ಲಕ್ಷ್ಮೀ ವಿಲಾಸ್ ಬ್ಯಾಂಕ್ ಗೆ ಕೋಟಿ ರುಪಾಯಿ ದಂಡ ವಿಧಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ಮುಂಬೈ, ಅಕ್ಟೋಬರ್ 15: ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸೋಮವಾರ ಒಂದು ಕೋಟಿ ರುಪಾಯಿ ದಂಡ ವಿಧಿಸಿದೆ. ಆರ್ ಬಿಐನ ನಿಯಮಾವಳಿ ಪಾಲನೆ ಮಾಡದ ಕಾರಣಕ್ಕೆ ಈ ದಂಡ ವಿಧಿಸಲಾಗಿದೆ. ಮಾರ್ಚ್ 31, 2017ರಲ್ಲಿ ಲಕ್ಷ್ಮೀ ವಿಲಾಸ್ ಬ್ಯಾಂಕ್ ನ ಆರ್ಥಿಕ ಪರಿಸ್ಥಿತಿ ಬಗ್ಗೆ ಕಾನೂನಿನ ಪ್ರಕಾರ ಪರಿಶೀಲನೆ ನಡೆಸಲಾಗಿತ್ತು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇನ್ ಕಮ್ ರೆಕಗ್ನಿಷನ್ ಅಂಡ್ ಅಸೆಟ್ ಕ್ಲಾಸಿಫಿಕೇಷನ್ (ಐಆರ್ ಎಸಿ) ನಿಯಮಾವಳಿಗಳಿಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಬದ್ಧವಾಗಿ ನಡೆದುಕೊಳ್ಳುತ್ತಿಲ್ಲ ಎಂಬುದು ಆ ಸಂದರ್ಭದಲ್ಲಿ ಬಯಲಿಗೆ ಬಂದಿತ್ತು ಎಂದು ಕೇಂದ್ರ ಬ್ಯಾಂಕ್ ನ ಹೇಳಿಕೆಯಲ್ಲಿ ತಿಳಿಸಲಾಗಿದೆ.

1 Crore Rupees Penalty Imposed On Lakshmi Vilas Bank By RBI

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿಯಮಾವಳಿಗಳನ್ನು ಅನುಸರಿಸುವುದರಲ್ಲಿನ ಕೊರತೆಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನು ಹೊರತುಪಡಿಸಿ ಬ್ಯಾಂಕ್ ನ ಗ್ರಾಹಕರ ಜತೆಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ನಡೆಸುತ್ತಿರುವ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+