ಬೀದರ್‌ನಿಂದ ಲೋಕಸಭೆಗೆ ರಾಹುಲ್ ಗಾಂಧಿ ಸ್ಪರ್ಧೆ?

ಬೆಂಗಳೂರು, ಆಗಸ್ಟ್ 13 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಬೀದರ್‌ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಬೀದರ್‌ನಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸುವ ಬಗ್ಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗಳು ನಡೆಯುತ್ತಿವೆ.

ಸೋಮವಾರ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಬೀದರ್‌ನಲ್ಲಿ ಅವರು ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೀದರ್‌ನಿಂದ ರಾಹುಲ್ ಗಾಂಧಿ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.

ಬೀದರ್ ಕ್ಷೇತ್ರ ಸದ್ಯ ಬಿಜೆಪಿಯ ವಶದಲ್ಲಿದೆ. ಭಗವಂತ ಖೂಬಾ ಅವರು ಕ್ಷೇತ್ರದ ಸಂಸದರು. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸ್ಪರ್ಧೆ ಮಾಡಿದ್ದರು. 367,068 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಲೋಕಸಭೆಗೆ ಕರ್ನಾಟಕದಿಂದ ಸ್ಪರ್ಧೆ

ಲೋಕಸಭೆಗೆ ಕರ್ನಾಟಕದಿಂದ ಸ್ಪರ್ಧೆ

ಬೀದರ್ ಲೋಕಸಭಾ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸ್ಪರ್ಧೆ ಮಾಡಿದ್ದರು. ಧರಂ ಸಿಂಗ್ ಅವರ ನಿಧನದ ಬಳಿಕ ಅವರ ಪುತ್ರ ವಿಜಯ್ ಸಿಂಗ್ ಹೆಸರು ಕೇಳಿ ಬಂದಿತ್ತು. ಆದರೆ, ಈಗ ರಾಹುಲ್ ಗಾಂಧಿ ಸ್ಪರ್ಧಿಸಬಹುದು ಎಂಬ ಸುದ್ದಿಗಳು ಹಬ್ಬಿವೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. 2019ರ ಚುನಾವಣೆಯಲ್ಲಿ ಅವರು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದು ಎಂಬ ಸುದ್ದಿಗಳು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿವೆ.

ಹೆಚ್ಚು ಸೀಟು ಗೆಲ್ಲುವ ತಂತ್ರ

ಹೆಚ್ಚು ಸೀಟು ಗೆಲ್ಲುವ ತಂತ್ರ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಅವರನ್ನು ಬೀದರ್‌ನಿಂದ ಚುನಾವಣಾ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಿದ್ದಾರೆ. ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಮಾತುಕತೆ ನಡೆಸಿದ್ದಾರೆ.

ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡಿದರೆ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬಹುದು ಎಂಬ ತಂತ್ರ ಇದರಲ್ಲಿ ಅಡಗಿದೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 9 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಈ ಬಾರಿ 20+ ಕ್ಷೇತ್ರದಲ್ಲಿ ಜಯಗಳಿಸುವ ಗುರಿ ಇದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯ

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯ

ಕಾಂಗ್ರೆಸ್‌ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ಇಲ್ಲಿ ಸರ್ಕಾರ ರಚನೆ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿಯೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿದೆ.

ರಾಹುಲ್ ಗಾಂಧಿ ಬೀದರ್‌ನಿಂದ ಸ್ಪರ್ಧೆ ಮಾಡಿದರೆ ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ರಾಯಚೂರು ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿಯೂ ಪಕ್ಷದ ಬಲ ಹೆಚ್ಚಲಿದೆ. ಚುನಾವಣೆಯಲ್ಲಿಯೂ ಗೆಲ್ಲಬಹುದು ಎಂಬ ಲೆಕ್ಕಾಚಾರವಿದೆ.

ಬೀದರ್‌ ಬಿಜೆಪಿ ವಶದಲ್ಲಿದೆ

ಬೀದರ್‌ ಬಿಜೆಪಿ ವಶದಲ್ಲಿದೆ

ಬೀದರ್ ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಭಗವಂತ ಖೂಬಾ. 2014ರ ಚುನಾವಣಯಲ್ಲಿ 459290 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. 2019ರ ಚುನಾವಣೆಯಲ್ಲಿಯೂ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವ ಕಲ್ಯಾಣ, ಹುಮ್ನಾಬಾದ್, ಬೀದರ್ ಮತ್ತು ಭಾಲ್ಕಿಯಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಔರಾದ್ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿದೆ.

ಬೀದರ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ತವರು ಕ್ಷೇತ್ರ. ಆದ್ದರಿಂದ, ವಿಧಾನಸಭೆ ಚುನಾವಣೆ ಫಲಿತಾಂಶ ಮತ್ತು ಈಶ್ವರ ಖಂಡ್ರೆ ಅವರ ಪ್ರಭಾವದಿಂದ ಕಾಂಗ್ರೆಸ್‌ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಕಾಂಗ್ರೆಸ್‌ ಲೆಕ್ಕಾಚಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+