ಜೂನ್ 27ರಂದು ಬೀದರ್‌ನಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ
ಬೀದರ್, ಜೂನ್ 26 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯಕ್ಕೆ ಉಜಳಂಬ ಗ್ರಾಮ ಸಕಲ ರೀತಿಯಲ್ಲಿ ಸಜ್ಜಾಗಿದೆ. ಜೂನ್ 27ರಂದು ಕುಮಾರಸ್ವಾಮಿ ಅವರು ಬೀದರ್ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಗುರುವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮದಿಂದ ಹೆಲಿಕಾಪ್ಟರ್ ಮೂಲಕ ಬೀದರ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಉಜಳಂಬ ಗ್ರಾಮದಲ್ಲಿ ಗುರುವಾರ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಗ್ರಾಮಕ್ಕೆ ಬೆಳಗ್ಗೆ 10 ಗಂಟೆ ಸುಮಾರಿಗೆ ಕುಮಾರಸ್ವಾಮಿ ಆಗಮಿಸಲಿದ್ದು, ಸಂಜೆ 6 ಗಂಟೆಯ ತನಕ ಜನರ ಅಹವಾಲು ಆಲಿಸಲಿದ್ದಾರೆ.

ಸಂಜೆ 6.30ರ ಬಳಿಕ ರೈತರು ಮತ್ತು ಶಾಲಾ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿ, ಮಕ್ಕಳ ಜೊತೆ ರಾತ್ರಿ ಭೋಜನ ಸವಿಯಲಿದ್ದಾರೆ.
ರಾತ್ರಿ ಉಜಳಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜೂನ್ 28ರ ಬೆಳಗ್ಗೆ 7 ಗಂಟೆಗೆ ಬೀದರ್‌ನ ವಾಯುನೆಲೆಗೆ ಆಗಮಿಸಲಿದ್ದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.












Click it and Unblock the Notifications