• search
  • Live TV
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮರಾಠ ಸಮಾಜದ ಹಿತ ಕಾಪಾಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ!

|

ಬೀದರ್, ನ. 15: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಬೇಕು ಎನ್ನುವ ಬಹುದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಂದಿಸಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿರುವುದರಿಂದ ತಮಗೆ ಸಂತಸವಾಗಿದೆ ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ಮರಾಠ ಸಮಾಜದ ಕೊಡುಗೆ ಕೂಡ ಅಪಾರವಾಗಿದೆ. ನಾಡಿನ ಗಡಿ ಜಲ ರಕ್ಷಣೆ ವಿಷಯದಲ್ಲಿ ಈ ಸಮಾಜದವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಸಮುದಾಯದವರ ಏಳ್ಗೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ 50 ಕೋಟಿ ರೂ ಅನುದಾನವನ್ನು ಮೀಸಲಿಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಬಸವಕಲ್ಯಾಣಕ್ಕೆ ಬಿಎಸ್‌ವೈ ಪುತ್ರ ಬಿ.ವೈ. ವಿಜಯೇಂದ್ರ ಭೇಟಿ ಹಿಂದಿನ ರಹಸ್ಯ!

ಛತ್ರಪತಿ ಶಿವಾಜಿ ಮಹಾರಾಜರು ಹಿಂದೂ ಧರ್ಮ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿರುವ ಮರಾಠ ಸಮಾಜ ಬಾಂಧವರ ಹಿತ ಕಾಪಾಡಲು ಸರ್ಕಾರವು ಬದ್ಧವಾಗಿದೆ. ಈ ಸಮುದಾಯದವರಿಗೆ 2ಎ ಮೀಸಲಾತಿ ನೀಡಬೇಕು ನೀಡಬೇಕು ಎನ್ನುವ ಬೇಡಿಕೆ ಈಡೇರಿಕೆಗೂ ಕೂಡ ಮುಂದಿನ ದಿನಗಳಲ್ಲಿ ಸ್ಪಂದಿಸಲಿದೆ ಎಂದು ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.

English summary
Minister for Animal Husbandry, Hajj and Waqfa and Bidar District Prabhu Chauhan welcomed state bjp government's decision to set up the Maratha Development Authority. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X