ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದರ್ ಗಡಿಯಲ್ಲಿ ಕಣ್ಗಾವಲು; ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ

|
Google Oneindia Kannada News

ಬೀದರ್, ಆಗಸ್ಟ್ 03; ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. 72 ಗಂಟೆಯೊಳಗಿನ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಇದ್ದರೆ ಮಾತ್ರ ಗಡಿಯಲ್ಲಿ ಕರ್ನಾಟಕದೊಳಗೆ ಬಿಡಲಾಗುತ್ತದೆ, ಇಲ್ಲವೇ ವಾಪಸ್ ಕಳಿಸಲಾಗುತ್ತಿದೆ.

ಬೀದರ್ ಗಡಿಯಲ್ಲಿ ಸರ್ಕಾರದ ಸೂಚನೆ ಅನ್ವಯ ಕಣ್ಗಾವಲು ವಹಿಸಲಾಗಿದೆ. ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟೀವ್ ವರದಿಯೊಂದಿಗೆ ಬರುವ ಅಂತಾರಾಜ್ಯ ಪ್ರಯಾಣಿಕರಿಗೆ ಮಾತ್ರ ಜಿಲ್ಲೆಯ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಇಳಿಕೆ; ಅಸಲಿ ಕಥೆಯೇ ಬೇರೆ ಬೀದರ್ ಜಿಲ್ಲೆಯಲ್ಲಿ ಕೋವಿಡ್ ಇಳಿಕೆ; ಅಸಲಿ ಕಥೆಯೇ ಬೇರೆ

ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಪ್ರತಿ ವಾಹನವನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ನೆಗೆಟಿವ್ ವರದಿ ಇಲ್ಲದ ವಾಹನಗಳನ್ನು ವಾಪಸ್ ಕಳಿಸಲಾಗುತ್ತಿದೆ.

ದಿಢೀರ್ ಕೋವಿಡ್ ಪರೀಕ್ಷೆ ನಿಲ್ಲಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: ಕೇರಳಿಗರ ಆಕ್ರೋಶ!ದಿಢೀರ್ ಕೋವಿಡ್ ಪರೀಕ್ಷೆ ನಿಲ್ಲಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ: ಕೇರಳಿಗರ ಆಕ್ರೋಶ!

Negative RTPCR Report Must For People Entering Karnataka From Bidar

ಎನ್. ಇ. ಕೆ. ಎಸ್. ಆರ್. ಟಿ. ಸಿ. ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು, ಅಂತರರಾಜ್ಯ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟೀವ್ ವರದಿ ತಂದವರಿಗೆ ಮಾತ್ರ ಟಿಕೆಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಬಳ್ಳಾರಿ; ಕೋವಿಡ್ 3ನೇ ಅಲೆ ತಡೆಗೆ ಜಿಲ್ಲಾಡಳಿತದ ಸಿದ್ಧತೆಗಳು ಬಳ್ಳಾರಿ; ಕೋವಿಡ್ 3ನೇ ಅಲೆ ತಡೆಗೆ ಜಿಲ್ಲಾಡಳಿತದ ಸಿದ್ಧತೆಗಳು

ಚೆಕ್‌ಪೋಸ್ಟ್ ಸ್ಥಾಪನೆ; ಅಕ್ರಮವಾಗಿ ನುಸುಳುವಿಕೆ ತಡೆಯಲು ಬಸವಕಲ್ಯಾಣ ತಾಲೂಕಿನಲ್ಲಿ 2, ಭಾಲ್ಕಿ ತಾಲೂಕಿನಲ್ಲಿ 2 ಹಾಗೂ ಔರಾದ್ (ಬಿ) ತಾಲೂಕಿನಲ್ಲಿ 4 ಚೆಕ್ ಪೋಸ್ಟ್‌ಗಳನ್ನು ತೆರೆದು ಗಡಿರಾಜ್ಯದಿಂದ ಬರುತ್ತಿರುವ ಪ್ರಯಾಣಿಕರನ್ನು ಪರಿಶೀಲಿಸಿ ಬಿಡಲಾಗುತ್ತಿದೆ.

