ಬೀದರ್ ಜಿಲ್ಲೆಗೆ ಕೋಟ್ಯಂತರ ಅನುದಾನ ನೀಡಿದ ಕುಮಾರಸ್ವಾಮಿ
ಬೀದರ್, ಜೂನ್ 27: ಜಿಲ್ಲೆಯ ಉಜಳಂಬ ಗ್ರಾಮದಲ್ಲಿ 32 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ಬಾರಿಯ ಬಜೆಟ್ ನಲ್ಲಿ ಬೀದರ್ ಜಿಲ್ಲೆಯಲ್ಲಿ ವಿವಿಧ ನೀರಾವರಿ ಕಾಮಗಾರಿಗಳಿಗಾಗಿ ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆಗೆ 800 ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗೋದಾವರಿ ಬೇಸಿನ್ ನಿಂದ ಬೀದರ್ ಜಿಲ್ಲೆಗೆ 7.86 ಟಿಎಂಸಿ ನೀರು ಹಂಚಿಕೆಯಾಗಬೇಕಿದೆ ಎಂದು ಮಾಹಿತಿ ಇದ್ದು ಈ ಕುರಿತು ನಿಖರವಾದ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಘೋಷಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ಆರಂಭಕ್ಕೆ ಮುಂದಿನ ಐದು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ಸಾಲಮನ್ನಾ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಸಾವಿರದ 45 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 11785 ರೈತರ 43 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ ಎಂದರು.

ಬೀದರ್‌ನಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ
ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಗೆ 317 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 89 ಕೋಟಿ ರೂ, ಪ/ಜಾತಿ ಪಂಗಡಗಳ ಅಭಿವೃದ್ಧಿಗೆ 50 ಕೋಟಿ ರೂ ನೀಡಲಾಗಿದೆ ಎಂದರು.

ಬೀದರ್ ಮೆಡಿಕಲ್ ಕಾಲೇಜು ದುರಸ್ತಿಗೆ 200 ಕೋಟಿ
ಮಾಂಜರಾ ಏತ ನೀರಾವರಿ ಮೂಲಕ 3ಟಿಎಂಸಿ ನೀರನ್ನು ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನ ಕೆರೆಗಳನ್ನು ತುಂಬಿಸಲು 75 ಕೋಟಿ ರೂ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬೀದರ ಮೆಡಿಕಲ್ ಕಾಲೇಜು ಕಟ್ಟಡ ಕಳಪೆ ಕಾಮಗಾರಿ ಕುರಿತು ಹಲವಾರು ದೂರುಗಳು ಬಂದಿವೆ. ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸುಸಜ್ಜಿತ ಗೊಳಿಸಲು 150ರಿಂದ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು.

ಬೀದರ್ ಅಭಿವೃದ್ಧಿಗೆ 2000 ಕೋಟಿ
ಬಜೆಟ್‌ನಲ್ಲಿ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2,000 ಕೋಟಿ ರೂಪಾಯಿ ಮಾಡಲಾಗಿದೆ. ಗ್ರಾಮ ವಾಸ್ತವ್ಯದಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗುತ್ತಿದೆ. ಹೈದರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೂಳ್ಳಲಾಗುತ್ತಿದೆ. ಪ್ರತಿ ಶಾಲೆಯ ಪರಿಸ್ಥಿತಿ, ಕಟ್ಟಡಗಳು, ಶಿಕ್ಷಕರ ಕೊರತೆ ಇತ್ಯಾದಿ ಮಾಹಿತಿಗಳನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ 30 ಜಿಲ್ಲೆ ಅಭಿವೃದ್ಧಿಗೆ ಬದ್ಧ
ರಾಜ್ಯದ ಎಲ್ಲಾ 30 ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ. ನಮ್ಮ ಸರಕಾರ ಯಾವುದೇ ಒಂದು ಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ. ಮೈತ್ರಿ ಸರಕಾರ ಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಕೆಲವರು ಅಸೂಯೆಯಿಂದ ಆರೋಪ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯದ ಸಂದರ್ಭ ದಲ್ಲಿ ಯಾದಗಿರಿ ಮತ್ತು ರಾಯಚೂರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

ಮಹಿಳಾ ಸಂಘಕ್ಕೆ ಐದು ಲಕ್ಷ ಬಡ್ಡಿ ರಹಿತ ಸಾಲ
ಕೃಷಿ ಪದ್ಧತಿಯಲ್ಲಿ ಬದಲಾವಣೆಯನ್ನು ಮಾಡಬೇಕಾಗಿದೆ. ಸರ್ಕಾರದ ಸಬ್ಸಿಡಿ ಯೋಜನೆಗಳನ್ನು ಬಳಸಿಕೊಂಡು ಕೃಷಿ ಪದ್ಧತಿಯನ್ನು ಲಾಭದಾಯಕವನ್ನಾಗಿ ಮಾಡಬಹುದಾಗಿದೆ. ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಐದು ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಶೇ. 4ರ ಬಡ್ಡಿದರದಲ್ಲಿ 10ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

ವಿಧನಾ ವೇತನ, ಅಂಗವಿಕರ ವೇತನ 2500 ಕ್ಕೆ ಏರಿಕೆ
ಸಂಧ್ಯಾ ಸುರಕ್ಷಾ ಯೋಜನೆಯಡಿ ಮುಂದಿನ ವರ್ಷದಿಂದ 2000 ರೂ ಪಿಂಚಣಿ ನೀಡಲಾಗುವುದು. ವಿಧವಾ ವೇತನ ಹಾಗೂ ಅಂಗವಿಕಲರ ವೇತನವನ್ನು 2500 ಕ್ಕೆ ಏರಿಕೆ ಮಾಡಲಾಗುವುದು. ಎಲ್ಲಾ ಸಮುದಾಯದವರ ಆರ್ಥಿಕ ಹಾಗೂ ಶೈಕ್ಷಣಿಕ ಭದ್ರತೆಗೆ ಸರಕಾರ ಬದ್ಧವಾಗಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications