ಬಜೆಟ್ ಬಳಿಕ ಸರ್ಕಾರಿ ನೌಕರರಿಗೆ ಕೈತುಂಬಾ ಸಂಬಳ!

ನವದೆಹಲಿ, ಜನವರಿ 25: ಕೇಂದ್ರ ಬಜೆಟ್ ಮಂಡನೆ ಬಳಿಕ ಕೇಂದ್ರ ಸರ್ಕಾರಿ ನೌಕರರಿಗೆ ಕೈ ತುಂಬಾ ಸಂಬಳ ಸಿಗುವ ಸುದ್ದಿಯೊಂದು ವಿತ್ತ ಸಚಿವಾಲಯದ ಮೂಲಗಳಿಂದ ತಿಳಿದು ಬಂದಿದೆ.

7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಏಪ್ರಿಲ್ ತಿಂಗಳಿನಿಂದ ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

7th Pay Commission : Pay Hike for Central government employees from April

ಸಿಬ್ಬಂದಿಯ ಕನಿಷ್ಟ ವೇತನವನ್ನು 7000 ರು ಗಳಿಂದ 18,000ಕ್ಕೇರಿಸಲಾಗುವುದು ಹಾಗೂ ಗರಿಷ್ಟ ವೇತನವನ್ನು 90,000 ರು ನಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗುತ್ತದೆ.

ಇದು 7ನೇ ವೇತನ ಆಯೋಗ ಶಿಫಾರಸ್ಸಿನ ಅನ್ವಯ ಜಾರಿಗೆ ಬರಲಿದ್ದು, ಇದಕ್ಕೆ ಕೇಂದ್ರ ಸಚಿವ ಸಂಪುಟ ಕೂಡ 2016ರಲ್ಲೇ ಒಪ್ಪಿಗೆ ಸೂಚಿಸಿದೆ.

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸರ್ಕಾರಿ ಉದ್ಯೋಗಿಗಳಿಗೆ ಕೇಂದ್ರ ಬಜೆಟ್ ವೇಳೆಯಲ್ಲಿ ಹೆಚ್ಚಿನ ಅನುದಾನ ನೀಡುವ ಸಾಧ್ಯತೆಯಿದ್ದು, ಏಪ್ರಿಲ್ ನಿಂದ ಕೇಂದ್ರ ಸರ್ಕಾರ ವೇತನ ಹೆಚ್ಚಳವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+