ಯುಗಾದಿಗೆ ಚಿನ್ನ ಖರೀದಿಸುವವರಿಗೆ ಶಾಕ್: ದಾಖಲೆ ಮಟ್ಟದಲ್ಲಿ ಹೆಚ್ಚಿದ ಬಂಗಾರ & ಬೆಳ್ಳಿಯ ದರ
ಬೆಂಗಳೂರು, ಏಪ್ರಿಲ್ 06: ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು, ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ. ಶುಭಕಾರ್ಯಗಳು ಕೂಡ ಭರದಿಂದ ಸಾಗುತ್ತಿದ್ದು, ಶುಭ ಸಮಾರಂಭಗಳಿಗೆ ಚಿನ್ನಾಭರಣಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ. ಕಳೆದ ಆರು ತಿಂಗಳಿಗೆ ಹೋಲಿಸಿದರೆ ಚಿನ್ನ ಮತ್ತು ಬೆಳ್ಳಿಯ ದರ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ.

ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 65,350 ರೂಪಾಯಿ ಇದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 71,290 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 8,200 ರೂಪಾಯಿ ಇದೆ. ಹಾಗಾದರೆ ಇಂದು (ಏಪ್ರಿಲ್ 06) ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.
ಒಂದು ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಚಿನ್ನದ ದರ - 6,535 ರೂಪಾಯಿ
* 24 ಕ್ಯಾರೆಟ್ ಚಿನ್ನದ ದರ - 7,129 ರೂಪಾಯಿ
10 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ- 65,350 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 71,290 ರೂಪಾಯಿ
8 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ - 52,280 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 57,032 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
* ಬೆಂಗಳೂರು-65,350 ರೂಪಾಯಿ
* ಚೆನ್ನೈ- 66,150 ರೂಪಾಯಿ
*ಮುಂಬೈ-65,350 ರೂಪಾಯಿ
* ಕೇರಳ - 65,350 ರೂಪಾಯಿ
* ಕೋಲ್ಕತ್ತಾ- 65,350 ರೂಪಾಯಿ
*ಅಹ್ಮದಾಬಾದ್-65,400 ರೂಪಾಯಿ
* ನವದೆಹಲಿ-65,500 ರೂಪಾಯಿ
*ಬರೋಡಾ-65,400 ರೂಪಾಯಿ
*ಪುಣೆ-5,350 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
* ಬೆಂಗಳೂರು-8,200 ರೂಪಾಯಿ
* ಚೆನ್ನೈ- 8,700 ರೂಪಾಯಿ
* ಮುಂಬೈ- 8,350 ರೂಪಾಯಿ
* ಕೋಲ್ಕತ್ತಾ- 8,350 ರೂಪಾಯಿ
* ನವದೆಹಲಿ- 8,350 ರೂಪಾಯಿ












Click it and Unblock the Notifications