ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಗಡುವು ವಿಸ್ತರಣೆ
ನವದೆಹಲಿ, ಜುಲೈ 6: ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 31, 2021 ರ ತನಕ ಲಿಂಕ್ ಮಾಡಲು ಅವಕಾಶ ಇರಲಿದೆ.
ಈ ಮುನ್ನ 2020ರ ಮಾರ್ಚ್ 31ರ ಗಡುವು ನೀಡಲಾಗಿತ್ತು. ಬಳಿಕ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಅವಧಿಯನ್ನು ಜೂನ್ 30ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಅವಧಿ ವಿಸ್ತರಿಸಲಾಗಿದೆ.
ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. 2020ರ ಜನವರಿ ವರೆಗಿನ ಅಂಕಿ ಅಂಶಗಳಂತೆ 30.75 ಕೋಟಿಗೂ ಹೆಚ್ಚು ಜನರು ಪ್ಯಾನ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಿದ್ದಾರೆ.
Understanding & keeping in mind the times that we are in, we have extended deadlines. PAN-AADHAAR linking can be done till 31st March, 2021: Income Tax Department, Government of India #COVID19 pic.twitter.com/hEwp2LGwOm
— ANI (@ANI) July 6, 2020
ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ನಲ್ಲಿ ಜನರು ಬಳಕೆದಾರರಾಗಿ ಹೆಸರು ನೋಂದಣಿ ಮಾಡಿಸಿದ್ದರೆ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗಿರುತ್ತದೆ. ನೋಂದಣಿ ಆಗಿರದಿದ್ದರೆ ಅದೇ ವೆಬ್‌ಸೈಟ್‌ನಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಜೋಡಣೆ ಮಾಡಬಹುದಾಗಿದೆ.

ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಏನ್ ಮಾಡಬೇಕು?
ಒಂದು ವೇಳೆ ನಿಮ್ಮ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡಿದ್ದರೆ ಗಾಬರಿಯಾಗಬೇಡಿ, ಹೊಸ ಆದೇಶದಂತೆ ಪ್ಯಾನ್ ಕಾರ್ಡ್ ಮುಂದಿನ ವರ್ಷ ತನಕ ಚಾಲನೆಯಲ್ಲಿರಲಿದೆ. ಆದರೆ, ಆಧಾರ್ ಜೊತೆ ಜೋಡಿಸಬೇಕು. ಒಂದು ವೇಳೆ ನಿಷ್ಕ್ರಿಯವಾದರೆ ವ್ಯವಹಾರಕ್ಕೆ ಬಳಸುವಂತಿಲ್ಲ. ಆದರೆ ಗುರುತಿನ ಚೀಟಿಯಾಗಿ ಬಳಸಿಕೊಳ್ಳಬಹುದು. ಉದಾಹರಣೆಗೆ ಬ್ಯಾಂಕ್ ಖಾತೆ ತೆರೆಯಲು ಅಥವಾ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಬಳಸಿದರೆ ನಿಮಗೆ ಯಾವುದೇ ದಂಡ ವಿಧಿಸುವುದಿಲ್ಲ. ಆದರೆ ಹಣ ಡೆಪಾಸಿಟ್ ಮಾಡಲು, ಹಣ ವರ್ಗಾವಣೆ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡಲು ಸಕ್ರಿಯ ಪ್ಯಾನ್ ಕಾರ್ಡ್ ಅವಶ್ಯಕತೆ ಇದೆ.

ಆಧಾರ್ ಗೆ ಲಿಂಕ್ ಆಗಿದೆಯೇ ಅಥವಾ ಇಲ್ಲವೇ
ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂದು ಚೆಕ್ ಮಾಡುವುದು ಹೇಗೆ?:
* ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಿ.
* ಮೇಲ್ಭಾಗದ 'ಕ್ವಿಕ್ ಲಿಂಕ್ಸ್' ಮೇಲೆ 'ಲಿಂಕ್ ಆಧಾರ್' ಕ್ಲಿಕ್ ಮಾಡಿ.
* ನಂತರ ಸ್ಕ್ರೀನ್ ಮೇಲೆ ಹೊಸ ಪೇಜ್ ತೆರೆಯುತ್ತದೆ.
* ಈ ಪುಟದ ಮೇಲ್ಭಾಗದಲ್ಲಿ ಹೈಪರ್ಲಿಂಕ್ ಇರುತ್ತದೆ, ಅದನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗಿರುತ್ತದೆ, ನೀವು ಈಗಾಗಲೇ ಆಧಾರ್ ಲಿಂಕ್ ಮಾಡಲು ವಿನಂತಿಸಿದ್ದರೆ ಸ್ಟೇಟಸ್ ಪರಿಶೀಲಿಸಿ ಮೇಲೆ ಕ್ಲಿಕ್ ಮಾಡಿ.
* ಈ ಹೈಪರ್ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ನಿಮ್ಮ ಪ್ಯಾನ್ ಮತ್ತು ಆಧಾರ್ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ.
*'ವ್ಯೂ ಲಿಂಕ್ ಆಧಾರ್ ಸ್ಥಿತಿ' ಕ್ಲಿಕ್ ಮಾಡಿ. ಅದರ ಫಲಿತಾಂಶದಲ್ಲಿ ಪ್ಯಾನ್ ನಿಮ್ಮ ಆಧಾರ್ ಗೆ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದು ನಿಮಗೆ ತಿಳಿಯುತ್ತದೆ.

ಜುಲೈ 1ರಿಂದ ಕಾರ್ಡ್ ನಿಷ್ಕ್ರಿಯವಾಗುತ್ತದೆ ಎಂಬ ಭಯಬಿಡಿ
ಜೂನ್ 30ರ ಮೊದಲು ಆಧಾರ್‌ಗೆ ಲಿಂಕ್ ಮಾಡದಿದ್ದರೆ 10 ಸಾವಿರ ರೂಪಾಯಿಗಳ ದಂಡವನ್ನು ಪಾವತಿಸಲು ಸಿದ್ಧರಾಗಿರಿ. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ನಿಮ್ಮ ಕಾರ್ಡ್ ನಿಷ್ಕ್ರಿಯವಾಗಲಿದೆ. ಆನಂತರ ಒಂದು ವೇಳೆ ಪ್ಯಾನ್ ಕಾರ್ಡ್ ಬಳಸಿದರೆ 10,000 ರುಪಾಯಿ ದಂಡ ತೆರಬೇಕಾಗುತ್ತದೆ. ಒಂದು ವೇಳೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗದಿದ್ದರೆ ಜುಲೈ 1ರಿಂದ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಈ ಸಂದರ್ಭದಲ್ಲಿ ಹೊಸ ಪ್ಯಾನ್ ಕಾರ್ಡ್ ಅರ್ಜಿ ಸಲ್ಲಿಸುವುದು ಬೇಡ. ಆಧಾರ್ ಜೊತೆ ಲಿಂಕ್ ಮಾಡಿದರೆ ಸಾಕು ಮತ್ತೆ ಪ್ಯಾನ್ ಕಾರ್ಡ್ ಸಕ್ರಿಯವಾಗುತ್ತದೆ.

ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ
ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು. ಇದು ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ. ಇದರಲ್ಲಿ ಭೌಗೋಳಿಕ ಮಾಹಿತಿ, ಅರ್ಜಿದಾರರನ ಭಾವಚಿತ್ರ ಇರಲಿದೆ. ಎಲ್ಲಾ ಮಾಹಿತಿಯೂ encrypt ಆಗಿರುವುದರಿಂದ ಮಾಹಿತಿ ಸುರಕ್ಷವಾಗಿರಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications