ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಭ್ರಷ್ಟಾಚಾರ ಅವ್ಯವಹಾರ ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇವೆ: ಬಸವರಾಜ ಬೊಮ್ಮಾಯಿ

|
Google Oneindia Kannada News

ಬೀದರ್, ಅಕ್ಟೋಬರ್ 18: ಕಾಂಗ್ರೆಸ್ ಭ್ರಷ್ಟಾಚಾರ, ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ- ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲೆಸದಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು 'ಜನಸಂಕಲ್ಪ' ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ ಎಂದು ತಿಳಿಸಿದರು. ಅರ್ಜಿ ಹಾಕದೇ ನೇಮಕಾತಿ ನಡೆದಿದೆ ಎಂದು ತಿಳಿಸಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡಲೂ ಬಿಜೆಪಿ ಸರ್ಕಾರಕ್ಕೆ ಕಮಿಷನ್ ನೀಡಬೇಕೇ: ಕಾಂಗ್ರೆಸ್‌ಭ್ರಷ್ಟಾಚಾರದ ಬಗ್ಗೆ ಮಾತನಾಡಲೂ ಬಿಜೆಪಿ ಸರ್ಕಾರಕ್ಕೆ ಕಮಿಷನ್ ನೀಡಬೇಕೇ: ಕಾಂಗ್ರೆಸ್‌

ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲಾ ಹಗರಣಗಳನ್ನು ಮುಚ್ಚಿ ಹಾಕಿದ್ದರು. ನಮ್ಮಲ್ಲಿ ಪಿಎಸ್‍ಐ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರಿಲ್ಲ ಎಂದು ಎಚ್ಚರಿಸಿದರು.

ಜನರ ಮೂಲಕ ನಾವೆಲ್ಲರೂ ಆಯ್ಕೆಯಾಗಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. 3 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಕೋವಿಡ್ ನಡುವೆಯೂ ಸತತ ಅಭಿವೃದ್ಧಿಗೆ ಶ್ರಮಿಸಿದ್ದೇವೆ ಎಂದರು.

ರಮೇಶ್‌ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೊಡಲಿ- ಶಾಸಕ ರಾಜೂ ಗೌಡ ಆಗ್ರಹರಮೇಶ್‌ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೊಡಲಿ- ಶಾಸಕ ರಾಜೂ ಗೌಡ ಆಗ್ರಹ

ಅತಿವೃಷ್ಟಿ ಪರಿಹಾರದಲ್ಲಿ ಹೆಚ್ಚಳ

ಅತಿವೃಷ್ಟಿ ಪರಿಹಾರದಲ್ಲಿ ಹೆಚ್ಚಳ

ಅತಿವೃಷ್ಟಿ ಸಂಬಂಧ ಪರಿಹಾರವನ್ನು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ. ತಾಂಡಾಗಳ ಅಭಿವೃದ್ಧಿ ಮಾಡಿ ಬಡವರಿಗೆ ನೆರವಾಗುತ್ತಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು. ಆದರೆ ಕಾಂಗ್ರೆಸ್ ಪಕ್ಷವು, ದೀನದಲಿತರ ಹೆಸರಿನಲ್ಲಿ ಅಧಿಕಾರ ಮಾಡಿದರೂ ಈ ಸಮುದಾಯಗಳ ಅಭಿವೃದ್ಧಿ ಆಗಲಿಲ್ಲ. ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನಲು ಆತ್ಮಸಾಕ್ಷಿ ಬೇಕಲ್ಲವೇ ಎಂದ ಅವರು, ನಿರ್ಣಯ ತೆಗೆದುಕೊಂಡವರು ಯಾರು ಎಂದು ಪ್ರಶ್ನಿಸಿದರು. ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಟೀಕಿಸಿದರು.

3 ಸಾವಿರ ಕೋಟಿ ಅನುದಾನ

3 ಸಾವಿರ ಕೋಟಿ ಅನುದಾನ

ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ. ನೀರಾವರಿ ಯೋಜನೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ ಎಂದು ವಿವರಿಸಿದರು.

ಬೀದರ್ ಅಭಿವೃದ್ಧಿಗೆ ವಿಶೇಷ ಅನುದಾನ

ಬೀದರ್ ಅಭಿವೃದ್ಧಿಗೆ ವಿಶೇಷ ಅನುದಾನ

ಮೀಸಲಾತಿ ಸೇರಿ ಜನರ ನಿರೀಕ್ಷೆಗೆ ಅನುಗುಣವಾಗಿ ನಾವು ಕೆಲಸ ಮಾಡಿದ್ದೇವೆ. ಬೀದರ್, ರಾಜ್ಯದ ಕಿರೀಟಪ್ರಾಯ ಜಿಲ್ಲೆಯಾಗಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದೇವೆ. ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧತೆ ತೋರಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಜನರ ಸಂಕಲ್ಪ ಮತ್ತು ಜನಶಕ್ತಿ ಮುಖ್ಯವಾಗಿದೆ. ನರೇಂದ್ರ ಮೋದಿಜಿ ಅವರ ಸಮರ್ಥ ನೇತೃತ್ವ ನಮ್ಮ ಜೊತೆಗಿದೆ. ಕಾಂಗ್ರೆಸ್ ಪಕ್ಷದ ಕನಸನ್ನು ಕನಸಾಗಿಯೇ ಉಳಿಸಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಮನವಿ ಮಾಡಿದರು.

ಬೀದರ್‌ನಲ್ಲಿ ಬಿಜೆಪಿ ತೆಕ್ಕೆಗೆ 5ರಿಂದ 6 ಸ್ಥಾನ

ಬೀದರ್‌ನಲ್ಲಿ ಬಿಜೆಪಿ ತೆಕ್ಕೆಗೆ 5ರಿಂದ 6 ಸ್ಥಾನ

ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ . ಔರಾದ್ ತಾಲ್ಲೂಕಿನ 36 ಕೋಟಿ ರೂಗಳನ್ನು ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮಂಜೂರಾತಿ ಮಾಡಿದ್ದಾರೆ. ಕರ್ನಾಟಕದಲ್ಲಿ ಸಂಕಲ್ಪ ಯಾತ್ರೆಯು ಸಂಚಲನ ಉಂಟು ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಶಾಸಕರು ಜಿಲ್ಲೆಯ ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಜಿಲ್ಲೆಯಲ್ಲಿ 5ರಿಂದ 6 ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂದು ವಿಶ್ವಾಸವಿದೆ. ಮೋದಿಜಿ ಮತ್ತು ಬೊಮ್ಮಾಯಿಯವರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜ್ಯದ ಸಚಿವ ಗೋವಿಂದ ಕಾರಜೋಳ, ಸಚಿವರಾದ ಪ್ರಭು ಚೌಹಾಣ್, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

English summary
Karnataka Chief Minister Basavaraj Bommai said details of corruption during the Congress period will be sent to Rahul Gandhi along with full statistics. He said in the Janasankalpa Yatra held in Bidar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X