ತುಟ್ಟಿಭತ್ಯೆ ಹೆಚ್ಚಳ ಯಾವಾಗ? ನೌಕರರ ಕಾತುರದ ಪ್ರಶ್ನೆಗೆ ಇಲ್ಲಿದೆ ಉತ್ತರ
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಸುದ್ದಿ ಕೆಲ ಸಮಯದಿಂದ ಚಾಲ್ತಿಯಲ್ಲಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ಜುಲೈ ತಿಂಗಳ ಅಂತ್ಯದಲ್ಲೇ ತುಟ್ಟಿಭತ್ಯೆ ಅಥವಾ ಡಿಎ ಮತ್ತು ತುಟ್ಟಿಭತ್ಯೆ ಪರಿಹಾರ (ಡಿಆರ್) ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿ ಬಂದಿದೆ. ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಈ ಸುದ್ದಿಗೆ ಇನ್ನಷ್ಟು ಪುಷ್ಟಿ ನೀಡಿದೆ.
ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ 18 ತಿಂಗಳ ತುಟ್ಟಿಭತ್ಯೆ ಬಾಕಿಯ ಬಗ್ಗೆ ಮೋದಿ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ. ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ತುಟ್ಟಿಭತ್ಯೆ ಪರಿಹಾರ(ಡಿಆರ್) ಕೂಡಾ ಶೇ 3ರಷ್ಟಿದೆ. ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, ದೇಶದಲ್ಲಿ ಒಟ್ಟು 48 ಲಕ್ಷ ಕೇಂದ್ರ ನೌಕರರು ಮತ್ತು ಸುಮಾರು 68.62 ಲಕ್ಷ ಪಿಂಚಣಿದಾರರಿದ್ದಾರೆ.
ವರ್ಷಕ್ಕೆ ಎರಡು ಬಾರಿ ಡಿಎ ಘೋಷಣೆ ಮಾಡಲಾಗುತ್ತದೆ. ಈ ವರ್ಷದಲ್ಲಿ ಜನವರಿಯಲ್ಲಿ ಕೇಂದ್ರ ಸರ್ಕಾರವು ಡಿಎ ಹೆಚ್ಚಳವನ್ನು ಘೋಷಣೆ ಮಾಡಿದೆ. ವರದಿಗಳ ಪ್ರಕಾರವ ಮೇ ತಿಂಗಳಿನಲ್ಲಿ ಶೇಕಡ 7.4ರಷ್ಟಿರುವ ಹಣದುಬ್ಬರವನ್ನು ಕೇಂದ್ರ ಸರ್ಕಾರವು ಪರಿಗಣನೆಗೆ ತೆಗೆದುಕೊಳ್ಳಬಹುದು. ಸರಿ ಸುಮಾರು ಶೇ 4 ರಿಂದ 6 ರಷ್ಟು ಡಿಎ ಹೆಚ್ಚಳದ ನಿರೀಕ್ಷೆಯಂತೂ ಇದ್ದೆ ಇದೆ.

