Bommanahalli elections: ಸತೀಶ್ ರೆಡ್ಡಿ ರೇಸ್‌ಗೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?
ಬೆಂಗಳೂರು, ಮಾರ್ಚ್, 26: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಿಸಿ ದಿನದಿಂದ ಏರುತ್ತಲೇ ಇದೆ. ಹಾಗೆಯೇ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ರಂಗು ಹೇಗಿದೆ ಎಂದು ತಿಳಿಯೋಣ ಬನ್ನಿ.
ಮೂರು ಬಾರಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿಯೂ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿಯವರು ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ತಮ್ಮ ಮತಗಳನ್ನು ಹೆಚ್ಚಿಸಿಕೊಳ್ಳುತ್ತಲೇ ಬಂದಿದ್ದಾರೆ. ಆದ್ದರಿಂದ ಈ ಬಾರಿ ಸತೀಶ್ ರೆಡ್ಡಿಗೆ ಗಾಳ ಹಾಕಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ.
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬೊಮ್ಮನಹಳ್ಳಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ.

ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಸತೀಶ್ ರೆಡ್ಡಿ
2018, ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿಯವರು ಜಯ ಗಳಿಸಿದ್ದರು. ಇವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸುಷ್ಮಾ ರಾಜಗೋಪಾಲ ರೆಡ್ಡಿ 47,162 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗೆಯೇ ಬೊಮ್ಮನಹಳ್ಳಿ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಗುಜರಾತ್ ಮಾದರಿಯನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸುವ ಆಲೋಚನೆ ಭಾಗವಾಗಿ ಸತೀಶ್ ರೆಡ್ಡಿಯನ್ನು ಬಿಟಿಎಂ ಲೇಔಟ್‌ನಿಂದ ಅಖಾಡಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಸತೀಶ್ ರೆಡ್ಡಿಯವರು ಕ್ಷೇತ್ರ ಬಿಟ್ಟುಕೊಡಲು ತಾವು ಸಿದ್ಧವಿಲ್ಲ ಎನ್ನುವ ಸಂದೇಶವನ್ನು ರವಾನಿಸಿದ್ದು, ಈ ವಿಚಾರ ಸದ್ಯ ಬಿಜೆಪಿ ವಲಯದಲ್ಲಿ ಚರ್ಚೆ ಆಗುತ್ತಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.
ಬಿಜೆಪಿಯ ಲೆಕ್ಕಾಚಾರವೇನು?
ಪಕ್ಕದಲ್ಲಿರುವ ಬಿಟಿಎಂ ಬಡಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರದ್ದೇ ಪ್ರಾಬಲ್ಯ ಇದೆ. ರಾಮಲಿಂಗಾರೆಡ್ಡಿ ಹಾಗೂ ಸತೀಶ್ ರೆಡ್ಡಿ ಇಬ್ಬರೂ ಪರಸ್ಪರ ಟೀಕೆ ಮಾಡದೆ ರಾಜಕೀಯ ಮಾಡಿಕೊಂಡು ಬಂದವರಾಗಿದ್ದಾರೆ. ಇದೀಗ ಇಬ್ಬರನ್ನೂ ಬಿಟಿಎಂ ಲೇಔಟ್‌ನಲ್ಲಿ ಪರಸ್ಪರ ಮುಖಾಮುಖಿ ಆಗಿಸಿದರೆ ಹೇಗೆ ಎನ್ನುವ ಚಿಂತೆ ಸತೀಶ್ ರೆಡ್ಡಿಯವರನ್ನು ಕಾಡುತ್ತಿದೆ.
ಸತೀಶ್ ರೆಡ್ಡಿ 2008ರಲ್ಲಿ ಹುಟ್ಟಿಕೊಂಡ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. ಅಷ್ಟೇ ಅಲ್ಲದೆ ಚುನಾವಣೆಯಿಂದ ಚುನಾವಣೆಗೂ ತಮ್ಮ ಮತಗಳಿಕೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಲೇ ಇದ್ದಾರೆ. ಕಳೆದ ಚುನಾವಣೆಯಲ್ಲಿ ಚಲಾಯಿಸಿದ ಮತಗಳಲ್ಲಿ ಅರ್ಧಕ್ಕೂ ಹೆಚ್ಚು ಮತಗಳು ಸತೀಶ್ ರೆಡ್ಡಿಯವರ ಪಾಲಾಗಿದ್ದವು.
Bommanahalli Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2008 | ಸತೀಶ್ ರೆಡ್ಡಿ ಎಂ (ಬಿಜೆಪಿ) | 62,993 | ಕುಪೇಂದ್ರ ರೆಡ್ಡಿ ಡಿ. (ಕಾಂಗ್ರೆಸ್) | 49,353 |
| 2013 | ಸತೀಶ್ ರೆಡ್ಡಿ ಎಂ (ಬಿಜೆಪಿ) | 86,552 | ನಾಗಭೂಷಣ ಸಿ. (ಕಾಂಗ್ರೆಸ್) | 60,700 |
| 20018 | ಸತೀಶ್ ರೆಡ್ಡಿ ಎಂ (ಬಿಜೆಪಿ) | 111,863 | ಸುಷ್ಮಾ ರಾಜಗೋಪಾಲ ರೆಡ್ಡಿ (ಕಾಂಗ್ರೆಸ್) | 64,701 |
ಕಾರ್ಯರೂಪಕ್ಕೆ ಬಾರದ ಆಶ್ವಾಸನೆಗಳು
ಬೊಮ್ಮನಹಳ್ಳಿಯಿಂದ ಬೇಗೂರು ರಸ್ತೆಯವರೆಗೆ ವಿಸ್ತರಣೆ ಕಾಮಗಾರಿ ಮಾಡಲಾಗುತ್ತದೆ ಎಂದು ಪ್ರತಿ ಚುನಾವಣೆ ಸಂದರ್ಭದಲ್ಲೂ ಆಶ್ವಾಸನೆಯನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇದುವರೆಗೂ ಇದು ಈಡೇರಿಲ್ಲ. ಇದನ್ನು ಕೇಳಿದರೆ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯ ನಡೆಯುತ್ತಿದೆ ಎಂದು ನೆಪವೊಡ್ಡಿತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಕ್ಷೇತ್ರದ ಜನರ ಆರೋಪವೇನು?
