ವಿಕಲಚೇತನರ ಅಹವಾಲು: ಸ್ಥಳದಲ್ಲೇ ಪರಿಹಾರ ನೀಡಿದ ಕುಮಾರಸ್ವಾಮಿ
ಬೀದರ್, ಜೂನ್ 27: ಸಿಎಂ ಕುಮಾರಸ್ವಾಮಿ ಅವರು ಜೂನ್ 27ರಂದು ಬೀದರ್‌ನಲ್ಲಿ ನಡೆದ ಜನತಾ ದರ್ಶನದಲ್ಲಿ ವಿಕಲಚೇತನರು ಹಾಗೂ ಪೋಷಕರ ಅಹವಾಲುಗಳನ್ನು ಆಲಿಸಿದರು.
ವಿಕಲಚೇತನ ಸಹೋದರನೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯೊಬ್ಬಳು ತನ್ನ ತಮ್ಮನ ಆರೋಗ್ಯಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಬೇಕು. ನಾನು ಪಿಯುಸಿನಲ್ಲಿ ಶೇ. 94ರಷ್ಟು ಅಂಕಪಡೆದು ತೇರ್ಗಡೆಯಾಗಿದ್ದು, ಕೃಷಿ ಪದವಿಯಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಿ ಎಂದು ಕೋರಿದಳು.
ಸೋದರ ಸೋದರಿಯರ ಸಂಕಷ್ಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಬಿಎಸ್ ಸಿ ಪದವಿ ಓದಿಸಲು ಅಗತ್ಯ ನೆರವು ನೀಡುವುದಾಗಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಜೊತೆಗೆ ಅವರಿಗೆ ಎರಡು ಲಕ್ಷ ರೂ ಬಿಡುಗಡೆ ಮಾಡಿದರು.

ಊರುಗೋಲು ಕೊಡಿಸುವುದಾಗಿ ಭರವಸೆ
ಊರುಗೋಲು ಹಿಡಿದುಕೊಂಡು ಮುಖ್ಯಮಂತ್ರಿ ಅವರ ಬಳಿಬಂದ ಕೆಲವು ವಿಕಲಚೇತನರಿಗೆ ವಿಕಲಚೇತನರ ಇಲಾಖೆಯ ಮೂಲಕ ಊರುಗೋಲು ಕೊಡಿಸುವುದಾಗಿ ತಿಳಿಸಿದರು.

ಕಿಡ್ನಿ ವೈಫಲ್ಯ, ಹೃದಯ ಕಾಯಿಲೆಯವರಿಗೆ ಚಿಕಿತ್ಸೆ ಭರವಸೆ
ಕಿಡ್ನಿ ವೈಫಲ್ಯ, ಹೃದಯ ಕಾಯಿಲೆ ಇರುವವರ ಅಹವಾಲು ಆಲಿಸಿದ ಮುಖ್ಯಮಂತ್ರಿಯವರು, ಜಯದೇವ ಮತ್ತು ನೆಪ್ರೋ ಯುರಾಲಜಿ ಇನಸ್ಟಿಟ್ಯೂಟ್ ಗಳ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಚಿಕಿತ್ಸೆ ಕೊಡಲು ಸೂಚಿಸಿದರು.

ಹಲವು ಕಾಮಗಾರಿಗಳಿಗೆ ಉದ್ಘಾಟನೆ
ಆರು ಜನರಿಗೆ ಅಂಗವಿಕಲರ ಪರಿಹಾರ ನಿಧಿಯಲ್ಲಿ ಪರಿಹಾರ ಘೋಷಣೆ ಮಾಡಿದರು. ಇದಷ್ಟೆ ಅಲ್ಲದೆ, ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಅವರು ಚಾಲನೆ ನೀಡಿದರು.

ಬೀದರ್‌ನ ಉಚಳಂಬದಲ್ಲಿ ಗ್ರಾಮ ವಾಸ್ತವ್ಯ
ನಿನ್ನೆ ರಾಯಚೂರು ಜಿಲ್ಲೆ ಮಾನ್ವಿಯ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕುಮಾರಸ್ವಾಮಿ ಅವರು ಇಂದು, ಬೀದರ್ ಜಿಲ್ಲೆ, ಬಸವಕಲ್ಯಾಣ ತಾಲ್ಲೂಕಿನ ಉಚಳಂಬ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದಲ್ಲಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications