Arecanut price: ಕ್ವಿಂಟಾಲ್ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಅಕ್ಟೋಬರ್ 16ರ ದರಪಟ್ಟಿ
Arecanut Price: ರಾಜ್ಯದಲ್ಲಿ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಭರ್ಜರಿಯಾಗುತ್ತಲಿದೆ. ಇನ್ನೂ ಇದೀಗ ದೀಪಾವಳಿ ಸಮೀಪಿಸುತ್ತಿದ್ದಂತೆ ನಿರೀಕ್ಷೆಗೂ ಮೀರಿ ಏರಿಕೆ ಆಗಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಹಾಗಾದ್ರೆ ಪ್ರಸತುತ ದರಪಟ್ಟಿ ಎಷ್ಟಿದ ಎನ್ನುವ ಸಂಪೂರ್ಣ ಅಂಕಿಅಂಶಗಳವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಅಡಿಕೆ ಧಾರಣೆ ಕೊಯ್ಲಿನ ಸಮಯದಲ್ಲೇ ಭರ್ಜರಿ ಏರಿಕೆಯಾಗಿದೆ. ಇನ್ನು ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಅಕ್ಟೋಬರ್ 16) ದಾವಣಗೆರೆ ಮಾರುಕಟ್ಟೆಯಲ್ಲಿ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಗಿದೆ. ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 16) ಕ್ವಿಂಟಾಲ್ ರಾಶಿ ಅಡಿಕೆ ದರ ಏರಿಕೆ ಆಗಿದೆ. ಪ್ರಸ್ತುತ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 67,569 ರೂಪಾಯಿ, ಕನಿಷ್ಠ ದರ 60,019 ರೂಪಾಯಿ ಇದ್ದು, ಸರಾಸರಿ ಬೆಲೆ 66,857 ರೂಪಾಯಿ ಇದೆ. ಕಳೆದ ಕೆಲ ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ನಂತರ ಏರಿಕೆಯಾಗಿ ಬಳಿಕ ಇಳಿಕೆಯತ್ತ ಹೊರಟಿದ್ದ ದರ ಇದೀಗ ಮತ್ತೆ ಭರ್ಜರಿ ಏರಿಕೆಯ ಹಾದಿ ಹಿಡಿದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲಿತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಇದೀಗ ದೀಪಾವಳಿ ಸಮಯದಲ್ಲೇ 67,000 ರೂಪಾಯಿ ಸಮೀಪದತ್ತ ಬಂದಿದೆ. ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟು ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಆಗಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಬಳಿಕ ಅಕ್ಟೋಬರ್ ಎರಡನೇ ವಾರದವರೆಗೂ ಸತತವಾಗಿ ಏರಿಕೆಯಾಗುತ್ತಾ ಬಂದಿದೆ.
ಇನ್ನು 2025ರ ಜೂನ್ ಆರಂಭದಲ್ಲೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದೆ. ಈ ಹಿನ್ನೆಲೆ ಫಸಲು ಸಹ ಅಷ್ಟೇ ಚೆನ್ನಾಗಿ ಬಂದಿದೆ. ಇದೀಗ ಸದ್ಯ ಧಾರಣೆ ಏರುಗತಿಯಲ್ಲಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಭಾರೀ ಏರಿಕೆಯಾಗುವ ಭರವಸೆ ಅಡಿಕೆ ಬೆಳೆಗಾರರದ್ದಾಗಿದೆ. ಮತ್ತೊಂದೆಡೆ ಇದೀಗ ಕೊಯ್ಲು ಸಂದರ್ಭದಲ್ಲೇ ಅಡಿಕೆ ಧಾರಣೆ ಏರುತ್ತಿರುವುದು ಬೆಳೆಗಾರರಿಗೆ ಸಂತಸ ಹೆಚ್ಚಿದೆ.












Click it and Unblock the Notifications