡೆಯಲಿದೆ. ಕಾಂಗ್ರೆಸ್ ಶೇ 51ರಷ್ಟು ಮತಗಳನ್ನು ಪಡೆಯಲಿದೆ. ಅಂತಿಮವಾಗಿ ಕಡಿಮೆ ಅಂತರದಲ್ಲಿ ಕಾಂಗ್ರೆಸ್‌ಗೆ ಜಯ ಸಿಗಲಿದೆ ಎಂದು ಹೇಳಿದೆ.

      ಕ್ಷೇತ್ರದಲ್ಲಿ 35 ವರ್ಷಗಳ ಬಳಿಕ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ನಾರಾಯಣರಾವ್ ಪಕ್ಷದ ಬಾವುಟ ಹಾರಿಸಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿತ್ತು.

      ಬಿ. ನಾರಾಯಣರಾವ್ ಪ್ರತಿಪಕ್ಷ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದರು. ಬಸವಕಲ್ಯಾಣದಲ್ಲಿ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಲವು ದಿನ ಪ್ರಚಾರವನ್ನು ನಡೆಸಿದ್ದಾರೆ.

      ಬಿಜೆಪಿಯಿಂದ ಶರಣು ಸಲಗರ್‌ಗೆ ಟಿಕೆಟ್ ಕೊಟ್ಟಿದ್ದರಿಂದ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇಬ್ಬರು ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಮತ ವಿಭಜನೆ ಆಗಿರುವ ನಿರೀಕ್ಷೆ ಇದೆ.

      ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣದ ಪೈಕಿ ಬಸವಕಲ್ಯಾಣದಲ್ಲಿ ಮಾತ್ರ ಜೆಡಿಎಸ್ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಅವರು ಪ್ರಬಲ ಪೈಪೋಟಿ ನೀಡಲು ವಿಫಲರಾಗಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+