ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ಹಾಕಿದ ಹೈಕೋರ್ಟ್!

|
Google Oneindia Kannada News

ಬೀದರ್, ನವೆಂಬರ್ 18 : ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ಹಾಕಿದೆ. ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದಂಡ ಮೊತ್ತ ಪಾವತಿಸಲು ಸೂಚನೆ ನೀಡಿದೆ.

ಕಾಂಗ್ರೆಸ್ ನಾಯಕ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಡಿ. ಕೆ. ಸಿದ್ರಾಮ ಎಂಬುವವರು ಈಶ್ವರ ಖಂಡ್ರೆ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ವರವರ ರಾವ್‌ರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶ ವರವರ ರಾವ್‌ರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶ

High Court Fines KPCC Working President Eshwar Khandre

ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ ಆರೋಪದಡಿ ಅರ್ಜಿ ಸಲ್ಲಿಸಿದ್ದರು. ಶಾಸಕರಾಗಿ ಈಶ್ವರ ಖಂಡ್ರೆ ಅಸಿಂಧು ಕೋರಿದ್ದರು. ವಿಧಾನಸಭೆ ಚುನಾವಣೆ ವೇಳೆ ಪ್ರಮಾಣ ಪತ್ರ ಸಲ್ಲಿಸುವಾಗ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ಅರ್ಜಿಯಲ್ಲಿ ಆರೋಪ ಮಾಡಲಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆ: ದಿನಾಂಕ ನಿಗದಿಗೆ ಹೈಕೋರ್ಟ್ ಸೂಚನೆಗ್ರಾಮ ಪಂಚಾಯಿತಿ ಚುನಾವಣೆ: ದಿನಾಂಕ ನಿಗದಿಗೆ ಹೈಕೋರ್ಟ್ ಸೂಚನೆ

ಅರ್ಜಿಯ ವಿಚಾರಣೆಗೆ ಹಾಜರಾಗಬೇಕು ಎಂದು ಈಶ್ವರ ಖಂಡ್ರೆಗೆ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಗೈರಾಗಿದ್ದರು. ತಮ್ಮ ಆಪ್ತ ಸಹಾಯಕನಿಗೆ ಮರೆವಿನ ರೋಗವಿದೆ. ಆದ್ದರಿಂದ, ವಿಚಾರಣೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಈಶ್ವರ ಖಂಡ್ರೆ ಅರ್ಜಿ ಸಲ್ಲಿಸಿದ್ದರು.

ಕೊಲೆ; ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್! ಕೊಲೆ; ಜೀವಾವಧಿ ಶಿಕ್ಷೆ ರದ್ದು ಮಾಡಿದ ಹೈಕೋರ್ಟ್!

Recommended Video

KL Rahulಗೆ Australiaದಲ್ಲಿ ಸಿಗಲಿದೆ ಚಿನ್ನದಂತಹ ಅವಕಾಶ | Oneindia Kannada

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈಶ್ವರ ಖಂಡ್ರೆ ಅವರಿಗೆ 5 ಲಕ್ಷ ರೂ. ದಂಡ ಹಾಕಿತ್ತು. ದಂಡಮೊತ್ತವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಪಾವತಿ ಮಾಡುವಂತೆ ಸೂಚನೆ ನೀಡಿತು.

English summary
Karnataka high court fined Rs 5 lakh for the working president of Karnataka pradesh Congress committee and Bhalki MLA Eshwar Khandre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X