ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಿಮ್ಸ್ ಮೂಲ ಸೌಕರ್ಯಕ್ಕೆ ಹೆಚ್ಚುವರಿ ಹಣ ಬಿಡುಗಡೆ

|
Google Oneindia Kannada News

ಬೀದರ್, ಜೂನ್ 21: "ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕೃತ 10.77 ಕೋಟಿ ರೂ. ಅನುದಾನ ನೀಡಲು ಸೋಮವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ,'' ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

"ಕೋವಿಡ್ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ರಕ್ಷಣೆಗೆ ಬ್ರಿಮ್ಸ್ ಬೆನ್ನೆಲುಬಾಗಿತ್ತು. ಇದರ ಉನ್ನತೀಕರಣ ಮತ್ತು ಅಭಿವೃದ್ಧಿ ಈ ಭಾಗದ ಜನರ ಆರೋಗ್ಯ ಸೇವೆಯನ್ನು ಹೆಚ್ಚು ಬಲಪಡಿಸಿದಂತಾಗುತ್ತದೆ,'' ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಇಳಿಕೆ; ಅಸಲಿ ಕಥೆಯೇ ಬೇರೆಬೀದರ್ ಜಿಲ್ಲೆಯಲ್ಲಿ ಕೋವಿಡ್ ಇಳಿಕೆ; ಅಸಲಿ ಕಥೆಯೇ ಬೇರೆ

"ಭಾರತ ಸರ್ಕಾರವು ಕೇಂದ್ರ ಪರಿಷ್ಕೃತ ಯೋಜನೆ ಅಡಿಯಲ್ಲಿ 36 ಕೋಟಿ ರೂ. ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣ ಕಾಮಗಾರಿಯನ್ನು 7.50 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮತ್ತು 15.22 ಕೋಟಿ ರೂ. ಉಪಕರಣಗಳನ್ನು ಖರೀದಿಸಲು ಒಟ್ಟು 17.50 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೊದನೆ ನೀಡಿದೆ. ಈ ಪೈಕಿ ಕೇಂದ್ರ ಹಾಗೂ ರಾಜ್ಯದ ಪಾಲು ಸೇರಿದಂತೆ 15.22 ಕೋಟಿ ರೂ. ಈಗಾಗಲೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ,'' ಎಂದು ಮಾಹಿತಿ ನೀಡಿದರು.

Bidar: Release of Rs 10 Crore Additional Grant For BRIMS Infrastructure: Minister Prabhu Chouhan

"ಈಗಾಗಲೇ ಸೀಟುಗಳ ಮಿತಿಯನ್ನು 100 ರಿಂದ 150ಕ್ಕೆ ಹೆಚ್ಚಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ಹಾಸ್ಟೆಲ್‍ಗಳ ಉನ್ನತೀಕರಣ, ಎಂಸಿಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಸಹಕಾರಿಯಾಗಿದೆ.''

Bidar: Release of Rs 10 Crore Additional Grant For BRIMS Infrastructure: Minister Prabhu Chouhan

Recommended Video

ವರನಟ ಡಾ.ರಾಜ್ ಕುಮಾರ್ ಹೆಸರಲ್ಲಿ ದೊಡ್ಡ ಎಡವಟ್ಟು ಮಾಡಿದ ಗೂಗಲ್!! | Oneindia Kannada

"ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹಾಗೂ ಈ ಭಾಗದ ಸಂಸದರಿಗೆ ಧನ್ಯವಾದ ತಿಳಿಸುತ್ತೇನೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ,'' ಎಂದು ಮಾಧ್ಯಮ ಪ್ರಕಟಣೆ ಮೂಲಕ ಪಶುಸಂಗೋಪನೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

English summary
Minister Prabhu Chauhan said additional grant was provided for the construction of centralized library and examination rooms at Bidar Institute of Medical Sciences (BRIMS).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X