ಮರಾಠ ಸಮಾಜದ ಬಂಧುಗಳು ಒಂದಾಗಿ, ನಾವೆಲ್ಲ ಒಗ್ಗಟ್ಟಾಗಲು ಕಾಲ ಕೂಡಿ ಬಂದಿದೆ: ಸಚಿವ ಸಂತೋಷ್ ಲಾಡ್
ಬೀದರ್, ಡಿಸೆಂಬರ್ 1: ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಕರೆ ನೀಡಿದರು. ಬೀದರ್‌ನ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಕಾರ್ಯಕ್ರಮ ವಿಶೇಷವಾಗಿದೆ. ಬೀದರ್‌ಗೆ ಹಲವಾರು ಬಾರಿ ಬಂದಿದ್ದೆ. ಆಗ ನಮ್ಮ ಸಮಾಜದ ಮುಖಂಡರು ಸಂಘಟನೆ ಮಾಡಬೇಕು, ಸಮಾಜವನ್ನು ಒಂದುಗೂಡಿಸಬೇಕು ಎಂದು ಮಾತನಾಡಿದ್ದೇವೆ. ಈಗ ಕಾಲ ಕೂಡಿ ಬಂದಿದೆ. ಎಲ್ಲಾ ಮುಖಂಡರು ಶ್ರದ್ಧೆಯಿಂದ ಕಷ್ಟಪಟ್ಟು ಸಮಾಜದ ಬಂಧುಗಳನ್ನು ಸೇರಿಸಿದ್ದೀರಾ. ಇದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ಹೇಳಿದರು.

ಛತ್ರಪತಿ ಶಿವಾಜಿ ಮಹಾರಾಜರು ಇಡೀ ವಿಶ್ವದಲ್ಲೇ ಜಾತ್ಯತೀತ ನಾಯಕರಾಗಿದ್ದರು. ಅವರು ಮೊಘಲರ ವಿರುದ್ಧ ಇದ್ದರು, ಮುಸ್ಲಿಮರ ವಿರುದ್ಧ ಅಲ್ಲ. ಇದನ್ನು ನಾವು ತಿಳಿಯಬೇಕು ಎಂದು ಹೇಳಿದರು. ಅಲ್ಲದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಹಾಯ ಮಾಡಿ ಲಂಡನ್‌ಗೆ ಹೋಗಿ ಉನ್ನತ ಅಧ್ಯಯನ ಮಾಡಲು ಸಹಾಯ ಮಾಡಿದವರು ನಮ್ಮ ಸಮಾಜದ ರಾಜರಾದ ಗಾಯಕ್ವಾಡ್ ಹಾಗೂ ಶಾಹು ಮಹಾರಾಜರು. ಅಂಬೇಡ್ಕರ್ ತಮಗೆ ದೊರೆತ ಸಹಾಯದಿಂದ ಹೊರ ದೇಶದಲ್ಲಿ ಓದಿ ಬಂದರು. ಪ್ರಪಂಚ ಕಂಡ ಬಹುದೊಡ್ಡ ಸುಧಾರಕರು ಅಂಬೇಡ್ಕರ್ ಅವರು ಎಂದರು.
ನಾನು ರಾಜ್ಯದಲ್ಲಿ ಎಲ್ಲೆಲ್ಲಿ ಹೋಗುತ್ತೀನೋ ಅಲ್ಲೆಲ್ಲ ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿ ಇದ್ದಾರೆ. ನಾನು ಪುಣ್ಯ ಮಾಡಿದ್ದೇನೆ. ಮರಾಠಾ ಸಮಾಜದಲ್ಲಿ ಹುಟ್ಟಿದ್ದೇನೆ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿದರು. ಇನ್ನು ಪ್ರತಿ ತಿಂಗಳು ನಾನು ಬರಲು ಸಿದ್ಧನಿದ್ದೇನೆ. ನಿಮಗೆ ಬೆಂಬಲ ನೀಡುತ್ತೇನೆ. ಆದರೆ, ನಾವೆಲ್ಲ ಒಂದಾಗಬೇಕು, ಒಗ್ಗಟ್ಟಾಗಬೇಕು. ಇಲ್ಲಿ ರಾಜಕೀಯ ಬೇಕಿಲ್ಲ. ಜೀಜಾಬಾಯಿ ಟ್ರಸ್ಟ್ ಆರಂಭಿಸಿ ನಡೆಸಿ. ಬೇಕಾದ ಎಲ್ಲಾ ಸಹಾಯ ಮಾಡುತ್ತೇನೆ ಎಂದು ಹೇಳಿದರು.
ಶೈಕ್ಷಣಿಕವಾಗಿ, ಆರ್ಥಿಕವಾಗಿ, ಶಕ್ತಿಯುತವಾದಾಗ ರಾಜಕೀಯ ತನ್ನಿಂತಾನೆ ಬರುತ್ತದೆ. ಅದಕ್ಕೆ ನಾವು ಇಂದು ನಿರ್ಧಾರ ಮಾಡೋಣ. ಇಂದು ಪ್ರಮಾಣ ಮಾಡೋಣ. ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧೀ ಆಗಲಿದೆ ಎಂದು ಹೇಳಿದರು.
ಇಡೀ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಮರಾಠ ಸಮಾಜದವರು ಇದ್ದಾರೆ. ನಾವು ಎಲ್ಲಾ ಸಮಾಜದ ಬಂಧುಗಳ ಜೊತೆಗೆ ಸಾಮರಸ್ಯದಿಂದ, ಅಣ್ಣ ತಮ್ಮಂದಿರಂತೆ ಬಾಳೋಣ. ಛತ್ರಪತಿ ಶಿವಾಜಿ ಮಹಾರಾಜರು, ಶಾಹು ಹಾಗೂ ಗಾಯಕ್ವಾಡ್ ಮಹಾರಾಜರು ಹೇಳಿದ ಮಾರ್ಗವನ್ನು ಅನುಸರಿಸೋಣ. ಮುಂದಿನ ದಿನಗಳಲ್ಲಿ ಟ್ರಸ್ಟ್ ಮೂಲಕ ಅಂಬೇಡ್ಕರ್ ಹಾಗೂ ಬಸವಣ್ಣನವರ ವಿಚಾರವನ್ನು ತಿಳಿಸೋಣ ಎಂದು ವಿವರಿಸಿದರು.
ನಾವೆಲ್ಲ ಇಲ್ಲಿ ಸೇರಿರುವ ಉದ್ದೇಶವೇ ಸಮಾಜವನ್ನು ಕಟ್ಟಬೇಕು. ಬಡ ಸಮಾಜ ಬಂಧುಗಳನ್ನು ಹುಡುಕಬೇಕು, ಅವರನ್ನು ಓದಿಸಬೇಕು. ಅವರಿಗೆ ಸಹಾಯ ಮಾಡಲಿಕ್ಕಾಗಿ. ನಾವೆಲ್ಲ ಈಗ ಒಂದಾಗಿದ್ದೇವೆ. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ. ನಾಲ್ಕು ಬಾರಿ ಶಾಸಕನಾಗಿ, ಸಚಿವನಾಗಿದ್ದೇನೆ. ನನಗೆ ದೇವರು ಒಂದು ಅವಕಾಶ ನೀಡಿದ್ದಾನೆ. ನಮ್ಮ ಸಮಾಜದ ಜೊತೆಗೆ ರಾಜ್ಯದಲ್ಲಿನ ಎಲ್ಲಾ ಶೋಷಿತ ಸಮಾಜದ ಬಂಧುಗಳಿಗೂ ಒಳ್ಳೆಯದಾಗಬೇಕು ಎಂಬುದೇ ನನ್ನ ಅಭಿಲಾಷೆ ಎಂದರು.
