ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್‍ಎಡ್ಜ್ ಗೆ ಪ್ರತಿಷ್ಠಿತ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್‍ನ ಪ್ರಶಸ್ತಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30: ಭಾರತದ ಅತ್ಯಂತ ವಿಶ್ವಾಸಾರ್ಹ ಮತ್ತು ಭರವಸೆಯ ಬ್ಯಾಂಕಿಂಗ್ ಮತ್ತು ಫೈನಾನ್ಸ್ ಅಕಾಡೆಮಿಯಾದ ಬ್ಯಾಂಕ್‍ಎಡ್ಜ್, ಬಿಎಫ್‍ಎಸ್‍ಐ ವಲಯದಲ್ಲಿ ಕೌಶಲ್ಯ ಅಭಿವೃದ್ಧಿ ಮೂಲಕ ಉದ್ಯೋಗಾವಕಾಶವನ್ನು ಸೃಷ್ಟಿಸಿದ ಸಾಧನೆಗಾಗಿ ಡಾ.ಎಪಿಜೆ ಅಬ್ದುಲ್ ಕಲಾಂ ಪ್ರತಿಷ್ಠಾನದ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರವಾಗಿದೆ.

ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ 2015ರಲ್ಲಿ ಆರಂಭವಾಗಿದ್ದು, ಡಾ.ಎಪಿಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಎನಿಸಿದ ವಿಷನ್-2020 ನನಸುಗೊಳಿಸುವ ಗುರಿ ಹೊಂದಿದೆ. ಈ ಪ್ರತಿಷ್ಠಾನವು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗುತ್ತಿದೆ. ಇದರ ಜತೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಆರೋಗ್ಯ ಸೇವಾ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ, ಫೌಂಡೇಷನ್ ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಮಾಜಿ ರಾಷ್ಟ್ರಪತಿಗಳ ಕನಸಿನ ಯೋಜನೆಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.

ಬ್ಯಾಂಕೆಡ್ಜ್ ಗೆ 4 ವರ್ಷಗಳಲ್ಲಿ 50 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ಗುರಿಬ್ಯಾಂಕೆಡ್ಜ್ ಗೆ 4 ವರ್ಷಗಳಲ್ಲಿ 50 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ಗುರಿ

ಬ್ಯಾಂಕ್‍ಎಡ್ಜ್ ಐದು ವರ್ಷಗಳನ್ನು ಪೂರೈಸಿದ್ದು, ಈ ಅವಧಿಯಲ್ಲಿ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗವನ್ನು ಬಿಎಫ್‍ಎಸ್‍ಐ ಕ್ಷೇತ್ರದಲ್ಲಿ ಒದಗಿಸಿದೆ. ಕಂಪನಿಯು ದೇಶಾದ್ಯಂತ 64 ತರಬೇತಿ ಕೇಂದ್ರಗಳನ್ನು ಹೊಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಈ ತರಬೇತಿ ಕೇಂದ್ರಗಳ ಸಂಖ್ಯೆಯನ್ನು ಇಮ್ಮಡಿಗೊಳಿಸುವ ಗುರಿ ಹೊಂದಿದೆ. ಬ್ಯಾಂಕ್‍ಎಡ್ಜ್ ಪ್ರಸ್ತುತ ದೇಶಾದ್ಯಂತ 25ಕ್ಕೂ ಹೆಚ್ಚು ಬ್ಯಾಂಕ್‍ಗಳ ಜತೆ ಕಾರ್ಯ ನಿರ್ವಹಿಸುತ್ತಿದೆ.

BankEdge wins prestigious Dr. APJ Abdul Kalam Foundation award

ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬ್ಯಾಂಕ್‍ಎಡ್ಜ್ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಜೋಶಿಯವರು, "ಈ ಪ್ರಶಸ್ತಿಯನ್ನು ಪ್ರತಿಷ್ಠಿತ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್‍ನಿಂದ ಸ್ವೀಕರಿಸಲು ಅತೀವ ಸಂತಸ ಎನಿಸುತ್ತಿದೆ. ಯುವ ಪದವೀಧರರಿಗೆ ತಳಹಂತದಲ್ಲೇ ಉದ್ಯೋಗಾವಕಾಶವನ್ನು ಸೃಷ್ಟಿಸಲು ಸೂಕ್ತ ತರಬೇತಿಯನ್ನು ನೀಡುತ್ತದೆ. ಫೌಂಡೇಷನ್ ನಮ್ಮ ಸಂಸ್ಥೆಯನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ" ಎಂದು ಹೇಳಿದರು.

ಈ ಪ್ರಶಸ್ತಿಯು ನಮ್ಮ ಇಡೀ ಬ್ಯಾಂಕ್‍ಎಡ್ಜ್ ತಂಡವನ್ನು ಇನ್ನಷ್ಟು ಉತ್ತಮ ಕೆಲಸಕ್ಕಾಗಿ ಸ್ಫೂರ್ತಿ ಒದಗಿಸಲಿದೆ. ಇದು ಮುಂದಿನ ಮೂರು ವರ್ಷಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

English summary
BANKEDGE has been conferred with a prestigious award from Dr. A P J Abdul Kalam Foundation for creating employability through skill development in BFSI Sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X