ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2ನೇ ಹಾಗೂ 3ನೇ ಹಂತದ ನಗರಗಳಲ್ಲಿ ಹೂಡಿಕೆಗೆ ಆಹ್ವಾನಿಸಿದ ಶೆಟ್ಟರ್

|
Google Oneindia Kannada News

ಬೆಂಗಳೂರು, ಫೆಬ್ರವರಿ 04: ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಕರೆ ನೀಡಿದರು.

ಇಂದು ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಏರೋ ಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ರಾಜ್ಯದಲ್ಲಿ ಇರುವ ವಿಫುಲ ಅವಕಾಶಗಳ ತಿಳಿಸುವ ಸಮಾವೇಶದಲ್ಲಿ ಅವರು ಮಾತನಾಡಿದರು.

ತುಮಕೂರಿನಲ್ಲಿ ಕೈಗಾರಿಕಾ ನೋಡ್‌: 88,500 ಉದ್ಯೋಗ ಸೃಷ್ಟಿತುಮಕೂರಿನಲ್ಲಿ ಕೈಗಾರಿಕಾ ನೋಡ್‌: 88,500 ಉದ್ಯೋಗ ಸೃಷ್ಟಿ

ಸಮಾವೇಶದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಸಿಐಐ ಅಧ್ಯಕ್ಷ ಸಂದೀಪ್ ಸಿಂಗ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಕರ್ನಾಟಕ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ

ಕರ್ನಾಟಕ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ

ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ. ಇತ್ತೀಚಿನ ಹಲವಾರು ನೂತನ ನೀತಿಗಳು ಹಾಗೂ ಕಾಯ್ದೆಗಳು ರಾಜ್ಯವನ್ನು ದೇಶದಲ್ಲಿಯೇ ಬಂಡವಾಳ ಹೂಡಿಕೆಯ ಪ್ರಮುಖ ರಾಜ್ಯವನ್ನಾಗಿಸಿದೆ. ನೀತಿ ಆಯೋಗದ ಸೂಚ್ಯಾಂಕದಲ್ಲಿ ಸತತ ಎರಡು ವರ್ಷಗಳ ಕಾಲ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಸಂಶೋಧನೆ ಹಾಗೂ ಅಭಿವೃದ್ದಿಯ ಪ್ರಮುಖ ಕೇಂದ್ರವಾಗಿದ್ದು, ಸ್ಟಾರ್ಟ್‌ ಅಪ್‌ಗಳ ರಾಜಧಾನಿ ಎಂದೇ ಹೆಸರುವಾಸಿಯಾಗಿದೆ. ಕೈಗಾರಿಕಾ ಸೌಲಭ್ಯ ಅಧಿನಿಯಮ ನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಬಹಳ ಸುಲಭವಾಗಿದೆ ಎಂದು ಹೇಳಿದರು.

ಕೈಗಾರಿಕೆಗಳು ಬಂಡವಾಳ ಹೂಡಿಕೆಗೆ ಮುಂದಾಗುತ್ತಿವೆ

ಕೈಗಾರಿಕೆಗಳು ಬಂಡವಾಳ ಹೂಡಿಕೆಗೆ ಮುಂದಾಗುತ್ತಿವೆ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೈಗಾರಿಕೆಗಳು ಬಂಡವಾಳ ಹೂಡಿಕೆಗೆ ಮುಂದಾಗುತ್ತಿವೆ. ಆದರೆ, ರಾಜ್ಯದ ಇತರ ಎರಡನೇ ಹಾಗೂ ಮೂರನೇ ಹಂತದ ಜಿಲ್ಲೆಗಳಲ್ಲೂ ಬಂಡವಾಳ ಆಕರ್ಷಿಸಲು ಅನುಕೂಲ ಮಾಡಿಕೊಡುವಂತಹ ಕ್ರಾಂತಿಕಾರಿ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಲಾಗಿದೆ. ಇದು ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಹೂಡಿಕೆ ಮಾಡುವ ಕೈಗಾರಿಕೆಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಿದೆ. ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆ ಹಾಗೂ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಉತ್ತಮ ಸಾರಿಗೆ ಸಂಫರ್ಕ, ಉತ್ತಮ ಮಾನವ ಸಂಪನ್ಮೂಲ ಸೇರಿದಂತೆ ಹಲವಾರು ಸೌಲಭ್ಯಗಳನ್ನು ರಾಜ್ಯ ಸರಕಾರ ನೀಡುತ್ತಿದೆ. ಇದರ ಉಪಯೋಗವನ್ನು ಮಾಡಿಕೊಳ್ಳುವಂತೆ ಉದ್ಯಮಿಗಳೀಗೆ ಸಚಿವರು ಕರೆ ನೀಡಿದರು.

2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ

ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ

ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ

ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಮಾತನಾಡಿ, ಕರ್ನಾಟಕ ರಾಜ್ಯ ಏರೋಸ್ಪೇಸ್‌ ಹಾಗೂ ರಕ್ಷಣಾ ನೀತಿಯನ್ನು ಘೋಷಿಸಿರುವ ರಾಜ್ಯವಾಗಿದೆ. ಇತ್ತೀಚಿಗೆ ಘೋಷಣೆ ಮಾಡಿರುವ ನೂತನ ಕೈಗಾರಿಕಾ ನೀತಿಯಲ್ಲಿಯೂ ಕೂಡಾ ಈ ಕ್ಷೇತ್ರಕ್ಕೆ ವಿಶೇಷ ಒತ್ತನ್ನು ನೀಡಲಾಗಿದೆ. ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ಹೂಡಿಕೆಗೆ ಹಲವಾರು ಅವಕಾಶಗಳಿದ್ದು, ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ

ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ

ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ಹೆಚ್ಚಾಗಿವೆ. ಇದು ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಚಿಂತಿಸುವಂತೆ ಮಾಡಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್‌, ಮಹಾರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು. ಕೈಗಾರಿಕಾಭಿವೃದ್ದಿಯಲ್ಲಿ ಹಿಂದೆ ಉಳಿದಿರುವ ಜಿಲ್ಲೆಗಳಲ್ಲಿ ಹೂಡಿಕೆ ಮಾಡಲು ಮುಂದಾಗುವ ಉದ್ಯಮಿಗಳಿಗೆ ಹಲವಾರು ರಿಯಾಯಿತಿ ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.

ಏರೋ ಇಂಡಿಯಾ: ಮನೆಯಿಂದಲೇ ಲೈವ್ ಆಗಿ ಕಣ್ತುಂಬಿಕೊಳ್ಳಲು ಅವಕಾಶಏರೋ ಇಂಡಿಯಾ: ಮನೆಯಿಂದಲೇ ಲೈವ್ ಆಗಿ ಕಣ್ತುಂಬಿಕೊಳ್ಳಲು ಅವಕಾಶ

Recommended Video

ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಇಂದು ತೆರೆ | Oneindia Kannada

English summary
Aero India 2021:Industry Minister of Karnataka Jagadish Shettar today invited inverters to investment in Tier II cities of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X