ಆಗಸ್ಟ್ ತಿಂಗಳಲ್ಲಿ ದೇಶದ ವಿವಿಧ ರಾಜ್ಯಗಳ ಬ್ಯಾಂಕುಗಳ ರಜಾ ಪಟ್ಟಿ
ನವದೆಹಲಿ, ಜುಲೈ 27: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಆಗಸ್ಟ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ, ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಜುಲೈ ತಿಂಗಳಲ್ಲಿ 15 ರಜೆಗಳು ದೇಶದ 9 ವಿವಿಧ ರಾಜ್ಯಗಳಿಗೆ ಸೀಮಿತವಾಗಿತ್ತು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಾತ್ರ ಜುಲೈ ತಿಂಗಳಂತೆ ಆಗಸ್ಟ್ ತಿಂಗಳಲ್ಲೂ ಕಡಿಮೆ ರಜೆ ದಿನಗಳು ಸಿಗುತ್ತವೆ.
ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾ ದಿನವಿರಲಿದೆ.
ಪ್ರತಿ ವರ್ಷ ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಗಮನಿಸಿ: ಕರ್ನಾಟಕದಲ್ಲಿ ಮೊಹರಂ ರಜಾ ದಿನ ಮಾತ್ರ ಆಗಸ್ಟ್ ತಿಂಗಳಲ್ಲಿ ಲಭ್ಯವಾಗಲಿದೆ. ಮಿಕ್ಕಂತೆ ವಿವಿಧ ರಾಜ್ಯಗಳ ರಜಾ ದಿನಗಳ ಬಗ್ಗೆ ವಿವರ ಮುಂದಿದೆ..
| ಆಗಸ್ಟ್ 2021ರಲ್ಲಿ ಬ್ಯಾಂಕ್ ರಜಾ ದಿನ | |||
|---|---|---|---|
| ದಿನ | ದಿನಾಂಕ | ರಜಾ ದಿನ | ನಗರ |
| ಆಗಸ್ಟ್ 13, 2021 | ಶುಕ್ರವಾರ | Patriot’s Day | ದೇಶದ ವಿವಿಧೆಡೆ |
| ಆಗಸ್ಟ್ 16 | ಸೋಮವಾರ | ಪಾರ್ಸೆ ಹೊಸ ದಿನ | ದೇಶದ ವಿವಿಧೆಡೆ |
| ಆಗಸ್ಟ್ 20 | ಶುಕ್ರವಾರ | ಮೊಹರಂ/ಮೊದಲ ಓಣಂ | ಕರ್ನಾಟಕ, ಕೇರಳ ಹಾಗೂ ಹಲವು ರಾಜ್ಯಗಳು |
| ಆಗಸ್ಟ್ 21 | ಶನಿವಾರ | ತಿರು ಓಣಂ | ಕೇರಳ |
| ಆಗಸ್ಟ್ 23 | ಸೋಮವಾರ | ಶ್ರೀನಾರಾಯಣ ಗುರು ಜಯಂತಿ | ಕೇರಳ |
| ಆಗಸ್ಟ್ 30 | ಸೋಮವಾರ | ಕೃಷ್ಣ ಜಯಂತಿ | ಭಾರತದ ಕೆಲವೆಡೆ |
| ಆಗಸ್ಟ್ 31 | ಮಂಗಳವಾರ | ಕೃಷ್ಣ ಜನ್ಮಾಷ್ಟಮಿ | ಭಾರತದ ಕೆಲವೆಡೆ |
ಮೇಲ್ಕಂಡ ದಿನಾಂಕಗಳಲ್ಲದೆ, ಆಗಸ್ಟ್ 1 (ಭಾನುವಾರ), ಆಗಸ್ಟ್ 14 (2ನೇ ಶನಿವಾರ), ಆಗಸ್ಟ್ 8 (ಭಾನುವಾರ), ಆಗಸ್ಟ್ 15 (ಭಾನುವಾರ), ಆಗಸ್ಟ್ 22 (ಭಾನುವಾರ), ಆಗಸ್ಟ್ 28 (4ನೇ ಶನಿವಾರ), ಆಗಸ್ಟ್ 29 (ಭಾನುವಾರ) ರಂದು ರಜೆ ಇರಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications