April 7th Gold Price: ಕೊಂಚ ಇಳಿದ ಬಂಗಾರ ದರ, ಇಂದಿನ ಚಿನ್ನ & ಬೆಳ್ಳಿ ಬೆಲೆ ವಿವರ
ಬೆಂಗಳೂರು, ಏಪ್ರಿಲ್ 07: ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು, ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೇಡಿಕೆ ಹೆಚ್ಚಾಗಿ ಪೂರೈಕೆ ಕಡಿಮೆಯಾಗಿರುವ ಕಾರಣ ಚಿನ್ನದ ದರ ದಾಖಲೆ ಮಟ್ಟದಲ್ಲಿ ಏರಿಕೆ ಕಾಣುತ್ತಿದೆ.
ಭಾರತದಲ್ಲಿ ಚಿನ್ನ ಉತ್ಪಾದನಾ ಕೇಂದ್ರಗಳಿಲ್ಲದಿರುವುದು ಹಾಗೂ ಕೇಂದ್ರೀಯ ಬ್ಯಾಂಕ್‌ಗಳು ಚಿನ್ನ ಖರೀದಿಸುವುದರಿಂದ ಚಿನ್ನದ ಬೆಲೆ ಹೆಚ್ಚಾಗುತ್ತಿದೆ. ಇನ್ನು ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ. ಕಳೆದ ಆರು ತಿಂಗಳಿಗೆ ಹೋಲಿಸಿದರೆ ಚಿನ್ನ ಮತ್ತು ಬೆಳ್ಳಿಯ ದರ ಅತಿ ಹೆಚ್ಚು ಏರಿಕೆಯಾಗಿದೆ.

ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 64,150 ರೂಪಾಯಿ ಇದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 69,980 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 8,170 ರೂಪಾಯಿ ಇದೆ. ಹಾಗಾದರೆ ಇಂದು (ಏಪ್ರಿಲ್ 07) ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.
ಒಂದು ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಚಿನ್ನದ ದರ - 6,415 ರೂಪಾಯಿ
* 24 ಕ್ಯಾರೆಟ್ ಚಿನ್ನದ ದರ - 6,998 ರೂಪಾಯಿ
10 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ- 64,150 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 69,980 ರೂಪಾಯಿ
8 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ - 51,320 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 55,984 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
* ಬೆಂಗಳೂರು-64,150 ರೂಪಾಯಿ
* ಚೆನ್ನೈ-65,100 ರೂಪಾಯಿ
*ಮುಂಬೈ-64,150 ರೂಪಾಯಿ
* ಕೇರಳ - 64,150 ರೂಪಾಯಿ
* ಕೋಲ್ಕತ್ತಾ-64,150 ರೂಪಾಯಿ
* ಜೈಪುರ್- 64,300 ರೂಪಾಯಿ
* ಭುವನೇಶ್ವರ್-64,150 ರೂಪಾಯಿ
*ಅಹ್ಮದಾಬಾದ್-64,200 ರೂಪಾಯಿ
*ಲಕ್ನೋ- 64,300 ರೂಪಾಯಿ
* ನವದೆಹಲಿ- 64,300 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
* ಬೆಂಗಳೂರು-8,150 ರೂಪಾಯಿ
* ಚೆನ್ನೈ- 8,500 ರೂಪಾಯಿ
* ಮುಂಬೈ-8,170 ರೂಪಾಯಿ
* ಕೋಲ್ಕತ್ತಾ-8,170 ರೂಪಾಯಿ
* ನವದೆಹಲಿ-8,170 ರೂಪಾಯಿ












Click it and Unblock the Notifications