ದೇವರು ಎಲ್ಲಿಯವರೆ ಶಕ್ತಿ ಕೊಟ್ಟಿರುತ್ತಾನೆಯೋ ಅಲ್ಲಿಯವರೆಗೆ ಶೋಷಿತರ ಪರವಾಗಿ ಕೆಲಸ ಮಾಡುತ್ತೇನೆ. ಬಡವರ ಕಣ್ಣೀರು ಒರೆಸಲು ರಾಜಕಾರಣದಲ್ಲಿ ಇದ್ದೇನೆ. ನನಗೆ ದೊಡ್ಡ ಜವಾಬ್ದಾರಿ ಇದೆ. ಅದಕ್ಕಾಗಿ ನೀವೆಲ್ಲ ಸಹಕಾರ ನೀಡಬೇಕು. ನಿಮ್ಮೆಲ್ಲ ಬೆಂಬಲದಿಂದ ನಾನು ಇಂದು ನಿಂತಿದ್ದೇನೆ ಎಂದು ಹೇಳಿದರು.
ಈ ಸಮಾವೇಶದ ಮೂಲಕ ಮೊದಲ ಬಾರಿಗೆ ಒಂದು ಪ್ರಯತ್ನ ಮಾಡಿದ್ದೇವೆ. ಇಷ್ಟು ಯಶಸ್ಸು ಸಾಧಿಸುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಈ ಕಾರ್ಯಕ್ರಮ ನನಗೆ ಸಾಕಷ್ಟು ಶಕ್ತಿ ನೀಡಿದೆ. ನಿಮ್ಮ ಆಶೀರ್ವಾದ ಇರಲಿ. ಮುಂದಿನ ದಿನಗಳಲ್ಲಿ ಜೀಜಾಬಾಯಿ ಟ್ರಸ್ಟ್ ಉತ್ತರ ಕರ್ನಾಟಕದಲ್ಲಿ ನಂಬರ್ ಒನ್ ಟ್ರಸ್ಟ್ ಆಗಲು ಸಹಾಯ ಮಾಡುತ್ತೇನೆ. ಹಂತ-ಹಂತವಾಗಿ ಕಾರ್ಯಕ್ರಮ ಮಾಡೋಣ ಎಂದು ಕರೆ ನೀಡಿದರು.
ಕೇವಲ ಮೇಳ ಮಾಡಿ ಜನರನ್ನು ಸೇರಿಸಿದರೆ ಪ್ರಯೋಜನ ಇಲ್ಲ. ನಾವು ಸೇರುವ ಉದ್ದೇಶ ನಮ್ಮ ಸಮಾಜದ ಬಡವರಿಗೆ ಅನುಕೂಲವಾಗಬೇಕು. ಇದು ರಾಜಕೀಯ ಸಮಾವೇಶ ಅಲ್ಲ. ಶಕ್ತಿ ಪ್ರದರ್ಶನ ಅಲ್ಲ. ಇದು ಸಮಾಜದ ಒಗ್ಗಟ್ಟಿನ ಪ್ರದರ್ಶನ. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದಾಗಬೇಕು ಎಂದರು.
ನಮ್ಮ ಸಮಾಜದ ಯುವಕರು ಛತ್ರಪತಿ ಶಿವಾಜಿ ಮಹಾರಾಜರ ವಿಚಾರಗಳನ್ನು ಓದಬೇಕು. ಆಲೋಚನೆ ಮಾಡಿ. ಸಮಾಜದ ಮುಖಂಡರು ಎಲ್ಲಾ ಪಕ್ಷಗಳನ್ನು ಬದಿಗೊತ್ತಿ ನಾನು ಮರಾಠ ಎಂಬ ಭಾವನೆ ಎಂದುಕೊಂಡು ಬಂದಿದ್ದಾರೆ ಎಂದರು. ಅಲ್ಲದೆ, ಸಮಾವೇಶಕ್ಕೂ ಮುನ್ನ ಬೀದರ್‌ನ ಶಿವಾಜಿ ವೃತ್ತದ ಬಳಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಸಮಾಜ ಬಾಂಧವರು ಸಚಿವ ಲಾಡ್ ಅವರನ್ನು ಅದ್ದೂರಿಯಾಗಿ ಸ್ವಾಗತ ಕೋರಿದರು. ಛತ್ರಪತಿ ಶಿವಾಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಲಾಡ್ ಅವರು ನಂತರ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications