• search
  • Live TV
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೀದರ್‌ ಜಿಲ್ಲೆಗೆ ಕೋಟ್ಯಂತರ ಅನುದಾನ ನೀಡಿದ ಕುಮಾರಸ್ವಾಮಿ

|

ಬೀದರ್, ಜೂನ್ 27: ಜಿಲ್ಲೆಯ ಉಜಳಂಬ ಗ್ರಾಮದಲ್ಲಿ 32 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ಬಾರಿಯ ಬಜೆಟ್ ನಲ್ಲಿ ಬೀದರ್ ಜಿಲ್ಲೆಯಲ್ಲಿ ವಿವಿಧ ನೀರಾವರಿ ಕಾಮಗಾರಿಗಳಿಗಾಗಿ ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆಗೆ 800 ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಿಕಲಚೇತನರ ಅಹವಾಲು: ಸ್ಥಳದಲ್ಲೇ ಪರಿಹಾರ ನೀಡಿದ ಕುಮಾರಸ್ವಾಮಿ

ಗೋದಾವರಿ ಬೇಸಿನ್ ನಿಂದ ಬೀದರ್‌ ಜಿಲ್ಲೆಗೆ 7.86 ಟಿಎಂಸಿ ನೀರು ಹಂಚಿಕೆಯಾಗಬೇಕಿದೆ ಎಂದು ಮಾಹಿತಿ ಇದ್ದು ಈ ಕುರಿತು ನಿಖರವಾದ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಘೋಷಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ಆರಂಭಕ್ಕೆ ಮುಂದಿನ ಐದು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ನಿಖಿಲ್ ಸೋತು, ಪ್ರಜ್ವಲ್ ಗೆದ್ದಿದ್ದು ಸಿಎಂಗೆ ಸಹಿಸಲಾಗ್ತಿಲ್ಲ: ಈಶ್ವರಪ್ಪ ಟೀಕೆ

ಸಾಲಮನ್ನಾ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಸಾವಿರದ 45 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 11785 ರೈತರ 43 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ ಎಂದರು.

ಬೀದರ್‌ನಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ

ಬೀದರ್‌ನಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ

ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆಗೆ 317 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 89 ಕೋಟಿ ರೂ, ಪ/ಜಾತಿ ಪಂಗಡಗಳ ಅಭಿವೃದ್ಧಿಗೆ 50 ಕೋಟಿ ರೂ ನೀಡಲಾಗಿದೆ ಎಂದರು.

ಬೀದರ್ ಮೆಡಿಕಲ್ ಕಾಲೇಜು ದುರಸ್ತಿಗೆ 200 ಕೋಟಿ

ಬೀದರ್ ಮೆಡಿಕಲ್ ಕಾಲೇಜು ದುರಸ್ತಿಗೆ 200 ಕೋಟಿ

ಮಾಂಜರಾ ಏತ ನೀರಾವರಿ ಮೂಲಕ 3ಟಿಎಂಸಿ ನೀರನ್ನು ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನ ಕೆರೆಗಳನ್ನು ತುಂಬಿಸಲು 75 ಕೋಟಿ ರೂ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬೀದರ ಮೆಡಿಕಲ್ ಕಾಲೇಜು ಕಟ್ಟಡ ಕಳಪೆ ಕಾಮಗಾರಿ ಕುರಿತು ಹಲವಾರು ದೂರುಗಳು ಬಂದಿವೆ. ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸುಸಜ್ಜಿತ ಗೊಳಿಸಲು 150ರಿಂದ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು.

ಮನೆ ಮೇಲ್ಛಾವಣಿ ಕುಸಿದು 6 ಸಾವು, 24 ಲಕ್ಷ ಪರಿಹಾರ ವಿತರಣೆ

ಬೀದರ್‌ ಅಭಿವೃದ್ಧಿಗೆ 2000 ಕೋಟಿ

ಬೀದರ್‌ ಅಭಿವೃದ್ಧಿಗೆ 2000 ಕೋಟಿ

ಬಜೆಟ್‌ನಲ್ಲಿ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2,000 ಕೋಟಿ ರೂಪಾಯಿ ಮಾಡಲಾಗಿದೆ. ಗ್ರಾಮ ವಾಸ್ತವ್ಯದಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗುತ್ತಿದೆ. ಹೈದರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೂಳ್ಳಲಾಗುತ್ತಿದೆ. ಪ್ರತಿ ಶಾಲೆಯ ಪರಿಸ್ಥಿತಿ, ಕಟ್ಟಡಗಳು, ಶಿಕ್ಷಕರ ಕೊರತೆ ಇತ್ಯಾದಿ ಮಾಹಿತಿಗಳನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ 30 ಜಿಲ್ಲೆ ಅಭಿವೃದ್ಧಿಗೆ ಬದ್ಧ

