ವಿಜಿ ಸಿದ್ದಾರ್ಥ ಅಕಾಲಿಕ ಮರಣ, ಸಂಸ್ಥೆ ಮೌಲ್ಯ, ಸಿಸಿಡಿ ಷೇರು ಪಾತಾಳಕ್ಕೆ
ಬೆಂಗಳೂರು, ಆಗಸ್ಟ್ 14: ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ.
ಜುಲೈ 29ರಂದು ಮಂಗಳೂರು- ಉಳ್ಳಾಲ ಬಳಿಯ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ದಾರ್ಥ, ಜುಲೈ 31ರಂದು ಹೊಯ್ಗೆ ಬಜಾರ್ ಸಮೀಪ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ಸಿದ್ದಾರ್ಥ ಸಾವಿನ ಸುದ್ದಿಯಿಂದ ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳಿಗೆ ಭಾರಿ ಹೊಡೆತ ಬಿದ್ದಿತ್ತು. ಆ ದಿನದ ವಹಿವಾಟಿನಲ್ಲಿ ಶೇ20ರಷ್ಟು ಕುಸಿತ ಕಂಡ ಕಾಫಿ ಡೇ ಷೇರುಗಳು 52 ವಾರಗಳಲ್ಲೇ ಅತ್ಯಧಿಕ ಕಳಪೆ ಸಂಖ್ಯೆಯನ್ನು ಕಂಡಿತ್ತು. ಒಟ್ಟಾರೆ, ಈ ವಾರದಲ್ಲಿ 22.37% ಕುಸಿತ ಕಂಡಿದೆ. ಸದ್ಯ ಬಿಎಸ್ಇಯಲ್ಲಿ 65.95 ರು(ಇಂದು 4.97% ಕುಸಿತ ಕಂಡು 3.45 ರು ಕಳೆದುಕೊಂಡಿದೆ)
ಕೆಫೆ ಕಾಫಿ ಡೇ ಮಾಲೀಕರಾದ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ಹೂಡಿಕೆದಾರರು ಒಟ್ಟು 2,437.29 ಕೋಟಿ ರು ಕಳೆದುಕೊಂಡಿದ್ದಾರೆ. ಜುಲೈ 29ರಂದು 4, 067.65 ಕೋಟಿ ರು ಇದ್ದ ಸಂಸ್ಥೆಯ ಮಾರುಕಟ್ಟೆ ಮೌಲ್ಯ 1630. 86 ಕೋಟಿ ರುಗೆ ಕುಸಿದಿದೆ.
ಈ ನಡುವೆ ಟ್ಯಾಂಗ್ಲಿನ್ ಡೆವಲ್ಮೆಂಟ್ಸ್ ಒಡೆತನದಲ್ಲಿರುವ 90 ಎಕರೆ ವಿಸ್ತೀರ್ಣ ಗ್ಲೋಬಲ್ ವಿಲೇಜ್ ಟೆಕ್ ಪಾರ್ಕ್ ಮಾರಾಟಕ್ಕಿಡಲಾಗಿದ್ದು, ಬ್ಲಾಕ್ ಸ್ಟೋನ್ ಸಂಸ್ಥೆ ಖರೀದಿಗೆ ಮುಂದಾಗಿರುವ ಸುದ್ದಿ ಬಂದಿದೆ. 2,600 ಕೋಟಿ ರು ನಿಂದ 3,000 ಕೋಟಿ ರು ಮೌಲ್ಯಕ್ಕೆ ಮಾರಾಟವಾಗುವ ಸಾಧ್ಯತೆಯಿದೆ.
ಮಾರ್ಚ್ 2019ರ ಎಣಿಕೆಯಂತೆ ಭಾರತದಲ್ಲಿ ಸುಮಾರು 1,752 ಕೆಫೆಗಳನ್ನು ಹೊಂದಿರುವ ಕೆಫೆ ಕಾಫಿ ಡೇ ಸದ್ಯ ದೇಶದಲ್ಲಿ ಮುಂಚೂಣಿಯಲ್ಲಿರುವ ಕಾಫಿ ಸಂಸ್ಥೆಯಾಗಿದೆ. ಭಾರತದಲ್ಲಿ ವಿಸ್ತೃತವಾದ ಕಾಫಿ ಮಳಿಗೆಯನ್ನು ವಿಸ್ತರಿಸುವಲ್ಲಿ ಸಂಸ್ಥೆಯ ಸ್ಥಾಪಕ ವಿಜಿ ಸಿದ್ದಾರ್ಥ ಅವರ ಪಾತ್ರ ದೊಡ್ಡದು.
1996ರಿಂದ ಇಲ್ಲಿ ತನಕ ಹಲವು ಏರಿಳಿತ ಕಂಡಿರುವ ಸ್ವದೇಶಿ ಬ್ರ್ಯಾಂಡ್ ಕೆಫೆ ಕಾಫಿ ಡೇ ಈಗ ಅಮೆರಿಕದ ಕೋಕ ಕೋಲಾ ಕಂಪನಿ ಪಾಲಾಗುವ ಮಾತುಕತೆ ನಡೆದಿತ್ತು. ಕಾಫಿ ಡೇ ಸಂಸ್ಥೆ ಆದಾಯ 1,777 ಕೋಟಿ ರು ಹಾಗೂ 2020ರ ವೇಳೆಗೆ 2250 ಕೋಟಿ ರು ಗಳಿಕೆ ಗುರಿ ಹೊಂದಿದ್ದರು. ಇತ್ತೀಚೆಗೆ ಸಿದ್ದಾರ್ಥ ಅವರು ಮೈಂಡ್ ಟ್ರೀಯಲ್ಲಿದ್ದ ತಮ್ಮ 20.3% ಷೇರುಗಳನ್ನು ಎಲ್ ಅಂಡ್ ಟಿ ಕಂಪನಿಗೆ ಮಾರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications