Bhalki Constituency: ಈಶ್ವರ್ ಖಂಡ್ರೆ ಸೋಲಿಸಲು ಒಂದಾದ ರಾಜಕೀಯ ವೈರಿಗಳು- ವರದಿ, ವಿಶ್ಲೇಷಣೆ
ಈ ಬಾರಿ ಭಾಲ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.
ಬೀದರ್, ಫೆಬ್ರವರಿ 21: ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರವೂ ಒಂದು. ಈ ಕ್ಷೇತ್ರದ ಮೊದಲ ಉಲ್ಲೇಖವನ್ನು 12 ನೇ ಶತಮಾನದ ಶರಣರ ವಚನಗಳಲ್ಲಿ 'ಬೆಳ್ಳುಂಕೆ' ಎಂಬ ಹೆಸರಿನಲ್ಲಿ ಮಾಡಲಾಗಿದೆ. ಭಕ್ತಿ ಚಳವಳಿಯ ಭಾಗವಾಗಿದ್ದ ಶರಣ ಕುಂಬಾರ ಗುಂಡಯ್ಯ ಅವರು ಭಾಲ್ಕಿ ಕ್ಷೇತ್ರದಲ್ಲಿ ಜನಿಸಿದ್ದಾರೆ.
ಭಾಲ್ಕಿ ಕ್ಷೇತ್ರವು ಐತಿಹಾಸಿಕವಾಗಿಯೂ ಮಹತ್ವವನ್ನು ಪಡೆದುಕೊಂಡಿದೆ. ಭಾಲ್ಕಿ ಕೋಟೆ, ಭಾಲ್ಕೇಶ್ವರ ದೇವಸ್ಥಾನ, ರಾಮ ಮಂದಿರ, ರಾಮೇಶ್ವರ ಟೇಕಡೆ, ಭಾಲ್ಕಿ ಟ್ಯಾಂಕ್‌ಗಳು ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣಗಳಾಗಿವೆ. ಜಿಲ್ಲಾ ಕೇಂದ್ರ ಬೀದರ್‌ನಿಂದ ಭಾಲ್ಕಿಯು 40 ಕಿಮೀ ದೂರದಲ್ಲಿದೆ..
ಇದು ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದ ಪ್ರಮುಖ ಪಟ್ಟಣಗಳಿಗೆ ರಸ್ತೆಯ ಮೂಲಕ ಉತ್ತಮ ಸಂಪರ್ಕವನ್ನು ಹೊಂದಿದೆ. ಭಾಲ್ಕಿ ಪಟ್ಟಣದಲ್ಲಿ ರೈಲು ನಿಲ್ದಾಣವೂ ಇದೆ. ಭಾಲ್ಕಿಯು ಬೀದರ್ ಜಿಲ್ಲೆಯ ಕೇಂದ್ರ ಸ್ಥಳವಾಗಿದ್ದು, ಇದು ಮಹಾರಾಷ್ಟ್ರದ ಉದ್ಗೀರ್ ಮತ್ತು ಶಹಜನಿ ಔರಾದ್ ಸೇರಿದಂತೆ ಇತರ ತಾಲೂಕುಗಳಿಗೆ (ಬೀದರ್, ಬಸವಕಲ್ಯಾಣ, ಔರಾದ್ ಬಿ, ಹುಮನಾಬಾದ್) ಸಂಪರ್ಕಿಸವನ್ನು ಹೊಂದಿದೆ.

ಭಾಲ್ಕಿ ಕ್ಷೇತ್ರದ ರಾಜಕೀಯ ಚರಿತ್ರೆ
ಭಾಲ್ಕಿ ಕ್ಷೇತ್ರವು 1957ರಿಂದ ಅಸ್ತಿತ್ವದಲ್ಲಿದೆ. ಈ ಕ್ಷೇತ್ರದ ಮೇಲೆ ಖಂಡ್ರೆ ಮನೆತನದ ಪ್ರಭಾವವಿದೆ. ಇದು ಕಾಂಗ್ರೆಸ್‌ನ ಹಿಡಿತದ ಕ್ಷೇತ್ರವಾಗಿರುವುದರಿಂದ ಎರಡು ಸಾರಿ ಮಾತ್ರ ಬಿಜೆಪಿ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬಿಟ್ಟರೆ, ಜನತಾ ಪರಿವಾರದಿಂದ ಒಂದೇ ಬಾರಿ ಶಾಸಕರು ಆಯ್ಕೆಯಾಗಿದ್ದಾರೆ. 1978, 1983ರಲ್ಲಿ ಭೀಮಣ್ಣ ಖಂಡ್ರೆ ಅವರು ಆಯ್ಕೆಯಾಗಿದ್ದರು. ಅವರು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಂತರ ವಿಜಯಕುಮಾರ್ ಬೀಮಣ್ಣ ಖಂಡ್ರೆ ಆಯ್ಕೆಯಾದರು. 1989 ಹಾಗೂ 1994ರಲ್ಲಿ ವಿಜಯಕುಮಾರ್ ಖಂಡ್ರೆ ಕಾಂಗ್ರೆಸ್‌ನಿಂದ ಶಾಸಕರಾದರು. ಆ ನಂತರ 1999 ಹಾಗೂ 2004ರಲ್ಲಿ ಪ್ರಕಾಶ ಖಂಡ್ರೆ ಅವರು ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದರು. ಇದಾದ ಬಳಿಕ, 2008, 2013 ಹಾಗೂ 2018ರಲ್ಲಿ ಈಶ್ವರ್ ಖಂಡ್ರೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ.

