ಬಸವಕಲ್ಯಾಣ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರ

ಬೀದರ್, ಸೆಪ್ಟೆಂಬರ್ 23 : ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೋವಿಡ್ ಸೋಂಕು ತಗುಲಿದ ಬಳಿಕ ಶಾಸಕರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೋವಿಡ್ ಸೋಂಕು ತಗುಲಿರುವ ನಾರಾಯಣರಾವ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೆಪ್ಟೆಂಬರ್ 1ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

66 ವರ್ಷದ ನಾರಾಯಣರಾವ್‌ಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇದೆ. ಇದರಿಂದಾಗಿ ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಅಂದಿನಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Basavakalyan Congress MLA B. Narayanrao Health Critical

ಭಾಲ್ಕಿ ಕ್ಷೇತ್ರದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬುಧವಾರ, "ಬಸವ ಕಲ್ಯಾಣ ಶಾಸಕರಾದ ಬಿ ನಾರಾಯಣ್ ರಾವ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರಾದ ಡಾ. ಮಹೇಶ್ ಅವರ ಜೊತೆ ಮಾತನಾಡಿ ಅವರ ಆರೋಗ್ಯ ವಿಚಾರಿಸದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

"ಐಸಿಯುನಲ್ಲಿದ್ದ ನಾರಾಯಣ್ ರಾವ್ ಅವರ ಸ್ಥಿತಿಯನ್ನು ವಿಡಿಯೋ ಕಾಲ್ ಮೂಲಕವೇ ಗಮನಿಸಿದ್ದೇನೆ. ಭಗವಂತ ಅವರಿಗೆ ಆಯುರಾರೋಗ್ಯ ನೀಡಲಿ ಅಂತಾ ಪ್ರಾರ್ಥಿಸುತ್ತೇನೆ" ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಲ್ಲಿ ಬಿ. ನಾರಾಯಣರಾವ್ 61,425 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಮಲ್ಲಿಕಾರ್ಜುನ, ಜೆಡಿಎಸ್‌ನಿಂದ ಪಿ. ಜಿ. ಆರ್. ಸಿಂಧ್ಯಾ ಅವರು ಎದುರಾಳಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+