ನಕಲಿ ವಿಮರ್ಶೆ ಹಾಕಿದರೆ ಇ-ಕಾಮರ್ಸ್ ಸಂಸ್ಥೆಗಳಿಗೆ ಬೀಳಲಿದೆ 50 ಲಕ್ಷ ದಂಡ
ನವದೆಹಲಿ, ಸೆಪ್ಟೆಂಬರ್ 16: ಗ್ರಾಹಕ ವ್ಯವಹಾರಗಳ ಇಲಾಖೆಯು ಇ-ಕಾಮರ್ಸ್ ಕಂಪೆನಿಗಳಿಗೆ ಮೂಗುದಾರ ಹಾಕಲು ಅಖಾಡ ಸಿದ್ದಪಡಿಸಿಕೊಂಡಿದ್ದು ಇನ್ನು ಮುಂದೆ ನಕಲಿ ವಿಮರ್ಶೆಯನ್ನು ಪೋಸ್ಟ್ ಮಾಡಿದರೆ ಭಾರಿ ದಂಡ ಅಂದರೆ ಬರೋಬ್ಬರಿ 50 ಲಕ್ಷದವರೆಗೂ ತೆರಬೇಕಾಗುತ್ತದೆ.
ಮೂಲಗಳ ಪ್ರಕಾರ, ಗ್ರಾಹಕ ವ್ಯವಹಾರಗಳ ಇಲಾಖೆಯು ರಚಿಸಿದ ಸಮಿತಿಯು ನಕಲಿ ವಿಮರ್ಶೆಗಳಿಗೆ ಸಂಬಂಧಿಸಿದ ಮಾನದಂಡಗಳಲ್ಲಿ ಬದಲಾವಣೆಗಳನ್ನು ಅಂತಿಮಗೊಳಿಸುತ್ತಿದೆ. ಇದನ್ನು 2021 ರಲ್ಲಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ರೂಪಿಸಲಾಗಿದೆ.
ಒಮ್ಮೆ ಈ ಮಾನದಂಡಗಳಲ್ಲಿ ಬದಲಾವಣೆಗಳನ್ನು ಮಾಡಿದರೆ, ಅವು ಕಡ್ಡಾಯವಾಗುತ್ತವೆ. ನಕಲಿ ವಿಮರ್ಶೆಗಳನ್ನು ಪೋಸ್ಟ್ ಮಾಡಲು ಮತ್ತು ಪ್ರತಿಸ್ಪರ್ಧಿ ಘಟಕಗಳ ನಕಲಿ ವಿಮರ್ಶೆಗಳನ್ನು ಪಡೆಯಲು ಮುಂದಾದರೆ ಇ-ಕಾಮರ್ಸ್ ಸಂಸ್ಥೆಗಳಿಗೆ ದಂಡವನ್ನು ವಿಧಿಸುತ್ತವೆ. ಹಲವಾರು ಇ-ಕಾಮರ್ಸ್ ಕಂಪನಿಗಳು ಪರಸ್ಪರ ವಿರುದ್ಧವಾಗಿ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತವೆ. ಹೀಗಾಗಿ ಈ ಕ್ರಮಕ್ಕೆ ಗ್ರಾಹಕ ವ್ಯವಹಾರಗಳ ಇಲಾಖೆ ಮುಂದಾಗಿದೆ.

ನಕಲಿ ವಿಮರ್ಶೆಗಳ ಮೇಲಿನ ಬಿಐಎಸ್ ಮಾನದಂಡಗಳು, ಈಗಿನಂತೆ, ಸ್ವಯಂಪ್ರೇರಿತವಾಗಿವೆ. ಗ್ರಾಹಕ ಸಂರಕ್ಷಣಾ ಕಾಯಿದೆ 2019 ರ ನಿಬಂಧನೆಗಳ ಪ್ರಕಾರ, ಉತ್ಪನ್ನಗಳ ನಕಲಿ ವಿಮರ್ಶೆಗಳನ್ನು ಪೋಸ್ಟ್ ಮಾಡಲು ಮತ್ತು ಹೆಚ್ಚಿನ ರೇಟಿಂಗ್‌ಗಳನ್ನು ನೀಡಲು ಇ-ಕಾಮರ್ಸ್ ಘಟಕಗಳಿಗೆ ದಂಡವನ್ನು ವಿಧಿಸಲಾಗುತ್ತದೆ. ಈ ದಂಡದ ಮೊತ್ತವು 10 ಲಕ್ಷದಿಂದ 50 ಲಕ್ಷದವರೆಗೆ ಇರಬಹುದು. ಇದರ ಹೊರತಾಗಿ, ಗ್ರಾಹಕ ವ್ಯವಹಾರಗಳ ಇಲಾಖೆಯು ಸುಳ್ಳು ಇ- ಕಾಮರ್ಸ್ ಘಟಕಗಳ ಮೇಲೆ ಸ್ವಯಂಪ್ರೇರತವಾಗಿ ಕ್ರಮಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಗ್ರಾಹಕ ವ್ಯವಹಾರಗಳ ಇಲಾಖೆಯು ರಚಿಸಿದ ಸಮಿತಿಯು ಒಂದು ವಾರದೊಳಗೆ ನಕಲಿ ವಿಮರ್ಶೆಗಳ ಕುರಿತು ಬಿಐಎಸ್ ಮಾನದಂಡಗಳಲ್ಲಿ ಬದಲಾವಣೆಗಳನ್ನು ಸೂಚಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಈ ಕುರಿತು ಸಮಿತಿ ಸಭೆ ನಡೆಸಿದ್ದು, ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಹಲವು ಸಂಬಂಧಪಟ್ಟವರು ಉಪಸ್ಥಿತರಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications