• search
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆ.13ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿ, ಕಾರ್ಯಕರ್ತರಿಗೆ ಅಭಿನಂದನೆ

By Gururaj
|

ಬೆಂಗಳೂರು, ಆಗಸ್ಟ್ 05 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಆ.13ರ ಸೋಮವಾರ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೀದರ್‌ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ : ಜೆಡಿಎಸ್‌ಗೆ 6 ಸೀಟು!

Rahul Gandhi to visit Karnataka on August 13, 2018

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಚರ್ಚೆ ನಡೆದಿದ್ದು, ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲಾ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಬೀದರ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ತವರು ಜಿಲ್ಲೆಯಾಗಿದೆ.

ಅಮಿತ್ ಶಾ ರಾಜ್ಯ ಭೇಟಿ ರದ್ದು, ಯಡಿಯೂರಪ್ಪಗೆ ಹೆಚ್ಚಿನ ಪವರ್!

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಗಾಂಧಿ 20ಕ್ಕೂ ಹೆಚ್ಚು ದಿನಗಳ ಕಾಲ ರಾಜ್ಯದಲ್ಲಿ ಸಂಚಾರ ನಡೆಸಿದ್ದರು. ಈಗ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕವಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

ಕರ್ನಾಟಕದ ಕಾಂಗ್ರೆಸ್‌ ನಾಯಕರೊಂದಿಗೆ 2019ರ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ, ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎಂದು ರಾಹುಲ್ ನಾಯಕರಿಗೆ ಸೂಚನೆ ನೀಡಲಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
AICC president Rahul Gandhi will visit Karnataka on August 13, 2018 and he will address the rally in Bidar. Rahul Gandhi visiting Karnataka 1st time to state after Congress-JD(S) alliance government comes to power.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more