ರಾಜ್ಯದ ಎಲ್ಲ 30 ಜಿಲ್ಲೆ ಅಭಿವೃದ್ಧಿಗೆ ಬದ್ಧ

ರಾಜ್ಯದ ಎಲ್ಲಾ 30 ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ. ನಮ್ಮ ಸರಕಾರ ಯಾವುದೇ ಒಂದು ಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ. ಮೈತ್ರಿ ಸರಕಾರ ಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಕೆಲವರು ಅಸೂಯೆಯಿಂದ ಆರೋಪ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯದ ಸಂದರ್ಭ ದಲ್ಲಿ ಯಾದಗಿರಿ ಮತ್ತು ರಾಯಚೂರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

ಸಿಎಂ ಗ್ರಾಮವಾಸ್ತವ್ಯಕ್ಕೆ ಬಿಜೆಪಿಯೇ ಅಡ್ಡಿ; ಎಚ್. ವಿಶ್ವನಾಥ್

ಮಹಿಳಾ ಸಂಘಕ್ಕೆ ಐದು ಲಕ್ಷ ಬಡ್ಡಿ ರಹಿತ ಸಾಲ

ಮಹಿಳಾ ಸಂಘಕ್ಕೆ ಐದು ಲಕ್ಷ ಬಡ್ಡಿ ರಹಿತ ಸಾಲ

ಕೃಷಿ ಪದ್ಧತಿಯಲ್ಲಿ ಬದಲಾವಣೆಯನ್ನು ಮಾಡಬೇಕಾಗಿದೆ. ಸರ್ಕಾರದ ಸಬ್ಸಿಡಿ ಯೋಜನೆಗಳನ್ನು ಬಳಸಿಕೊಂಡು ಕೃಷಿ ಪದ್ಧತಿಯನ್ನು ಲಾಭದಾಯಕವನ್ನಾಗಿ ಮಾಡಬಹುದಾಗಿದೆ. ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಐದು ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಶೇ. 4ರ ಬಡ್ಡಿದರದಲ್ಲಿ 10ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

ವಿಧನಾ ವೇತನ, ಅಂಗವಿಕರ ವೇತನ 2500 ಕ್ಕೆ ಏರಿಕೆ

ವಿಧನಾ ವೇತನ, ಅಂಗವಿಕರ ವೇತನ 2500 ಕ್ಕೆ ಏರಿಕೆ

ಸಂಧ್ಯಾ ಸುರಕ್ಷಾ ಯೋಜನೆಯಡಿ ಮುಂದಿನ ವರ್ಷದಿಂದ 2000 ರೂ ಪಿಂಚಣಿ ನೀಡಲಾಗುವುದು. ವಿಧವಾ ವೇತನ ಹಾಗೂ ಅಂಗವಿಕಲರ ವೇತನವನ್ನು 2500 ಕ್ಕೆ ಏರಿಕೆ ಮಾಡಲಾಗುವುದು. ಎಲ್ಲಾ ಸಮುದಾಯದವರ ಆರ್ಥಿಕ ಹಾಗೂ ಶೈಕ್ಷಣಿಕ ಭದ್ರತೆಗೆ ಸರಕಾರ ಬದ್ಧವಾಗಿದೆ.

ಉ. ಕರ್ನಾಟಕದ ಜನ ಜೆಡಿಎಸ್ ಸ್ವೀಕರಿಸದೇ ಇರುವುದು ಕುಮಾರಸ್ವಾಮಿ ಅಸಹನೆಗೆ ಕಾರಣವೇ?

English summary
CM HD Kumaraswamy gave crores of grants to Bidar district development. He did village stay in Bidar district's Ujalamba village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X