ಬಸವಕಲ್ಯಾಣ: ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾಗೆ ಭಾರೀ ಹಿನ್ನೆಡೆ
ಬೀದರ್, ಮೇ 2: ಬೀದರ್ ಜಿಲ್ಲೆ ಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚಿತ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಾಕಷ್ಟು ಪೈಪೋಟಿ ನೀಡಿದರಾದರೂ ಮತ ಗಳಿಕೆಯಲ್ಲಿ ತೀರಾ ಹಿನ್ನಡೆ ಅನುಭವಿಸುತ್ತಿದ್ದಾರೆ.
ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಹುಟ್ಟಿಸಿದ ಮಲ್ಲಿಕಾರ್ಜುನ ಖೂಬಾ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕೇವಲ 1038 ಮತಗಳನ್ನು ಮಾತ್ರ ಪಡೆದಿದ್ದಾರೆ. ಇದು ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿಗಿಂತ 8,244 ಮತಗಳಿಂದ ಹಿಂದೆ ಬಿದ್ದಿದ್ದಾರೆ.
ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಬಂದಿದ್ದ ಮಲ್ಲಿಕಾರ್ಜುನ ಖೂಬಾ, ಕಳೆದ ಬಾರಿ ದಿವಂಗತ ಶಾಸಕ ಬಿ.ನಾರಾಯಣರಾವ್ ಎದುರು ಸೋಲನುಭವಿಸಿದರು. ಆದರೂ, ಗಣನೀಯ ಮತಗಳನ್ನು ಪಡೆದಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮಗೆ ಹಿನ್ನೆಡೆ
ದಿವಂಗತ ಶಾಸಕ ಬಿ.ನಾರಾಯಣರಾವ್ ಅಕಾಲಿನ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ಉಪ ಚುನಾವಣೆಗೆ ಅನುಕಂಪದ ಅಲೆ ನಂಬಿ ಕಣಕ್ಕಿಳಿದ ಕಾಂಗ್ರೆಸ್ ಅಭ್ಯರ್ಥಿ ಮೂರನೇ ಸುತ್ತಿನಲ್ಲೂ ಹಿನ್ನಡೆ ಅನುಭವಿಸಿದ್ದಾರೆ.
ಮೂರನೇ ಸುತ್ತು ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ನಾರಾಯಣರಾವ್ಗೆ 4848 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ 9282 ಮತಗಳನ್ನು ಪಡೆದಿದ್ದಾರೆ. ಹಾಗೇ ಮೂರನೇ ಸುತ್ತಿನಲ್ಲಿ ಹೊಸ ಬದಲಾವಣೆಯಾಗಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖುಬಾ ಜೆಡಿಎಸ್ ಅಭ್ಯರ್ಥಿಯನ್ನು ಹಿಂದಿಕ್ಕಿದ್ದಾರೆ.
ಮಲ್ಲಿಕಾರ್ಜುನ ಖೂಬಾಗೆ 1038 ಮತಗಳು ಲಭಿಸಿದರೆ, ಜೆಡಿಎಸ್ ಅಭ್ಯರ್ಥಿ ಯಾಸ್ರಬ್ ಖಾದ್ರಿಗೆ 808 ಮತಗಳು ಲಭಿಸಿವೆ. ಇನ್ನೂ 25 ಸುತ್ತಿನ ಮತ ಎಣಿಕೆ ಕಾರ್ಯ ಬಾಕಿ ಇದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications