ಮಾರ್ಚ್ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್
ನವದೆಹಲಿ, ನವೆಂಬರ್ 18: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನ ಸಂಸ್ಥೆ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಕಂಪೆನಿಗಳನ್ನು 2020ರ ಮಾರ್ಚ್ ವೇಳೆಗೆ ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಷ್ಟದಲ್ಲಿರುವ ಈ ಎರಡೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಈ ಹಣಕಾಸು ವರ್ಷದ ಅಂತ್ಯಗೊಳಗೆ ಮಾರಾಟಮಾಡಲು ಸರ್ಕಾರ ಗಮನ ನೀಡಿದೆ ಎಂದು ಹೇಳಿದರು.
ಎರಡೂ ಸಂಸ್ಥೆಗಳನ್ನು ಈ ವರ್ಷದಲ್ಲಿ ಮಾರಾಟ ಮಾಡುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದೇವೆ. ಮೂಲ ವಾಸ್ತವಗಳು ಇಲ್ಲಿ ಪ್ರಮುಖ ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಹಣಕಾಸು ವರ್ಷದಲ್ಲಿ 1 ಲಕ್ಷ ಕೋಟಿ ರೂ ಸಂಗ್ರಹಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಉದ್ದೇಶದಲ್ಲಿ ಈ ಮಾರಾಟ ಮಹತ್ವದ ಪಾತ್ರ ವಹಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರವು ತನ್ನ ತಪ್ಪು ಆರ್ಥಿಕ ನೀತಿಗಳಿಂದ ಮಾಡಿದ ನಷ್ಟವನ್ನು ಸರಿದೂಗಿಸಲು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷಗಳು ಟೀಕಿಸಿವೆ.

ಹೂಡಿಕೆದಾರರಲ್ಲಿ ಆಸಕ್ತಿ
ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರಲ್ಲಿ ಅಪಾರ ಆಸಕ್ತಿ ಇದೆ ಎಂಬುದು ಅಂತಾರಾಷ್ಟ್ರೀಯ ರೋಡ್‌ಶೋಗಳಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ. ಒಂದು ವರ್ಷದ ಹಿಂದೆ ಏರ್‌ಲೈನ್ ಸಂಸ್ಥೆಯ ಮಾರಾಟಕ್ಕೆ ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ವ್ಯಕ್ತವಾಗದ ಕಾರಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.

ಆರ್ಥಿಕ ಕುಸಿತದಿಂದ ಸುಧಾರಣೆ
ತೆರಿಗೆ ಸಂಗ್ರಹದ ಒತ್ತಡದ ಸ್ಥಿತಿಯಲ್ಲಿ ಬಂಡವಾಳ ಹಿಂತೆಗೆತ ಕ್ರಮದಿಂದ ಸರ್ಕಾರದ ಆದಾಯ ಹೆಚ್ಚುವ ನಿರೀಕ್ಷೆಯಿದೆ. ಆರ್ಥಿಕ ಕುಸಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಹಲವು ವಲಯಗಳು ಈ ಒತ್ತಡದಿಂದ ಹೊರಬರುತ್ತಿವೆ ಎಂದು ಹೇಳಿದರು.

ಜಿಎಸ್‌ಟಿ ಸಂಗ್ರಹ ಸುಧಾರಣೆ
ಕುಂಠಿತವಾಗಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಕೆಲವು ವಲಯಗಳಲ್ಲಿನ ಸುಧಾರಣೆಯಿಂದಾಗಿ ಮಾರಾಟದಲ್ಲಿ ಹೆಚ್ಚಳವಾಗಿ ಸರಕು ಮತ್ತು ಸೇವೆಗಳ ತೆರಿಗೆ ಸಂಗ್ರಹವು ಮತ್ತೆ ಸುಧಾರಣೆಯ ಹಾದಿಗೆ ಮರಳುವ ನಿರೀಕ್ಷೆಯನ್ನು ವ್ಯಕ್ತಪಡಿಸಿದರು.

ಸಾಲಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ
ಗ್ರಾಹಕ ಭಾವನೆಗಳು ಮತ್ತೆ ಪುಟಿದೆದ್ದಿರುವ ಅನೇಕ ಲಕ್ಷಣಗಳು ಕಾಣಿಸುತ್ತಿವೆ. ಹಬ್ಬದ ಅವಧಿಗಳಲ್ಲಿ ಬ್ಯಾಂಕುಗಳು ನಡೆಸಿದ ಸಾಲಮೇಳದಂತಹ ಕಾರ್ಯಕ್ರಮಗಳಿಂದ ಸುಮಾರು 1.8 ಲಕ್ಷ ಕೋಟಿ ಮೊತ್ತದ ಸಾಲಗಳನ್ನು ಮಂಜೂರು ಮಾಡಿರುವುದರಿಂದ ಇದು ಸಾಧ್ಯವಾಗಿದೆ. 'ಗ್ರಾಹಕರ ಆತ್ಮವಿಶ್ವಾಸ ಮರಳಿ ಬರುತ್ತಿಲ್ಲ ಎಂದಾದರೆ ಬ್ಯಾಂಕುಗಳು ಆರಂಭಿಸಿರುವ ಎರಡು ಕಾರ್ಯಕ್ರಮಗಳಲ್ಲಿ ಜನರು ಇಡೀ ದೇಶದಾದ್ಯಂತ ಅಷ್ಟು ಪ್ರಮಾಣದ ಸಾಲಗಳನ್ನು ಹೇಗೆ ಪಡೆದುಕೊಳ್ಳುತ್ತಾರೆ?' ಎಂದು ನಿರ್ಮಲಾ ಕೇಳಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications