ಬಸವಕಲ್ಯಾಣ; ಉಪ ಚುನಾವಣಾ ಕಣಕ್ಕಿಳಿದ ಸ್ವಾಮೀಜಿ ಬಳಿ 45 ಕೆಜಿ ಚಿನ್ನ!
ಬಸವಕಲ್ಯಾಣ, ಮಾರ್ಚ್ 25; ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಸ್ವಾಮೀಜಿಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಬಳಿ 45 ಕೆ. ಜಿ. ಚಿನ್ನ ಇರುವುದಾಗಿ ಅವರು ಘೋಷಣೆ ಮಾಡಿದ್ದಾರೆ.
ಬರಡೋಲಾದ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಹಿಂದೂಸ್ತಾನ್ ಜನತಾ ಪಕ್ಷದಿಂದ ಬಸವಕಲ್ಯಾಣ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಇದುವರೆಗೂ 25 ಚುನಾವಣೆಗಳಲ್ಲಿ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಸ್ಪರ್ಧಿಸಿದ್ದಾರೆ. ಈ ಹಿಂದೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿಯೂ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕಿಳಿದಿದ್ದರು.
ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಗ್ರಾಮ ಪಂಚಾಯಿತಿ, ಲೋಕಸಭೆ, ರಾಜ್ಯಸಭೆ ಚುನಾವಣೆಗೂ ಸ್ಪರ್ಧಿಸಿ ಸೋಲುಕಂಡಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಗೋವಾ ವಿಧಾನಸಭೆ ಚುನಾವಣೆಯಲ್ಲೂ ಕಣಕ್ಕಿಳಿದಿದ್ದರು.

ವಿಜಯಪುರ ಜಿಲ್ಲೆಯವರು
ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ವಿಜಯಪುರ ಜಿಲ್ಲೆಯ ಬರಡೋಲ ಮೂಲದವರು. ಧಾರವಾಡದಲ್ಲಿ ಬಿಕಾಂ ವ್ಯಾಸಂಗ ಮಾಡಿದ್ದಾರೆ. ಪತ್ನಿ ಕವಿತಾ ಬಳಿ 23 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 4 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳಿವೆ ಎಂದು ಅಫಿಡೆವಿಟ್ ಸಲ್ಲಿಕೆ ಮಾಡಿದ್ದಾರೆ.

26ನೇ ಬಾರಿ ಚುನಾವಣಾ ಕಣಕ್ಕೆ
ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಇದುವರೆಗೂ 25 ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಇದು ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ 26ನೇ ಚುನಾವಣೆಯಾಗಿದೆ. ಸ್ವಾಮೀಜಿಗಳ ಪೂರ್ವಶ್ರಮದ ಹೆಸರು ದೀಪಕ್. ಹಿಂದೂಸ್ತಾನ್ ಜನತಾ ಪಕ್ಷದಿಂದ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದಿದ್ದರು
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದ್ದರು. ಯಾರೂ ಸಹ ಟಿಕೆಟ್ ನೀಡದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಮ್ ಆದ್ಮಿ ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿದು ಸೋತಿದ್ದರು.
Recommended Video

ಬೇರೆ-ಬೇರೆ ರಾಜ್ಯಗಳಲ್ಲಿ ಕಣಕ್ಕೆ
ಶ್ರೀ ವೆಂಕಟೇಶ್ವರ್ ಮಹಾ ಸ್ವಾಮೀಜಿ ಹಲವಾರು ರಾಜ್ಯಗಳಲ್ಲಿಯೂ ಚುನಾವಣಾ ಕಣಕ್ಕಿಳಿಸಿದ್ದಾರೆ. ಗ್ರಾಮ ಪಂಚಾಯಿತಿ, ಲೋಕಸಭೆ, ರಾಜ್ಯಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಸ್ವಾಮೀಜಿಗಳು, ಮಹಾರಾಷ್ಟ್ರ, ಗುಜರಾತ್, ಗೋವಾ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ ಸೋಲು ಕಂಡಿದ್ದಾರೆ.












Click it and Unblock the Notifications