ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಬಲಿ

|
Google Oneindia Kannada News

ಬೀದರ್, ಸೆಪ್ಟೆಂಬರ್ 24 : ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ವಿಧಿವಶರಾದರು. ಕೋವಿಡ್ 19 ಸೋಂಕು ತಗುಲಿದ ಬಳಿಕ ಶಾಸಕರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಗುರುವಾರ ಮಧ್ಯಾಹ್ನ 3.55ಕ್ಕೆ 65 ವರ್ಷದ ನಾರಾಯಣರಾವ್‌ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರಾಗಿದ್ದ ಅವರನ್ನು ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಬಸವಕಲ್ಯಾಣ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರಬಸವಕಲ್ಯಾಣ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರ

ಶಾಸಕರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇತ್ತು. ಆದ್ದರಿಂದ ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.

ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ವಿಧಿವಶಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ವಿಧಿವಶ

ಬಿ. ನಾರಾಯಣರಾವ್ 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ 61,425 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಪ್ರತಿ ಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಲ್ಲಿ ನಾರಾಯಣರಾವ್ ಸಹ ಒಬ್ಬರು.

ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ

ಬಹು ಅಂಗಾಗ ವೈಫಲ್ಯ

ಬಹು ಅಂಗಾಗ ವೈಫಲ್ಯ

ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ 1/9/2020ರಂದು ಬಿ. ನಾರಾಯಣರಾವ್ ದಾಖಲಾಗಿದ್ದರು. ಕೋವಿಡ್ ಸೋಂಕಿತರಾಗಿದ್ದ 65 ವರ್ಷದ ಅವರು 3.55ಕ್ಕೆ ನಿಧನ ಹೊಂದಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ ಆಳವಡಿಕೆ ಮಾಡಲಾಗಿತ್ತು ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ. ಮನೀಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ

ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ

ಬಿ. ನಾರಾಯಣರಾವ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನಾರಾಯಣರಾವ್ ಅವರನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದರು.

ಆರೋಗ್ಯ ಸ್ಥಿತಿ ಗಂಭೀರವಾಗಿತ್ತು

ಆರೋಗ್ಯ ಸ್ಥಿತಿ ಗಂಭೀರವಾಗಿತ್ತು

ಶಾಸಕರ ಬಿ. ನಾರಾಯರಾವ್ ಆರೋಗ್ಯ ಸ್ಥಿತಿ ಬುಧವಾರವೇ ಗಂಭೀರವಾಗಿತ್ತು. ಬಸವ ಕಲ್ಯಾಣದಿಂದ ಅವರ ಅಭಿಮಾನಿಗಳ ಬೆಂಗಳೂರಿಗೆ ಆಗಮಿಸಿದ್ದರು. "ಬಿ. ನಾರಾಯಣ್ ರಾವ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರಾದ ಡಾ. ಮಹೇಶ್ ಅವರ ಜೊತೆ ಮಾತನಾಡಿ ಅವರ ಆರೋಗ್ಯ ವಿಚಾರಿಸಿದ್ದೇನೆ" ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದರು.

Recommended Video

ಕಾಶ್ಮೀರದಲ್ಲಿ ಭಾರತೀಯರು ಅಂತ ಹೇಳೋರು ಯಾರು ಇಲ್ಲಾ?? | Oneindia Kannada
ಕೋವಿಡ್‌ಗೆ ಮೂವರು ಬಲಿ

ಕೋವಿಡ್‌ಗೆ ಮೂವರು ಬಲಿ

ಕರ್ನಾಟಕದ ಮೂವರು ಜನಪ್ರತಿನಿಧಿಗಳು ಇದುವರೆಗೂ ಕೋವಿಡ್‌ಗೆ ಬಲಿಯಾಗಿದ್ದಾರೆ. ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಅಶೋಕ್ ಗಸ್ತಿ, ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಸಹ ಕೋವಿಡ್‌ಗೆ ಬಲಿಯಾಗಿದ್ದರು. ಇಂದು ಬಿ. ನಾರಾಯಣರಾವ್ ಬಲಿಯಾಗಿದ್ದಾರೆ.

English summary
Basavakalyan Congress MLA B. Narayanrao who tested positive for COVID 19 died in private hospital at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X