ಇನ್ನು ಎಚ್‌ಎಸ್‌ಆರ್ ಲೇಔಟ್ ಹೊರತುಪಡಿಸಿದ್ರೆ ಬೇರೆಡೆ ಹೇಳಿಕೊಳ್ಳುವಂತಹ ಒಂದು ಉದ್ಯಾನವಾಗಲಿ, ಆಟದ ಮೈದಾನದ ವ್ಯವಸ್ಥೆಯೇ ಇಲ್ಲದಂತಾಗಿದೆ. ಮತ್ತೊಂದೆಡೆ ಮಳೆ ಬಂದಂತಹ ಸಂದರ್ಭದಲ್ಲಿ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಕೆಲವು ಮನೆಗಳು ಜಲಾವೃತವಾಗುಗುತ್ತಿವೆ. ಆದರೂ ಕೂಡ ರಾಜಕಾಲುವೆ ಒತ್ತುವರಿ, ಒಂದೇ ನಿವೇಶನವನ್ನು ಕಲವರಿಗೆ ನೋಂದಣಿ ಮಾಡಿಕೊಳ್ಳುವಂತಹ ಭೂದಂಧೆಗೆ ಕಡಿವಾಣ ಹಾಕಬೇಕಿದೆ.
ಭೂದಾಖಲೆಗಳ ಡಿಜಿಟಲೀಕರಣ ಆದಾಗ, ಇಲ್ಲಿನ ಬಹುತೇಕ ಭೂದಾಖಲೆಯುಳ್ಳ ಎಂ.ಆರ್.ಪುಸ್ತಕಗಳನ್ನೇ ಸುಟ್ಟು ಹಾಕಿದ್ದಾರೆನ್ನುವ ಗಂಭೀರ ಆರೋಪ ಎದುರಾಗಿತ್ತು. ಇನ್ನೂ ಡಿಜಿಟಲೀಕರಣ ಆಗಿಲ್ಲ. ಇನ್ನು ಇಲ್ಲಿನ ಹಲವು ರಸ್ತೆಗಳು ಗುಂಡಿಮಯವಾಗಿವೆ. ಮತ್ತು ಬೇಸಿಗೆಯಲ್ಲಿ 1000-1500 ರೂಪಾಯಿ ಕೊಟ್ಟು ಟ್ಯಾಂಕರ್ ನೀರು ಹಾಕಿಸಿಕೊಳ್ಳುತ್ತಿದ್ದೇವೆ ಎನ್ನುವ ಅಸಮಾಧಾನ ಇಲ್ಲಿನ ಜನರದ್ದಾಗಿದೆ.
ಆದರೂ ಸತೀಶ್ ರೆಡ್ಡಿ ಕ್ಷೇತ್ರದಲ್ಲಿ ತಮ್ಮ ಪಕ್ಷದ ಯಾರನ್ನೂ ಬೆಳೆಯಲು ಬಿಟ್ಟಿಲ್ಲ. ಈ ಹಿಂದೆ ಉಪಮೇಯರ್ ಆಗಿದ್ದ ರಾಮ್‌ಮೋಹನ್‌ರಾಜು ಅವರನ್ನು ಕೂಡ ಬೆಳೆಯಲು ಅವಕಾಶ ನೀಡಲಿಲ್ಲ ಎಂದು ಕೆಲವು ಕಾರ್ಯಕರ್ತರು ಆರೋಪಿಸಿದ್ದಾರೆ. ಮತ್ತಿಂದೆಡೆ ಕಾಂಗ್ರೆಸ್‌ನಿಂದ ನನಗೇ ಟಿಕೆಟ್ ಸಿಗುವುದು ಖಚಿತ ಎನ್ನುವಂತೆ ಉಮಾಪತಿ ಶ್ರೀನಿವಾಸ ಗೌಡ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ.
ಇನ್ನು ಟಿ.ವಾಸುದೇವ ರೆಡ್ಡಿ, ಸಿ.ನಾಗಭೂಷಣ, ಕವಿತಾ ರೆಡ್ಡಿ, ಕೆ.ನಾರಾಯಣ ರಾಜು ಕೂಡ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದು, ಜೆಡಿಎಸ್‌ನಿಂದ ನಾರಾಯಣ ಎನ್ನುವವರು ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಈ ಬಾರಿ ಕ್ಷೇತ್ರದಲ್ಲಿ ಏನಾದರೂ ಮಾಡಿ ಬಿಜೆಪಿಯನ್ನು ಸೋಲಿಸಿ ತಾವು ಅಧಿಕಾರಕ್ಕೆ ಏರಬೇಕು ಎನ್ನುವ ಯೋಚನೆಯಲ್ಲಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು, 4,32,752 ಮತದಾರರಿದ್ದರೆ. ಇದರಲ್ಲಿ ಪರುಷರು 2,32,478, ಮಹಿಳೆಯರು 2,00,194 ಜನ ಇದ್ದರೆ, ಇತರೆ 71 ಜನ ಮತದಾರರಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications