ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಕಲ್ಯಾಣ ಉಪ ಚುನಾವಣೆ; ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ

|
Google Oneindia Kannada News

ಬೀದರ್, ಫೆಬ್ರವರಿ 25: ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ತಯಾರಿ ಜೋರಾಗಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.

ಬೆಂಗಳೂರಿನಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಬಯಸಿರುವ ಆಕಾಂಕ್ಷಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಬೀದರ್ ಸಂಸದ ಭಗವಂತ ಖೂಬ ಮುಂತಾದವರು ಪಾಲ್ಗೊಂಡಿದ್ದರು.

ಬಸವಕಲ್ಯಾಣದಲ್ಲಿ ಡಿ. ಕೆ. ಶಿವಕುಮಾರ್‌ಗೆ ಅದ್ದೂರಿ ಸ್ವಾಗತಬಸವಕಲ್ಯಾಣದಲ್ಲಿ ಡಿ. ಕೆ. ಶಿವಕುಮಾರ್‌ಗೆ ಅದ್ದೂರಿ ಸ್ವಾಗತ

ಬಿಜೆಪಿಯಿಂದ ಟಿಕೆಟ್ ಪಡೆಯಲು 18ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲರೂ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ಉಸ್ತುವಾರಿಗಳ ಮುಂದೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಚುನಾವಣಾ ಆಯೋಗ ಇನ್ನೂ ಉಪ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ.

ಬಸವಕಲ್ಯಾಣ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ ಬಸವಕಲ್ಯಾಣ ಉಪ ಚುನಾವಣೆಗೆ ಉಸ್ತುವಾರಿಗಳ ನೇಮಕ

ಎಲ್ಲಾ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಲಾಗುತ್ತದೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಸಹ ಉಪ ಚುನಾವಣೆ ಸಿದ್ಧತೆಯನ್ನು ಕೈಗೊಂಡಿದೆ.

ಬಸವಕಲ್ಯಾಣ ಉಪ ಚುನಾವಣೆ; ಬಿ. ವೈ. ವಿಜಯೇಂದ್ರ ಸಭೆ! ಬಸವಕಲ್ಯಾಣ ಉಪ ಚುನಾವಣೆ; ಬಿ. ವೈ. ವಿಜಯೇಂದ್ರ ಸಭೆ!

ಡಿಸಿಎಂ ಲಕ್ಷ್ಮಣ ಸವದಿ ಸೂಚನೆ

ಡಿಸಿಎಂ ಲಕ್ಷ್ಮಣ ಸವದಿ ಸೂಚನೆ

ಸಭೆಯಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, "ಎಲ್ಲರೂ ಸಹಮತದಿಂದ ವರಿಷ್ಠರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ" ಎಂದು ಹೇಳಿದರು.

ಪ್ರಚಾರದ ರೂಪುರೇಷೆ ಚರ್ಚೆ

ಪ್ರಚಾರದ ರೂಪುರೇಷೆ ಚರ್ಚೆ

ಬಸವಕಲ್ಯಾಣ ಕ್ಷೇತ್ರದಲ್ಲಿ ಉಪ ಚುನಾವಣೆ ಪ್ರಚಾರ ಹೇಗೆ ನಡೆಸಬೇಕು? ಎಂದು ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕಾಂಗ್ರೆಸ್ ಗೆದ್ದಿರುವ ಕ್ಷೇತ್ರ

ಕಾಂಗ್ರೆಸ್ ಗೆದ್ದಿರುವ ಕ್ಷೇತ್ರ

2018ರಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಪಕ್ಷದ ಅಭ್ಯರ್ಥಿಯಾಗಿದ್ದ ಬಿ. ನಾರಾಯಣ ರಾವ್ 61,425 ಮತ ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ 44,153, ಜೆಡಿಎಸ್‌ನ ಪಿ. ಜಿ. ಆರ್. ಸಿಂಧ್ಯಾ 31,414 ಮತ ಪಡೆದಿದ್ದರು. ನಾರಾಯಣರಾವ್ ನಿಧನದಿಂದ ಉಪ ಚುನಾವಣೆ ಎದುರಾಗಿದೆ.

Recommended Video

ಮತ್ತೆ ಜನಸಾಮಾನ್ಯರಿಗೆ ಅನಿಲಾಘಾತ- ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಳ..! | Oneindia Kannada
ಡಿ. ಕೆ. ಶಿವಕುಮಾರ್ ಭೇಟಿ

ಡಿ. ಕೆ. ಶಿವಕುಮಾರ್ ಭೇಟಿ

ಬಸವಕಲ್ಯಾಣ ಉಪ ಚುನಾವಣೆಗೆ ಕಾಂಗ್ರೆಸ್ ಸಹ ತಯಾರಿ ಮಾಡಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕೆಲವು ದಿನಗಳ ಹಿಂದೆ ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದರು. ಬಿ. ನಾರಾಯಣರಾವ್ ಸಮಾಧಿಗೆ ನಮನ ಸಲ್ಲಿಸಿದ್ದರು. ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದರು. ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಬೇಕಿದೆ.

English summary
Full swing preparations by BJP for Bidar district Basavakalyana assembly seat by elections. More than 18 leaders wish to contest for by elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X