ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

|
Google Oneindia Kannada News

ಬೆಂಗಳೂರು, ಮೇ 27: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ನಿಗದಿಯಾಗಿರುವಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ಯಶಸ್ವಿ ಪ್ರವಾಸ ಎಂದ ನಿರಾಣಿ

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು.

5 Lakh Crore Capital Investment in the State Expectation Says Murugesh Nirani

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಕೈಗಾರಿಕೆ ಸ್ಥಾಪನೆಯಿಂದ ಸ್ಥಳೀಯರಿಗೆ ಉದ್ಯೋಗ

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು. ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

5 Lakh Crore Capital Investment in the State Expectation Says Murugesh Nirani

ನವೆಂಬರ್‌ನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶ

ನವೆಂಬರ್‌ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬು ವಿಶ್ವಾಸ ವ್ಯಕ್ತಪಡಿಸಿದರು.

English summary
Minister Murugesh Nirani has said that Rs 5 lakh crore investment is expected to be made at the Globle Investor Conference in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X