ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ನಿಯಮ ಉಲ್ಲಂಘಿಸಿದರೆ ಮತ್ತೆ ಲಾಕ್‌ಡೌನ್ ಖಚಿತ: ಸಿಎಂ ಯಡಿಯೂರಪ್ಪ

|
Google Oneindia Kannada News

ಬೀದರ್, ಏಪ್ರಿಲ್ 12: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

Recommended Video

ಕೋರಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ, ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್‌ ಅರೆಸ್ಟ್‌ | Oneindia Kannada

ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್‌ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸೂಚನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನೈಟ್ ಕರ್ಫ್ಯೂ ಹಾಗೂ ಕೊರೊನಾ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲವಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯವಾದರೆ ರಾಜ್ಯದಲ್ಲಿ ಲಾಕ್ ಡೌನ್ ಕೂಡ ಮಾಡಲಾಗುತ್ತದೆ. ಆದರೆ ಈ ನಿರ್ಣಯಕ್ಕೆ ಆಸ್ಪದ ಕೊಡಬೇಡಿ ಎಂದು ಸಿಎಂ ಮನವಿ ಮಾಡಿದರು.

CM Yediyurappa on imposing Lockdown in Karnataka

ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಮುನ್ನ ಹೇಳಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ಮಾಡಲು ಅವಕಾಶ ಸಾರ್ವಜನಿಕರು ಅವಕಾಶ ನೀಡಬಾರದೆಂದರು.

English summary
CM BS Yediyurappa said corona cases in the state are increasing day by day and if people do not strictly follow the rules, it is necessary to lockdown again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X