ಎಷ್ಟು ಪ್ರಮಾಣದಲ್ಲಿ ಏರಿಕೆ ಸಾಧ್ಯತೆ?
ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಾಗಿತ್ತು.
ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿತ್ತು. ಜುಲೈ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದ್ದು, ಶೇ 31ಕ್ಕೇರಿದೆ. ನಂತರ ಶೇ 3ರಂತೆ ಡಿಎ ಏರಿಕೆ ಕ್ರಮ ಅನುಸರಿಸಲಾಗಿದೆ. ಸದ್ಯ ಡಿಎ ಶೇ 34ರಷ್ಟಿದೆ.ಈ ಬಾರಿ ಅಧಿಕ ಪ್ರಮಾಣದಲ್ಲಿ(ಶೇ 4 ರಿಂದ 6ರಷ್ಟು) ಏರಿಕೆ ಕಾಣುವ ಸಾಧ್ಯತೆಯಿದ್ದು, ಶೇ 40ರಷ್ಟಾಗುವ ಸಾಧ್ಯತೆ ಅಲ್ಲಗೆಳೆಯುವಂತಿಲ್ಲ
AICPI ಸೂಚ್ಯಂಕದ ಆಧಾರದ ಮೇಲೆ
AICPI ಸೂಚ್ಯಂಕದ ಆಧಾರದ ಮೇಲೆ ಹೇಳುವುದಾದರೆ ಶೇ 4ರಷ್ಟು ಡಿಎ ಹೆಚ್ಚಳ ನಿರೀಕ್ಷಿಸಬಹುದು. ಏಪ್ರಿಲ್‌ನಲ್ಲಿ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) 127.7 ಪಾಯಿಂಟ್‌ಗಳಿಗೆ ಏರಿದೆ. ಇನ್ನು ಮೇ, ಜೂನ್ ಅಂಕಿ ಅಂಶವನ್ನು ಕೂಡಾ ಪರಿಶೀಲನೆ ಮಾಡಿದರೆ, ಡಿಎ ಮತ್ತೆ ಶೇಕಡ 5 ರಿಂದ 6ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಶೇ 5ರಷ್ಟು ಏರಿಕೆ ಕಂಡರೆ ತಿಂಗಳಿಗೆ ಮೂಲ ವೇತನಕ್ಕೆ ಅನುಸಾರವಾಗಿ 3,400 ರು ಅಥವಾ ವಾರ್ಷಿಕ 40,000 ರು ತನಕ ಸಂಬಳದಲ್ಲಿ ಏರಿಕೆ ಕಾಣಬಹುದು.

ಆಗಸ್ಟ್ ತಿಂಗಳಲ್ಲಿ ಬ್ಯಾಂಕ್ ಬ್ಯಾಲೆನ್ಸ್
ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ಬ್ಯಾಂಕ್ ಬ್ಯಾಲೆನ್ಸ್ ಏರಿಕೆಯಾಗಲಿದ್ದು, ಜುಲೈ 31ರಂದು ಡಿಎ ಹೆಚ್ಚಳ ಬಗ್ಗೆ ಸೂಚನೆ ಸಿಗಲಿದೆ ಎಂಬ ವರದಿಗಳು ಬಂದಿವೆ. ಆದರೆ, ಆಗಸ್ಟ್ 3ರಂದು ಕೇಂದ್ರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಅಂದೇ ಹೊಸ ಡಿಎ ಪ್ರಮಾಣ ಹಾಗೂ ಡಿಆರ್ ಬಗ್ಗೆ ಅಧಿಕೃತ ವರದಿ ಪ್ರಕಟವಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಇನ್ನು ಹೊರ ಬಂದಿಲ್ಲ.
Infographics: ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ ವೇತನ ಮತ್ತು ಭತ್ಯೆ ಹೆಚ್ಚಳRecommended Video

ತುಟ್ಟಿ ಭತ್ಯೆ ಸದ್ಯದ ಪ್ರಮಾಣ
ನಿಯಮಗಳ ಪ್ರಕಾರ, ಡಿಎ ಘೋಷಣೆಯನ್ನು ಮೊದಲು ಮಾರ್ಚ್ ಮತ್ತು ಸೆಪ್ಟೆಂಬರ್‌ನಲ್ಲಿ ಮಾಡಲಾಗುತ್ತಿತ್ತು. ಕೋವಿಡ್ ಕಾರಣದಿಂದಾಗಿ ಸುಮಾರು 1.5 ವರ್ಷಗಳ ಕಾಲ ಡಿಎ ಹೆಚ್ಚಳವನ್ನು ಮಾಡಿಲ್ಲ. ನಂತರ ಜುಲೈ 2021 ರಲ್ಲಿ ಡಿಎ ಹೆಚ್ಚಳ ಮತ್ತೆ ಆರಂಭ ಮಾಡಲಾಗಿದೆ. 7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ಎಲ್ಲಾ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್ ಅನ್ನು ಜುಲೈ 2021 ರಲ್ಲಿ ಹೆಚ್ಚಿಸಲಾಯಿತು. ಜನವರಿ 1, 2022 ರಲ್ಲಿ ಶೇ 3ರಷ್ಟು ಡಿಎ ಹೆಚ್ಚಳವಾಗಿದ್ದು ಸದ್ಯ ಡಿಎ ಶೇಕಡ 34ರಷ್ಟು ಡಿಎರಷ್ಟಿದೆ.
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications