• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂನ್ ತಿಂಗಳಲ್ಲಿ ಎಷ್ಟು ದಿನ ಬ್ಯಾಂಕ್ ರಜೆ ಇರಲಿದೆ?

|
Google Oneindia Kannada News

ನವದೆಹಲಿ, ಮೇ 26: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಜೂನ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಜೂನ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಜಾರಿಯಲ್ಲಿದ್ದರೂ ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಲ್ಲಿ ರಜಾ ದಿನಗಳು ಕಡಿಮೆ ಇದೆ ಎನ್ನಬಹುದು.

ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾದಿನವಿರಲಿದೆ.

ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬ್ಯಾಂಕ್ ಕಚೇರಿಗಳು ಬಂದ್ ಆಗಿದ್ದರೂ, ಮೊಬೈಲ್ ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

ಜೂನ್ 2021ರಲ್ಲಿ ಬ್ಯಾಂಕ್ ರಜಾ ದಿನ
ದಿನ ದಿನಾಂಕ ರಜಾ ದಿನ ನಗರ
ಜೂನ್ 13, 2021 ಭಾನುವಾರ ಮಹಾರಾಣಾ ಪ್ರತಾಪ್ ಜಯಂತಿ ಹಿಮಾಚಲ ಪ್ರದೇಶ, ಹರ್ಯಾಣ, ರಾಜಸ್ಥಾನ
ಜೂನ್ 14 ಸೋಮವಾರ ಗುರು ಅರ್ಜುನ್ ದೇವ್ ಹುತಾತ್ಮ ದಿನ, ಪಹಿಲಿ ರಾಜ ಒಡಿಶಾ, ಪಂಜಾಬ್
ಜೂನ್ 14 ಮಂಗಳವಾರ ರಜ ಸಂಕ್ರಾಂತಿ, ವೈಎಂಎ ಡೇ ಒಡಿಶಾ, ಮಿಜೋರಾಂ
ಜೂನ್ 24 ಗುರುವಾರ ಸಂತ ಗುರು ಕಬೀರ್ ಜಯಂತಿ ಚಂದೀಗಢ, ಹಿಮಾಚಲ ಪ್ರದೇಶ, ಹರ್ಯಾಣ, ಪಂಜಾಬ್
ಜೂನ್ 30 ಬುಧವಾರ ರೆಮ್ಮ ನೀ ಮಿಜೋರಾಂ

ಮೇಲ್ಕಂಡ ದಿನಾಂಕಗಳಲ್ಲದೆ, ಜೂನ್ 12(2ನೇ ಶನಿವಾರ), ಜೂನ್ 13 (2ನೇ ಭಾನುವಾರ), ಜೂನ್ 26 (4ನೇ ಶನಿವಾರ) ಹಾಗೂ ಜೂನ್ 30 (4ನೇ ಭಾನುವಾರ) ರಂದು ರಜೆ ಇರಲಿದೆ.

English summary
Bank Holidays List In June 2021: check when banks will be closed in June month here is full list. Take a look.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X