2232 ವಾಹನಗಳ ಪರಿಶೀಲನೆ; ಕಳೆದ 15 ದಿನಗಳಲ್ಲಿ 19320 ಜನರನ್ನು ಹಾಗೂ 2232 ವಾಹನಗಳನ್ನು ಪರಿಶೀಲಿಸಲಾಗಿದೆ. ಇದೇ ಸಂದರ್ಭದಲ್ಲಿ ಕೋವಿಡ್-19 ನೆಗೆಟೀವ್ ವರದಿ ತರಹದ 791 ಜನರಿಗೆ ಪರೀಕ್ಷೆ ಮಾಡಿಸಲಾಗಿದ್ದು, ಒಬ್ಬ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿದೆ.

ಕೋವಿಡ್ ಮೂರನೇ ಅಲೆ ತಡೆಯಲು ಬೀದರ್ ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತೆಗಳನ್ನು ಕೈಗೊಂಡಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಜಿಲ್ಲೆಗೆ ಆಗಮಿಸುವ ಸಾರ್ವಜನಿಕರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಿ, ಬೀದರ್ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿಯನ್ನು ಮಾಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ. ಜಿ. ರೆಡ್ಡಿ ಬಸವಕಲ್ಯಾಣ, ಭಾಲ್ಕಿ ಸೇರಿದಂತೆ ವಿವಿಧೆಡೆ ಇರುವ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಲ್ಲಾ ಚೆಕ್‌ಪೋಸ್ಟ್‌ಗಳ ಮೇಲ್ವಿಚಾರಣೆ ಪ್ರತಿದಿನವೂ ಕೈಗೊಳ್ಳಲಾಗುತ್ತಿದೆ.

ಉಸ್ತುವಾರಿ ಕಾರ್ಯದರ್ಶಿ ಭೇಟಿ; ಬೀದರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಆಗಸ್ಟ್ 4ರಂದು ಬೀದರ್ ಜಿಲ್ಲೆಯ ಪ್ರವಾಸವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಕೋವಿಡ್-19 ನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಬೀದರ್ ಜಿಲ್ಲಾ ಮಟ್ಟದ ಅಧಿಕಾರಿಗಳೊಡನೆ ಸಭೆ ನಡೆಸಲಿದ್ದಾರೆ.

ಪ್ರಸ್ತುತ ಬೀದರ್ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಂತರರಾಜ್ಯದಿಂದ ಪ್ರಯಾಣ ಮಾಡುವ ಜನರಿಂದ ಜಿಲ್ಲೆಯಲ್ಲಿ ಸೋಂಕು ಹೆಚ್ಚಳವಾಗಬಾರದು ಎಂದು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಸೋಮವಾರದ ವರದಿಯಂತೆ ಬೀದರ್‌ ಜಿಲ್ಲೆಯಲ್ಲಿ 3 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 15. ಜಿಲ್ಲೆಯ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 24270. ಜಿಲ್ಲೆಯಲ್ಲಿ ಇದುವರೆಗೂ 396 ಜನರು ಮೃತಪಟ್ಟಿದ್ದಾರೆ.

ಲಸಿಕೆ ಗುರಿ; ಬೀದರ್ ಜಿಲ್ಲೆಯಲ್ಲಿ ಆಗಸ್ಟ್ 31ರ ತನಕ 7.5 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಬೇಕು ಎಂದು ಗುರಿ ನಿಗದಿ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಲಸಿಕೆ ನೀಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

Recommended Video

ರಾಜ್ಯದಲ್ಲಿ ಕೊರೊನಾ ಹೆಚ್ಚಳ ಭೀತಿ ಹಿನ್ನೆಲೆ ನೈಟ್‌ ಕರ್ಫ್ಯೂ ಬಗ್ಗೆ ಚಿಂತನೆ

English summary
As per Karnataka government circular surveillance measure taken in the interstate border at Bidar district. People must carry a negative RT-PCR certificate to enter state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X