ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಗಂಭೀರ ಆರೋಪ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಅನುದಾನ ನೀಡುವ ವಿಚಾರದಲ್ಲೂ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ನವರಿಗೆ ಬೆಣ್ಣೆ ಹಾಗೂ ಬಿಜೆಪಿಯವರಿಗೆ ಸುಣ್ಣ ಎನ್ನುವ ನೀತಿ ಅನುಸರಿಸಿದೆ ಎಂದು ದೂರಿದ್ದಾರೆ.

ರಾಜ್ಯ ಸರ್ಕಾರವು ತಮ್ಮ ಕಾಂಗ್ರೆಸ್‌ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಹೆಚ್ಚು ಅನುದಾನ ನೀಡುತ್ತಾ, ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದ್ದಾರೆ. ಸರ್ಕಾರದ ಈ ನಡೆಯು ನನಗೆ ಸ್ವಲ್ಪವೂ ಹಿಡಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಬೇಸರ ವ್ಯಕ್ತಪಡಿಸಿದ್ದಾರೆ.

BJP MLA Prabhu Chouhan Accuses Karnataka Congress Government

ರಾಜ್ಯ ಸರ್ಕಾರವು ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನೇನೋ ಘೋಷಿಸಿದೆ. ಆದರೆ, ಇದೇ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬಳಿ ಈಗ ಹಣ ಖಾಲಿಯಾಗಿದೆ. ಕೇವಲ ಪ್ರಚಾರಕ್ಕಾಗಿ ಇಲ್ಲಿಗೆ ಬರುತ್ತಾರೆ, ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಕಾಲಕ್ಕೆ ಸಂಬಳ ಆಗುತ್ತಿಲ್ಲ. ನಮ್ಮ ಔರಾದ್‌ ಕ್ಷೇತ್ರವು ಇಡೀ ರಾಜ್ಯದಲ್ಲಿಯೇ ಹಿಂದುಳಿದಿರುವ ತಾಲ್ಲೂಕು. ಹೀಗಿರುವಾಗ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಏನನ್ನೂ ಕೊಟ್ಟಿಲ್ಲ. ಸರ್ಕಾರದ ಈ ನಡೆಯು ಜನವಿರೋಧಿ ಹಾಗೂ ರೈತರ ವಿರೋಧಿ ಎಂದು ಖಂಡಿಸಿದ್ದಾರೆ.

BJP MLA Prabhu Chouhan Accuses Karnataka Congress Government

ನಮ್ಮ ಜಿಲ್ಲೆಯ ಗೋರಟಾ ಗ್ರಾಮದ ಅನೇಕರು ಕಲ್ಯಾಣ ಕರ್ನಾಟಕದ ವಿಚಾರದಲ್ಲಿ ಜೀವ ತ್ಯಾಗ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಆ ಗ್ರಾಮದ ಹುತಾತ್ಮರ ಸ್ಮಾರಕಕ್ಕೆ ಭೇಟಿ ಕೊಡಬೇಕಿತ್ತು. ಆದರೆ, ಅವರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ದೂರಿದ್ದಾರೆ.

ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಿದ್ದಾಗಲೇ ಕಲಬುರಗಿಯಲ್ಲಿ ಮೊದಲು ಸಚಿವ ಸಂಪುಟ ಸಭೆ ನಡೆಸಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅವರು ಇಲ್ಲಿ ಸಚಿವ ಸಂಪುಟ ಮಾಡಿರುವ ವಿಚಾರವನ್ನು ಏನೋ ದೊಡ್ಡದು ಎಂಬಂತೆ ಬಿಂಬಿಸುತ್ತಿದ್ದಾರೆ. ಇದರಲ್ಲಿ ಹೊಸ ವಿಚಾರವೇನಿಲ್ಲ ಎಂದು ಶಾಸಕ ಪ್ರಭು ಚವ್ಹಾಣ್‌ ಹೇಳಿದ್ದಾರೆ.

ಕೆಕೆಆರ್‌ಡಿಬಿಗೆ 5,000 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ನಮ್ಮ ಕ್ಷೇತ್ರಕ್ಕೆ ಸುಮಾರು 130 ಕೋಟಿ ರೂಪಾಯಿ ಅನುದಾನ ಬರಬೇಕು. ಆದರೆ, 85 ಕೋಟಿ ರೂಪಾಯಿ ಅಷ್ಟೇ ಅನುದಾನ ನೀಡುತ್ತಿದ್ದಾರೆ. ಈ ಬಗ್ಗೆಯೂ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಟ್‌ ಅವರಿಗೆ ದೂರು ಕೊಟ್ಟಿದ್ದೇನೆ ಎಂದಿದ್ದಾರೆ.

ಶಾಸಕ ಮುನಿರತ್ನ ಅವರ ಬಂಧನದ ವಿಚಾರದ ಬಗ್ಗೆ ಮಾತನಾಡಿ, ವಿಧಾನ ಪರಿಷತ್‌ ಸದಸ್ಯ ಚಂದ್ರಶೇಖರ ಪಾಟೀಲ ಅವರು ನಮ್ಮ ಪಕ್ಷದ ಶಾಸಕನ ವಿರುದ್ಧ ಮನಬಂದಂತೆ ಮಾತನಾಡಿದ್ದಾರೆ. ಹೀಗಿದ್ದರೂ ಯಾರ ವಿರುದ್ಧವೂ ಕ್ರಮ ಜರುಗಿಸಿಲ್ಲ. ಯಾದಗಿರಿಯಲ್ಲೂ ಕಾಂಗ್ರೆಸ್‌ ಶಾಸಕನ ವಿರುದ್ಧ ಕೇಸ್‌ ದಾಖಲಾಗಿದೆ. ಆದರೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದ್ದಕ್ಕಿದ್ದಂತೆ ಕ್ರಮ ಜರುಗಿಸಿದ್ದಾರೆ. ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಈ ನಡೆ ಖಂಡನೀಯ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+