ಬಸವಕಲ್ಯಾಣ ಉಪ ಚುನಾವಣೆ; ಒಳ ಒಪ್ಪಂದ ರಹಸ್ಯ ಬಯಲು!

ಬೀದರ್, ಮಾರ್ಚ್ 26; ಮೂರು ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜೆಡಿಎಸ್ ಪಕ್ಷ ಬಸವಕಲ್ಯಾಣದಲ್ಲಿ ಮಾತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಟೀಕಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ನಡೆಯಲಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಯಸ್ರಬ್ ಅಲಿ ಖಾದ್ರಿ ಗುರುವಾರ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ಸಮಾವೇಶ ನಡೆಸುವ ಮೂಲಕ ಪ್ರಚಾರ ಆರಂಭಿಸಿದರು.

ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಜೆಡಿಎಸ್ ವಿರುದ್ಧ ಆರೋಪವನ್ನು ಮಾಡಿದ್ದಾರೆ. "ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು" ಎಂದು ಆರೋಪಿಸಿದ್ದಾರೆ.

Basavakalyan By Election Siddaramaiah Tweet Against JDS

ಬಸವಕಲ್ಯಾಣದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಎಚ್. ಡಿ. ಕುಮಾರಸ್ವಾಮಿ, "ಸಮಾನತೆ ಸಂದೇಶ ಸಾರಿದ ಬಸವಣ್ಣನವರ ಕಾರ್ಯಕ್ಷೇತ್ರವಾದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ನಮ್ಮ ಪಕ್ಷ ಬಲಿಷ್ಠವಾಗಿದೆ ಎಂಬ ಸಂದೇಶ ರಾಜ್ಯಕ್ಕೆ ರವಾನಿಸುವ ಉದ್ದೇಶವಿದೆ" ಎಂದು ಹೇಳಿದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಲ್ಲಮ್ಮ, ಬಿಜೆಪಿಯಿಂದ ಶರಣು ಸಲಗಾರ್ ಅಭ್ಯರ್ಥಿಯಾಗಿದ್ದಾರೆ. ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

2018ರಲ್ಲಿ ಕಾಂಗ್ರೆಸ್‌ನ ಬಿ. ನಾರಾಯಣರಾವ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಕೋವಿಡ್ ಸೋಂಕಿತರಾಗಿದ್ದ ಅವರು ಮೃತಪಟ್ಟ ಕಾರಣ ಉಪ ಚುನಾವಣೆ ಎದುರಾಗಿದೆ. ಬಿ. ನಾರಾಯಣರಾವ್ ಪತ್ನಿ ಮಲ್ಲಮ್ಮಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+