ಬೀದರ್‌ನಲ್ಲಿ ಫೆಬ್ರವರಿ 16ರಂದು ಉದ್ಯೋಗ ಮೇಳ

ಬೀದರ್, ಫೆಬ್ರವರಿ 17 : ಬೀದರ್‌ನಲ್ಲಿ ಫೆ.16ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 40 ವರ್ಷ ವಯೋಮಿತಿಯ ಯುವಕ/ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ರಾಷ್ಟೀಯ ವೃತ್ತಿ ಸೇವೆ ಯೋಜನೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಬೆಳಗ್ಗೆ 10ರಿಂದ ಸಂಜೆ 4ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವಿವಿಧ ಕಂಪನಿಗಳು ಹಲವು ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಿವೆ.

Job fair in Bidar on February 16

ಉದ್ಯೋಗ ಮೇಳದಲ್ಲಿ ಬೆಂಗಳೂರು, ಹುಬ್ಬಳ್ಳಿ, ಹಾಸನ, ಕೋಲಾರ, ಚಿಕ್ಕಮಗಳೂರು, ಕಲಬುರಗಿ, ರಾಯಚೂರು, ಹೈದರಾಬಾದ್, ಮುಂಬೈ ಹಾಗೂ ವಿವಿಧ ನಗರಗಳ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ.

ಎಸ್‌ಎಸ್‌ಎಲ್‌ಸಿ ಉತ್ತೀರ್ಣ/ ಅನುತ್ತೀರ್ಣ, ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ, ಪದವಿ ಮತ್ತು ಸ್ನಾತಕೋತ್ತರ ಪದವೀಧರರು ಉದ್ಯೋಗ ಮೇಳದಲ್ಲಿ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿ 18 ರಿಂದ 40 ವರ್ಷಗಳು.

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಕನಿಷ್ಠ 10 ರೆಸ್ಯೂಮ್ ಪ್ರತಿಯೊಂದಿಗೆ ಹಾಜರಾಗಬೇಕು. ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+