ಬೀದರ್; ಕಾರಿಗೆ ಬೆಂಕಿ, ಮಹಿಳೆ ಸಜೀವ ದಹನ
ಬೀದರ್, ಡಿಸೆಂಬರ್ 5 : ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಜೀವವಾಗಿ ದಹನವಾದ ಘಟನೆ ಬೀದರ್‌ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಗುರುವಾರ ಬೆಳಗ್ಗೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆ ಹಬ್ಬಿದೆ.
ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. 28 ವರ್ಷದ ಮಹಿಳೆ ಕಲ್ಯಾಣಿ ಎಂಬ ಮಹಿಳೆ ಕಾರಿನಿಂದ ಹೊರಬರಲಾಗದೆ ಸಜೀವವಾಗಿ ದಹನವಾಗಿದ್ದಾರೆ. ಕಲ್ಯಾಣಿ ಪತಿ ಮತ್ತು ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂಬುದು ತಿಳಿದುಬಂದಿಲ್ಲ. ಕಲ್ಯಾಣಿ ಪತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಕಿ ಹೊತ್ತಿಕೊಂಡ ಕಾರು ಹುಂಡೈ ಕಂಪನಿಗೆ ಸೇರಿದ್ದಾಗಿದೆ. ಕಾರು ಉದಯಗಿರಿಯಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ಮುನ್ನಾಖೇಳಿ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ಮುಂದುವರೆಸಿದ್ದಾರೆ.












Click it and Unblock the Notifications