ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಎ ವಿರುದ್ಧ ವಿದ್ಯಾರ್ಥಿಗಳ ನಾಟಕ ಮಾಡಿದ್ದಕ್ಕೆ ಬಿತ್ತು ಕೇಸ್!

|
Google Oneindia Kannada News

ಬೀದರ್, ಜನವರಿ.28: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದ್ದಕ್ಕೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ನ ಪ್ರತಿಷ್ಠಿತ ಶಾಹಿನ್ ಕಾಲೇಜು ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದ್ದರು. ಈ ನಾಟಕದಲ್ಲಿ ಪೌರತ್ವ ತಿದ್ದುಪಡಿ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಉಲ್ಲೇಖಿಸಲಾಗಿತ್ತು.

ಸಿಎಎ ವಿರುದ್ಧ ಹೋರಾಟ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕೇ?ಸಿಎಎ ವಿರುದ್ಧ ಹೋರಾಟ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕೇ?

ಸಿಎಎ ವಿರೋಧಿಸಿದ್ದಷ್ಟೇ ಅಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ನಿಲೇಶ್ ಎಂಬುವವರು ಈ ಸಂಬಂಧ ಬೀದರ್ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಶಾಹಿನ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Students Drama Against Citizenship Amendment Act, FIR Filed

ಪ್ರಧಾನಮಂತ್ರಿ ಬಗ್ಗೆ ಅವಹೇಳನಕ್ಕೆ ಮಕ್ಕಳ ಬಳಕೆ:

ದೇಶಾದ್ಯಂತ ಸಿಎಎ ಪರ ಮತ್ತು ವಿರೋಧವಾಗಿ ಪ್ರತಿಭಟನೆಗಳು ನಡೆಯುತ್ತಿದ್ದು, ಇಂಥ ಸಂದರ್ಭದಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಲು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನು, ಇತ್ತೀಚಿಗಷ್ಟೇ ಕಾಲೇಜು ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

English summary
Students Drama Against Citizenship Amendment Act, Bidar Police Filed FIR Against College Principal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X