ರಾಜ್ಯ ರಾಜಕಾರಣದ ಪ್ರಭಾವಿ ನಾಯಕ ಈಶ್ವರ ಖಂಡ್ರ
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಈಶ್ವರ ಭೀಮಣ್ಣ ಖಂಡ್ರೆ ಅವರು 4 ಜುಲೈ 2018 ರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 25 ಮೇ 2008 ರಿಂದ ಭಾಲ್ಕಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ. ಅವರು 2016 ರಿಂದ 2018 ರವರೆಗೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಕರ್ನಾಟಕದ ಪೌರಾಡಳಿತ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾಗಿದ್ದರು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಶ್ವರ ಖಂಡ್ರೆ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು 20,971 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಈಶ್ವರ್ ಖಂಡ್ರೆಗೆ ಬಿಜೆಪಿ ಟಕ್ಕರ್
ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರಿಗೆ ಕಳೆದ ಬಾರಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಅವರ ಪಕ್ಷದಿಂದ ಮುನಿಸಿಕೊಂಡು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಹೀಗಾಗಿ, ಬಿಜೆಪಿ ಮತಗಳು ಹಂಚಿಹೋದವು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಡಿಕೆ ಸಿದ್ರಾಮ್ ಅವರು ಪರಾಭವಗೊಂಡರು. ಮತ್ತೆ ಈಶ್ವರ್ ಖಂಡ್ರೆ ಆಯ್ಕೆಯಾದರು. ಈ ಬಾರಿ ಈಶ್ವರ ಖಂಡ್ರೆ ಅವರನ್ನು ಸೋಲಿಸಲು ಈ ಇಬ್ಬರು ಮುಖಂಡರು ಒಂದಾಗಿದ್ದಾರೆ ಎಂಬ ಮಾಹಿತಿ ಇದೆ. ಈ ಇಬ್ಬರಲ್ಲಿ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈಶ್ವರ್ ಖಂಡ್ರೆ ಅವರಿಗೆ ಭಾಲ್ಕಿಯಿಂದ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.

ಭಾಲ್ಕಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು
ಭಾಲ್ಕಿ ಕ್ಷೇತ್ರದಲ್ಲಿ ಈಶ್ವರ್ ಖಂಡ್ರೆ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ಇನ್ನು ಬಿಜೆಪಿಯಿಂದ ಪ್ರಕಾಶ್ ಖಂಡ್ರೆ ಮತ್ತೆ ಟಿಕೆಟ್‌ಗಾಗಿ ಯತ್ನ ನಡೆಸಿದ್ದಾರೆ. 2013ರಲ್ಲಿ ಕೆಜೆಪಿಯಿಂದ, 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಡಿಕೆ ಸಿದ್ರಾಮ್ ಅವರು ಈ ಬಾರಿಯೂ ಸ್ಪರ್ಧಿಗೆ ಮುಂದಾಗಿದ್ದಾರೆ. ಇನ್ನುಳಿದಂತೆ, ಪ್ರಕಾಶ್ ಖಂಡ್ರೆ ಅವರ ಪುತ್ರ ಪ್ರಸನ್ನ ಖಂಡ್ರೆ ಅವರು ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದಾರೆ. ಅವರೂ ಸಹ ಬಿಜೆಪಿಯ ಟಿಕೆಟ್ ಆಕಾಂಕ್ಷಿ. ಜೆಡಿಎಸ್ ಟಿಕೆಟ್ ಪಡೆಯುವುದಕ್ಕೆ ಯಾರೂ ಮುಂದೆ ಬಂದಿಲ್ಲ.
ಕ್ಷೇತ್ರದ ಮತದಾರ ವಿವರ (2018ರಲ್ಲಿ ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ)
ಪುರುಷರು : 1,16,904
ಮಹಿಳೆಯರು : 1,05,560
ಒಟ್ಟು: 2,22,472
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications