ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರಗೆ ಕೋವಿಡ್ ಸೋಂಕು

ಬೀದರ್, ನವೆಂಬರ್ 06: ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗದ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂಡೆಪ್ಪ ಖಾಶೆಂಪುರ ದಾಖಲಾಗಿದ್ದಾರೆ. ಗುರುವಾರ ಬೆಳಗ್ಗೆ ಅವರು ಕೋವಿಡ್ ಪರೀಕ್ಷೆ ಮಾಡಿಸಿದಾಗ ಕೋವಿಡ್ ಸೋಂಕು ಖಚಿತವಾಗಿದೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿಯೂ ಮಾಹಿತಿ ನೀಡಿದ್ದಾರೆ.

ಬಂಡೆಪ್ಪ ಖಾಶೆಂಪುರ ಅವರು ಫೇಸ್ ಬುಕ್‌ ಪೋಸ್ಟ್‌ನಲ್ಲಿ, "ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.

 JDS MLA Bandeppa Khashempur Tested Positive For COVID 19

"ಕಳೆದ 4-5 ದಿನಗಳಿಂದ ನನ್ನ ನೇರ ಸಂಪರ್ಕ ಹೊಂದಿರುವ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ತಾಯಿ ಭವಾನಿ ಮಾತೆ ಆಶೀರ್ವಾದ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗಿ ಬಂದು ಸದಾ ನಿಮ್ಮ ಸೇವೆಗೆ ಸಿದ್ದ ಇರುತ್ತಾನೆ" ಎಂದು ಪೋಸ್ಟ್ ಹಾಕಿದ್ದಾರೆ.

ಬಂಡೆಪ್ಪ ಖಾಶೆಂಪುರ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕ್ಷೇತ್ರದ ಅಭ್ಯರ್ಥಿ ಅಮ್ಮಾಜಮ್ಮ ಜೊತೆ ಪ್ರಚಾರ ನಡೆಸಿದ್ದರು.

ನವೆಂಬರ್ 3ರಂದು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಮುಗಿದಿದೆ. ಶೇ 84.54ರಷ್ಟು ಮತದಾನವಾಗಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಗುರುವಾರದ ವರದಿಯಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 8,38,929. ನವೆಂಬರ್ 5ರಂದು ಬೀದರ್‌ನಲ್ಲಿ 6 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6,918.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+