ಬೀದರ್; ಹುಟ್ಟು ಹಬ್ಬದ ಸಂಭ್ರಮ, ತಲ್ವಾರ್ ಹಿಡಿದು ಡ್ಯಾನ್ಸ್
ಬೀದರ್, ಜೂನ್ 03; ಕೋವಿಡ್ ಹರಡುವಿಕೆ ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ನಮಗೂ ಲಾಕ್‌ಡೌನ್‌ಗೂ ಸಂಬಂಧವಿಲ್ಲ ಎಂಬತೆ ವರ್ತಿಸುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಯುವಕರ ಗುಂಪು ಹುಟ್ಟುಹಬ್ಬ ಆಚರಣೆ ಮಾಡಿದೆ. ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡದೇ ಡ್ಯಾನ್ಸ್ ಮಾಡಿದೆ. ಈ ವೇಳೆ ಕೈಯಲ್ಲಿ ತಲ್ವಾರ್ ಹಿಡಿದು ಕುಣಿದಿರುವ ವಿಡಿಯೋ ವೈರಲ್ ಆಗಿದೆ.
ಬೀದರ್ ಜಿಲ್ಲೆಯಲ್ಲಿ ಕೋವಿಡ್ ಇಳಿಕೆ; ಅಸಲಿ ಕಥೆಯೇ ಬೇರೆ
ಪೊಲೀಸರು ನಗರ ಪ್ರದೇಶಗಳಲ್ಲಿ ಓಡಾಟವನ್ನೂ ಸಂಪೂರ್ಣವಾಗಿ ನಿಯಂತ್ರಿಸಿದ್ದಾರೆ. ಅನಗತ್ಯವಾಗಿ ಸಂಚಾರ ನಡೆಸಿದರೆ ಬೈಕ್ ವಶಕ್ಕೆ ಪಡೆಯಲಾಗುತ್ತದೆ. ಆದರೆ ಗ್ರಾಮೀಣ ಭಾಗದಲ್ಲಿ ಲಾಕ್‌ಡೌನ್ ನೆಪ ಮಾತ್ರ ಎಂಬಂತಾಗಿದೆ.
ಬೀದರ್: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ನಮಾಜ್
ಗುಣತೀರ್ಥವಾಡಿ ಗ್ರಾಮದಲ್ಲಿ ಯುವಕನೊಬ್ಬನ ಹುಟ್ಟು ಹಬ್ಬಕ್ಕೆ ಹತ್ತಾರು ಯುವಕರು ಸೇರಿದ್ದಾರೆ. ಬಳಿಕ ಡಿಜೆ ಸೌಂಡ್‌ಗೆ ನಾ ಮುಂದು, ತಾ ಮುಂದು ಎಂದು ಹೆಜ್ಜೆ ಹಾಕಿದ್ದಾರೆ. ಈ ವೇಳೆ ಕೈಯಲ್ಲಿ ತಲ್ವಾರ್ ಹಿಡಿದು ಸುತ್ತಲು ತಿರುಗಿಸಿ ಪುಡಾಂಟ ಮೆರೆದಿದ್ದಾರೆ. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಲಾಕ್ ಡೌನ್ ಬೇಡ ಎಂದ ಸಚಿವರಿಗೆ ಡಾ.ಸುಧಾಕರ್ ಹೇಳಿದ್ದೇನು?
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರೂ ಇಂತಹ ಘಟನೆಗಳು ನಡೆಯುತ್ತಿವೆ. ಬೀದರ್‌ನಲ್ಲಿ ಲಾಕ್‌ಡೌನ್‌ಗಿಂತ ಸೋಂಕಿನ ಪ್ರಕರಣ ಹೆಚ್ಚಿತ್ತು. ಈಗ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ ಯುವಕರು ಲಾಕ್‌ಡೌನ್ ಸಂದರ್ಭದಲ್ಲಿಯೇ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ.