• search
 • Live TV
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಸವಕಲ್ಯಾಣದಲ್ಲಿ ನೆರವೇರಿದ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ

By ಬೀದರ್ ಪ್ರತಿನಿಧಿ
|

ಬೀದರ್, ಸೆಪ್ಟೆಂಬರ್ 25: ಕೊರೊನಾ ಸೋಂಕಿಗೆ ತುತ್ತಾಗಿ ನಿನ್ನೆ ಮೃತಪಟ್ಟಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ಅಂತ್ಯಕ್ರಿಯೆಯನ್ನು ಇಂದು ಬೀದರ್ ನಲ್ಲಿ ನೆರವೇರಿಸಲಾಯಿತು.

ಇಂದು ಮಧ್ಯಾಹ್ನ ಬೀದರ್ ನ ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್ ನಲ್ಲಿ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

ಸಿದ್ದರಾಮಯ್ಯ ಆಪ್ತ ಬಿ. ನಾರಾಯಣರಾವ್ ಪರಿಚಯ

ಸೆಪ್ಟೆಂಬರ್ 1ರಂದು ನಾರಾಯಣ ರಾವ್ ಅವರಿಗೆ ಕೋವಿಡ್ ಸೋಂಕು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಸೋಂಕಿಗೆ ತುತ್ತಾಗಿದ್ದ ನಾರಾಯಣ ರಾವ್ ಅವರನ್ನು ಈಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಿಂದ ಅವರಿಗೆ ಚಿಕಿತ್ಸೆ ಕೊಡಲಾಗುತ್ತಿತ್ತು.

   Karnataka ಮತ್ತೊಮ್ಮೆ Lockdown ಆಗಲಿದೆಯೇ ? ಕಂಪ್ಲೀಟ್ ವಿವರ | Oneindia Kannada

   ಕೊರೊನಾ ಸೋಂಕಿನ ಜೊತೆ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇದ್ದು, ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಆರೋಗ್ಯಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇ 65 ವರ್ಷದ ನಾರಾಯಣರಾವ್‌ ಅವರು ನಿನ್ನೆ ಸಂಜೆ ನಿಧನರಾಗಿದ್ದರು.

   English summary
   MLA B Narayan Rao funeral took place at Basavakalyan in bidar Today. He passed away yesterday at bengaluru manipal hospital due to coronavirus,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X