2030ರ ವೇಳೆಗೆ 6ಜಿ ನೆಟ್ ವರ್ಕ್ ಲಭ್ಯ: ನೋಕಿಯಾ ಸಿಇಒ
ನವದೆಹಲಿ ಮೇ 29: ವಿಶ್ವಾದ್ಯಂತ 5ಜಿ ನೆಟ್ ವರ್ಕ್ ಇನ್ನೂ ಲಭ್ಯವಿಲ್ಲದಿದ್ದರೂ, ಜಾಗತಿಕ ಸ್ಮಾರ್ಟ್ ಫೋನ್ ಬ್ರಾಂಡ್ ನೋಕಿಯಾದ ಸಿಇಒ ಪೆಕ್ಕಾ ಲುಂಡ್ಮಾರ್ಕ್ 2030ರ ವೇಳೆಗೆ 6ಜಿ ಮೊಬೈಲ್ ನೆಟ್ ವರ್ಕ್ ವಾಣಿಜ್ಯ ಬಳಕೆಗೆ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.
ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿದ ಪೆಕ್ಕಾ ಲುಂಡ್ಮಾರ್ಕ್, "2030ರ ಹೊತ್ತಿಗೆ ಖಂಡಿತವಾಗಿಯೂ ಇಂದು ನಮಗೆ ತಿಳಿದಿರುವಂತೆ ಸ್ಮಾರ್ಟ್ ಫೋನ್ ಹೆಚ್ಚು ಸಾಮಾನ್ಯ ಇಂಟರ್ ಫೇಸ್ ಆಗುವುದಿಲ್ಲ. ಇವುಗಳಲ್ಲಿ ಹೆಚ್ಚಿನವು ನಮ್ಮ ದೇಹದಲ್ಲಿ ನೇರವಾಗಿ ನಿರ್ಮಿಸಲ್ಪಡುತ್ತದೆ,'' ಎಂದರು.
ಇದು ಹೇಗೆ ಮತ್ತು ಯಾವ ರೀತಿ ಎಂಬುದರ ಬಗ್ಗೆ ಪೆಕ್ಕಾ ಲುಂಡ್ಮಾರ್ಕ್ ಹೆಚ್ಚು ವಿವರಣೆ ನೀಡಲು ಹೋಗಲಿಲ್ಲ. ಆದರೆ "2030ರ ವೇಳೆಗೆ ಎಲ್ಲದರ ಡಿಜಿಟಲ್ ಅವಳಿ ಇರುತ್ತದೆ. ಹಾಗೂ ಇದಕ್ಕೆ ದೊಡ್ಡ ಕಂಪ್ಯೂಟೇಶನಲ್ ಸಂಪನ್ಮೂಲಗಳ ಅಗತ್ಯವಿರುತ್ತದೆ,'' ಎಂದು ಹೇಳಿದರು.

6ಜಿ ನೆಟ್ ವರ್ಕ್ ಮೇಲೆ ಹೂಡಿಕೆ; ಕಂಪನಿಗಳು ಈಗಾಗಲೇ 6ಜಿ ನೆಟ್ ವರ್ಕ್ ಮೇಲೆ ಹೆಚ್ಚಿನ ಹೂಡಿಕೆಯನ್ನು ಪ್ರಾರಂಭಿಸಿವೆ. ಕ್ವಾಲ್ಕಾಮ್, ಆಪಲ್, ಗೂಗಲ್, ಎಲ್ ಜಿ ಸೇರಿದಂತೆ ವಿಶ್ವದ ಕೆಲವು ಟೆಕ್ ದೈತ್ಯ ಕಂಪನಿಗಳು ಮುಂದಿನ ಪೀಳಿಗೆಯ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು, ಅಭಿವೃದ್ದಿಗೆ ಸಹಕಾರ ನೀಡಲು ಉತ್ಸುಕವಾಗಿವೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
5ಜಿ ಕರೆಯ ಪರೀಕ್ಷೆ ಯಶಸ್ವಿ: ಮದ್ರಾಸ್ ಐಐಟಿಯಲ್ಲಿ ನಡೆಸಿದ 5ಜಿ ಕರೆಯ ಪರೀಕ್ಷೆಯು ಯಶಸ್ವಿ ಆಗಿರುವ ಬಗ್ಗೆ ಇತ್ತೀಚಿಗೆ ಕೇಂದ್ರ ಟೆಲಿಕಾಂ ಸಚಿವಾಲಯ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಮದ್ರಾಸ್ ಐಐಟಿಯಲ್ಲಿ 5ಜಿ ಕರೆಯನ್ನು ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಯಶಸ್ವಿಯಾಗಿ ಪರೀಕ್ಷಿಸಿರುವ ಬಗ್ಗೆ ವಿಡಿಯೋ ಸಂದೇಶವೊಂದನ್ನು ಶೇರ್ ಮಾಡಿದ್ದರು.

"ಭಾರತದಲ್ಲಿ ಸಂಪೂರ್ಣ ಎಂಡ್ ಟು ಎಂಡ್ ನೆಟ್‌ವರ್ಕ್ ಅನ್ನು ವಿನ್ಯಾಸಗೊಳಿಸಲಾಗಿದ್ದು, ಅಭಿವೃದ್ಧಿಪಡಿಸಲಾಗಿದೆ. ಭಾರತದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 5G ಸ್ಟಾಕ್ ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಸಿದ್ಧವಾಗಲಿದೆ,'' ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. ಆ ಮೂಲಕ ರಾಷ್ಟ್ರದ ವೆಚ್ಚಕ್ಕೆ ತಕ್ಕಂತೆ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ನೀಡುವ ಪರಿಹಾರ ಸೂಚಿಸಿದ್ದರು.
"ಆರ್ಥಿಕ ಅಭಿವೃದ್ಧಿಯಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತಿರುವ ಈ ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯನ್ನು ಕಡಿಮೆ ಮಾಡುವುದು ಹೆಚ್ಚು ನಿರ್ಣಾಯಕವಾಗಿದೆ. ಅಂತರ್ಗತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಸರಕಾರವು ತನ್ನ ಎಲ್ಲಾ ಪ್ರಯತ್ನಗಳನ್ನು ನಿರ್ದೇಶಿಸುತ್ತಿದೆ,'' ಎಂದು ಅವರು ಹೇಳಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications