ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಏಷ್ಯಾದ ರಾಷ್ಟ್ರಗಳಿಂದ RCEPಗೆ ಸಹಿ, ಭಾರತಕ್ಕೆ ಆತಂಕ

|
Google Oneindia Kannada News

ನವದೆಹಲಿ, ನ.15: ತೀವ್ರ ಆತಂಕ, ಗೊಂದಲಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ(RCEP)ಗೆ ಚೀನಾದ ನೇತೃತ್ವದಲ್ಲಿ ಒಪ್ಪಿಗೆ ಸಿಕ್ಕಿದೆ. ಅಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಅಲ್ಲದೆ ಏಷ್ಯಾದ 15ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಿವೆ. ಚೀನಾ ಮುಂದಾಳತ್ವದ ವಹಿವಾಟು ಒಪ್ಪಂದಕ್ಕೆ ಜಪಾನ್, ದಕ್ಷಿಣ ಕೊರಿಯಾ ಕೂಡಾ ಸಮ್ಮತಿಸಿವೆ.

ದೇಶದಾದ್ಯಂತ ತೀವ್ರ ಆತಂಕ, ಗೊಂದಲಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ (ಆರ್‌ಸಿಇಪಿ) ಸಹಿ ಹಾಕಲು ಭಾರತ ಕಳೆದ ವರ್ಷ ಹಿಂದೇಟು ಹಾಕಿತ್ತು. ಇದರಿಂದ ದೇಶದ ರೈತರು, ಉದ್ಯಮಿಗಳು ಹಾಗೂ ವ್ಯಾಪಾರ ವಲಯಕ್ಕೆ ನೆಮ್ಮದಿ ಸಿಕ್ಕಿತ್ತು. ಆದರೆ, ಈಗ ಭಾರತದ ಮೇಲೆ ಒತ್ತಡ ಹೆಚ್ಚಾಗಲಿದೆ.

RCEP ಗೆ ಮುಂಚಿನ GATT ಎಂಬ ಪೆಡಂಭೂತ, GATT ನ ತಮ್ಮ RCEPRCEP ಗೆ ಮುಂಚಿನ GATT ಎಂಬ ಪೆಡಂಭೂತ, GATT ನ ತಮ್ಮ RCEP

ಆರ್‌ಸಿಇಪಿ ಒಪ್ಪಂದದಿಂದ ಚೀನಾದ ಸರಕುಗಳು ಭಾರತದೊಳಗೆ ಪ್ರವಹಿಸುವ ಆತಂಕ ವ್ಯಕ್ತವಾಗಿತ್ತು. ಜತೆಗೆ ಸುಂಕವಿಲ್ಲದೆ ಸರಕುಗಳು ದೇಶದ ಮಾರುಕಟ್ಟೆಗೆ ಪ್ರವೇಶಿಸುವ ಒಪ್ಪಂದ ಇದಾಗಿರುವುದರಿಂದ ಅಡಿಕೆ ಮುಂತಾದ ಬೆಳೆಗಾರರು ಕಳವಳಗೊಂಡಿದ್ದರು.

ವಿದೇಶಿ ವಸ್ತುಗಳು ಭಾರತದ ಮಾರುಕಟ್ಟೆಗೆ ಲಗ್ಗೆ

ವಿದೇಶಿ ವಸ್ತುಗಳು ಭಾರತದ ಮಾರುಕಟ್ಟೆಗೆ ಲಗ್ಗೆ

ಆರ್‌ಸಿಇಪಿ ಅಡಿಯಲ್ಲಿ ಚೀನಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಶೇ 74ರಷ್ಟು ಸರಕುಗಳು ಹಾಗೂ ಜಪಾನ್, ದಕ್ಷಿಣ ಆಫ್ರಿಕಾ ಮತ್ತು ಆಸಿಯಾನ್‌ನ ಒಟ್ಟು 15 ದೇಶಗಳ ಶೇ 90ರಷ್ಟು ಸರಕುಗಳ ಮೇಲಿನ ಸುಂಕವನ್ನು ಭಾರತ ತೆಗೆದುಹಾಕಬೇಕಾಗುತ್ತದೆ. ಇದರಿಂದ ವಿದೇಶಿ ವಸ್ತುಗಳು ಯಥೇಚ್ಛವಾಗಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ತೀರಾ ಅಗ್ಗದ ಹಾಗೂ ಗುಣಮಟ್ಟದವಿಲ್ಲದ ಚೀನಾದ ಸರಕುಗಳು ಮಾರುಕಟ್ಟೆಯನ್ನು ತುಂಬಿಕೊಳ್ಳುತ್ತವೆ. ಅದಕ್ಕಿಂತ ಮುಖ್ಯವಾಗಿ ಭಾರತವು ಇಂತಹ ಸರಕುಗಳ ವಿಲೇವಾರಿ ಘಟಕವಾಗಿ ಬದಲಾಗುತ್ತದೆ. ಜತೆಗೆ ಇಲ್ಲಿನ ರೈತರು, ಉದ್ಯಮಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಹೀಗಾಗಿ ಈ ಒಪ್ಪಂದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.

ಒಪ್ಪಂದದ ಬಗ್ಗೆ ಭಾರತದ ನಿಲುವೇನು?

ಒಪ್ಪಂದದ ಬಗ್ಗೆ ಭಾರತದ ನಿಲುವೇನು?

'ಒಪ್ಪಂದದ ಕುರಿತಂತೆ ಭಾರತವು ಅನೇಕ ಪ್ರಮುಖ ಸಮಸ್ಯೆಗಳನ್ನು ಹೊಂದಿವೆ. ಅವುಗಳು ಪರಿಹಾರ ಕಾಣದೆ ಉಳಿದಿವೆ. ಈ ಬಗೆಹರಿಯದ ಸಮಸ್ಯೆಗಳನ್ನು ಪರಸ್ಪರ ತೃಪ್ತಿದಾಯಕ ಮಾರ್ಗಗಳ ಮೂಲಕ ಪರಿಹರಿಸಲು ಎಲ್ಲ ಆರ್‌ಸಿಇಪಿ ಸಹಭಾಗಿತ್ವದ ದೇಶಗಳು ಒಂದಾಗಿ ಕೆಲಸ ಮಾಡಲಿವೆ. ಭಾರತದ ಅಂತಿಮ ನಿರ್ಧಾರವು ಈ ಸಮಸ್ಯೆಗಳ ತೃಪ್ತಿದಾಯಕ ನಿರ್ಣಯಗಳ ಮೇಲೆ ಅವಲಂಬಿತವಾಗಿರುತ್ತದೆ' ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಆರ್‌ಸಿಇಪಿ ರೈತ ವಿರೋಧಿ; ಹೋರಾಟಕ್ಕೆ ಸಿದ್ದರಾಮಯ್ಯ ಕರೆಆರ್‌ಸಿಇಪಿ ರೈತ ವಿರೋಧಿ; ಹೋರಾಟಕ್ಕೆ ಸಿದ್ದರಾಮಯ್ಯ ಕರೆ

'ಆರ್‌ಸಿಇಪಿ ಒಪ್ಪಂದದ ಪ್ರಸ್ತುತದ ಸ್ವರೂಪವು ಆರ್‌ಸಿಇಪಿಯ ಮೂಲ ಉದ್ದೇಶ ಮತ್ತು ಒಪ್ಪಿತವಾಗಿದ್ದ ಮಾರ್ಗದರ್ಶಿ ಸೂತ್ರಗಳನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುತ್ತಿಲ್ಲ. ಇಂತಹ ನಿರ್ಧಾರಗಳಲ್ಲಿ ಭಾರತದ ರೈತರು, ವ್ಯಾಪಾರಿಗಳು, ವೃತ್ತಿಪರರು ಮತ್ತು ಉದ್ಯಮಿಗಳ ಭವಿಷ್ಯ ನಿರ್ಧಾರವಾಗುತ್ತದೆ' ಎಂದು ಕಳೆದ ಆರ್‌ಸಿಇಪಿ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಕ್ತ ವ್ಯಾಪಾರ ಒಪ್ಪಂದದ ಕತೆಯೇನು?

ಮುಕ್ತ ವ್ಯಾಪಾರ ಒಪ್ಪಂದದ ಕತೆಯೇನು?

ಏಷ್ಯಾದ 10 ಅಸಿಯಾನ್ ದೇಶಗಳು (ಬ್ರೂನೈ, ಕಾಂಬೋಡಿಯಾ, ಸಿಂಗಾಪುರ, ಫಿಲಿಫ್ಫಿನ್ಸ್, ಇಂಡೋನೇಷಿಯಾ, ಲಾವೋಸ್, ಥೈಲಾಂಡ್, ಮಲೇಷಿಯಾ, ವಿಯೆಟ್ನಾಂ ಮತ್ತು ಮ್ಯಾನ್ಮಾರ್) ಮತ್ತು ಈ ದೇಶಗಳ ಜೊತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಅಸ್ಟ್ರೇಲಿಯಾ, ಭಾರತ, ಚೀನಾ, ಜಪಾನ್, ಕೊರಿಯಾ ಮತ್ತು ನ್ಯೂಜಿಲೆಂಟ್ ದೇಶಗಳ ನಡುವೆ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ( RCEP)ದ ಅಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA)ದ ಬಗ್ಗೆ ಮಾತುಕತೆಗಳು ಅಂತಿಮ ಹಂತದಲ್ಲಿರುವಾಗಲೇ RCEPಗೆ ಸಹಿ ಬಿದ್ದಿದೆ.

ಕೃಷಿ, ಹೈನುಗಾರಿಕೆ, ಔಷಧ ಉತ್ಪನ್ನ ಬೆಲೆ ಏರಿಕೆ?

ಕೃಷಿ, ಹೈನುಗಾರಿಕೆ, ಔಷಧ ಉತ್ಪನ್ನ ಬೆಲೆ ಏರಿಕೆ?

ಸುಮಾರು 16 ದೇಶಗಳು ಶೇಕಡಾ 80 ರಿಂದ 90ರಷ್ಟು ಸರಕುಗಳನ್ನು ಕಡಿಮೆ ಆಮದು ಸುಂಕ ತೆತ್ತು ಆಮದು ಮಾಡಿಕೊಳ್ಳಬಹುದಾಗಿದೆ.

RCEP ಒಪ್ಪಂಕ್ಕೆ ಒಲ್ಲೆ ಎಂದ ಮೋದಿ ಕ್ರಮವನ್ನು ಶ್ಲಾಘಿಸಿದ ಭಾರತRCEP ಒಪ್ಪಂಕ್ಕೆ ಒಲ್ಲೆ ಎಂದ ಮೋದಿ ಕ್ರಮವನ್ನು ಶ್ಲಾಘಿಸಿದ ಭಾರತ

ಈ ವ್ಯಾಪಾರ ಒಪ್ಪಂದ ಮುಂದಿನ ದಿನಗಳಲ್ಲಿ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕವನ್ನು ಶಾಶ್ವತವಾಗಿ ಶೂನ್ಯಕ್ಕೆ ತರುತ್ತದೆ. ಈ ಗುಂಪಿನಲ್ಲಿರುವ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತಕ್ಕೆ ರಫ್ತು ಮಾಡುತ್ತವೆ. ಇದರಿಂದಾಗಿ ಕೇವಲ ಹೈನುಗಾರಿಕೆ ಮಾತ್ರವಲ್ಲ, ಗದ್ದೆಯ ಮತ್ತು ತೋಟದ ಬೆಳೆಗಳು, ಸಾಂಬಾರ ಪದಾರ್ಥಗಳು ಹೀಗೆ ಎಲ್ಲ ಬಗೆಯ ಕೃಷಿ ಉತ್ಪನ್ನಗಳ ಮೇಲೆಯೂ ಒಪ್ಪಂದ ಪರಿಣಾಮ ಬೀರಲಿದೆ. ಔಷಧಿಗಳ ಬೆಲೆ ಕೂಡಾ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಮೆರಿಕ ವಿರೋಧಿ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ

ಅಮೆರಿಕ ವಿರೋಧಿ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ

ಈ ಒಪ್ಪಂದದ ಮೂಲಕ ಸೋರಿಕೆಯಾದ ದಾಖಲೆಗಳು ವಿದೇಶಿ ಹೂಡಿಕೆದಾರರು ಕೃಷಿ ಭೂಮಿಯನ್ನು ಖರೀದಿಸಲು ಸಾಧ್ಯವಾಗುತ್ತದೆ ಮತ್ತು ಸರಕು ಮತ್ತು ಸೇವೆಗಳು ಸರ್ಕಾರಿ ಸಾರ್ವಜನಿಕ ಸಂಗ್ರಹಣೆಯಲ್ಲಿ ವಿದೇಶಿ ಕಂಪೆನಿಗಳು ಸಹ ಬೆಂಬಲವನ್ನು ಪಡೆಯಬಹುದು ಎಂಬುದನ್ನು ಸೂಚಿಸುತ್ತದೆ. ಸೂಪರ್ ಮಾರ್ಕೆಟ್ ಮತ್ತು ದೊಡ್ಡ ಕಂಪನಿಗಳ ನೇರ ಚಿಲ್ಲರೆ ವ್ಯಾಪಾರವು ಸ್ಥಳೀಯ ಮಾರುಕಟ್ಟೆಗಳನ್ನು ನಾಶ ಮಾಡಲು ಹೆಚ್ಚಿನ ಶಕ್ತಿಯನ್ನು ಪಡೆಯಲಿದೆ. ಈ ಒಪ್ಪಂದದಲ್ಲಿ ಉಳಿದೆಲ್ಲ ದೇಶಗಳಿಗಿಂತ ಚೀನಾ ಸೇರಿಕೊಂಡಿರುವುದು ಭಾರತದ ಚಿಂತೆಗೆ ಕಾರಣವಾಗಿದೆ. ಒಂದೆಡೆ ಚೀನಾ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಅಮೆರಿಕದ ಜೊತೆ ಸಂಘರ್ಷದಲ್ಲಿ ತೊಡಗಿದೆ. ಚೀನಾದ ಜೊತೆ ಭಾರತ ಮುಕ್ತ ವ್ಯಾಪಾರದ ಒಪ್ಪಂದ ವೇರ್ಪಟ್ಟರೆ ಭಾರತ ಅನಿವಾರ್ಯವಾಗಿ ಅಮೆರಿಕ ವಿರೋಧಿ ನಿಲುವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದ ಭಾರತ: ರೈತರು, ಉದ್ಯಮಿಗಳು ನಿರಾಳಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದ ಭಾರತ: ರೈತರು, ಉದ್ಯಮಿಗಳು ನಿರಾಳ

English summary
Launched in 2012, the RCEP is a trade pact between the 10-member ASEAN bloc, along with China, Japan, South Korea, Australia and New Zealand. India had been due to sign but pulled out last year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X