ಕೇಂದ್ರ ಸರ್ಕಾರಿ ನೌಕರರಿಗೆ ನಿರೀಕ್ಷೆಗಿಂತ ಹೆಚ್ಚಿನ ವೇತನ!

ನವದೆಹಲಿ, ಮಾರ್ಚ್ 03: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಏರಿಕೆಯಾಗುವುದು ನಿರೀಕ್ಷಿತ. ಆದರೆ, ವಿತ್ತ ಸಚಿವಾಲಯದ ಮೂಲಗಳ ಪ್ರಕಾರ, 7ನೇ ವೇತನ ಆಯೋಗ ಶಿಫಾರಸ್ಸನ್ನು ಮೀರಿ ಹೆಚ್ಚಿನ ವೇತನ ಸಿಗುವ ಸಾಧ್ಯತೆಗಳು ಕಂಡು ಬಂದಿದೆ.

ಈಗಾಗಲೇ ವರದಿಯಾದಂತೆ ಏಪ್ರಿಲ್ ತಿಂಗಳಿನಿಂದ ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆಯಾಗಲಿದ್ದು, ಲಕ್ಷಾಂತರ ಮಂದಿಗೆ ನರೇಂದ್ರ ಮೋದಿ ಸರ್ಕಾರ ಸಂತಸದ ಸುದ್ದಿ ಕೊಟ್ಟಿದೆ.

7ನೇ ವೇತನ ಆಯೋಗ ಶಿಫಾರಸ್ಸಿನ ಅನ್ವಯ ಹೊಸ ವೇತನ ದರ ಪಟ್ಟಿ ಜಾರಿಗೆ ಬರಲಿದ್ದು, ಇದಕ್ಕೆ ಕೇಂದ್ರ ಸಚಿವ ಸಂಪುಟ ಕೂಡ 2016ರಲ್ಲೇ ಒಪ್ಪಿಗೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಈಗ ಕನಿಷ್ಟ ವೇತನವನ್ನು 21 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡುವ ಸಾಧ್ಯತೆ ಕಂಡು ಬಂದಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.

ಈಗ ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವ ನಿರೀಕ್ಷೆಯಿದೆ...

ಹೆಚ್ಚು ಕನಿಷ್ಠ ವೇತನ ನೀಡುವ ಸಾಧ್ಯತೆ

ಹೆಚ್ಚು ಕನಿಷ್ಠ ವೇತನ ನೀಡುವ ಸಾಧ್ಯತೆ

ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ.

ನೌಕರರಿಗೆ ಶುಭಸಿದ್ದಿ ಸಿಗುವ ನಿರೀಕ್ಷೆ

ನೌಕರರಿಗೆ ಶುಭಸಿದ್ದಿ ಸಿಗುವ ನಿರೀಕ್ಷೆ

ಕೆಳ ಹಂತದ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕನಿಷ್ಟ ವೇತನವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. 7 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸು ಮೀರಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರು. ಸಂಬಳದಾರ ಮಧ್ಯಮವರ್ಗದವರಿಗೆ ಬಜೆಟ್ 2018ರಲ್ಲಿ ಅರುಣ್ ಜೇಟ್ಲಿ ಏನು ಕೊಟ್ಟಿಲ್ಲ ಎಂಬ ದೊಡ್ಡ ಆರೋಪ ಕೇಳಿ ಬಂದಿದೆ. ಇದನ್ನು ಸರಿದೂಗಿಸಲು ಮೋದಿ ಸರ್ಕಾರ ಯತ್ನಿಸುತ್ತಿದೆ.

ಸಿಬ್ಬಂದಿಗಳ ಬೇಡಿಕೆ ಏನಿದೆ?

ಸಿಬ್ಬಂದಿಗಳ ಬೇಡಿಕೆ ಏನಿದೆ?

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೊರೆ

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೊರೆ

ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 47 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+