ಬೀದರ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ : ಪರಮೇಶ್ವರ ಹೇಳಿದ್ದೇನು?

ಬೆಂಗಳೂರು, ಆಗಸ್ಟ್ 14 : 'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಬೀದರ್ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಪರಮೇಶ್ವರ ಅವರು, 'ರಾಹುಲ್ ಗಾಂಧಿ ಅವರು ಬೀದರ್‌ನಿಂದ ಸ್ಪರ್ಧೆ ಮಾಡುವುದಿಲ್ಲ. ಅಂತಹ ಯಾವುದೇ ಚರ್ಚೆ ಪಕ್ಷದ ಮಟ್ಟದಲ್ಲಿಯೂ ನಡೆದಿಲ್ಲ' ಎಂದು ಹೇಳಿದರು.

'ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು, ಬೀದರ್‌ನಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದರೆ ಗೆಲ್ಲಿಸುತ್ತೇವೆ ಎಂದು ಹೇಳಿದ್ದರು. ಆದರೆ, ಅದು ಅವರ ವಯಕ್ತಿಕ ಅಭಿಪ್ರಾಯವಾಗಿದೆ. ಸ್ಪರ್ಧೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ' ಎಂದರು.

Rahul Gandhi will not contest from Bidar says Parameshwara

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್‌ನಲ್ಲಿ ಸೋಮವಾರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಜೊತೆಗೆ ಬೀದರ್‌ನಿಂದಲೂ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಬಿಜೆಪಿಯ ಭಗವಂತ ಖೂಬಾ ಬೀದರ್ ಕ್ಷೇತ್ರದ ಹಾಲಿ ಸಂಸದರು. 2014ರ ಚುನಾವಣೆಯಲ್ಲಿ 459290 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸ್ಪರ್ಧೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+