ಕ್ಯಾಂಪಸ್ ಸಂದರ್ಶನಕ್ಕೆ ಅವಕಾಶ ನೀಡಿ: ಬ್ಯಾಂಕ್ ಗಳ ಮನವಿ
ಪುಣೆ, ಜ.4 : ಕ್ಯಾಂಪಸ್ ಸಂದರ್ಶನದ ಮೂಲಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂಬ ಒತ್ತಾಯ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಕೇಳಿಬಂದಿದೆ.
ಪುಣೆಯಲ್ಲಿ ನಡೆದ ಎರಡು ದಿನಗಳ ಬ್ಯಾಂಕರ್ ಸಮ್ಮೇಳನದಲ್ಲಿ ಬ್ಯಾಂಕಿಂಗ್ ಕ್ಷೇತ್ರ ಸುಧಾರಣೆ ಸಂಬಂಧ ಚರ್ಚೆ ನಡೆಯಿತು. ಖಾಸಗಿ ಬ್ಯಾಂಕ್ ಗಳು ಮಾಡಿಕೊಳ್ಳುತ್ತಿರುವಂತೆ ನಮಗೂ ಕ್ಯಾಂಪಸ್ ಸಂದರ್ಶನ ಮಾಡಲು ಅವಕಾಶ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.[ಜ.7ರಂದು ಮತ್ತೆ ಬ್ಯಾಂಕ್ ನೌಕರರ ಮುಷ್ಕರ]

ಪ್ರತಿಭಾವಂತರನ್ನು ಸೆಳೆಯಲು ಸಂಬಳ ಪ್ಯಾಕೇಜ್ ಪರಿಷ್ಕರಿಸಬೇಕು, ಹಾಲಿ ವ್ಯವಸ್ಥೆಯಲ್ಲಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಎರಡು ವರ್ಷಕ್ಕೊಮ್ಮೆ ನೇಮಕ ಪ್ರಕ್ರಿಯೆ ನಡೆಸುತ್ತಿದ್ದು ಇದು ಬದಲಾಗಬೇಕು ಎಂಬ ಬೇಡಿಕೆ ಕೇಳಿಬಂದಿತು.
ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ನಡೆಸುವ ವಹಿವಾಟಿನ ಶುಲ್ಕ ಕಡಿಮೆ ಮಾಡಬೇಕು. ವ್ಯಾಪಾರಿಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗಳನ್ನು ಪ್ರಕಟಿಸಬೇಕು ಎಂದು ಮನವಿ ಮಾಡಲಾಯಿತು.[ಬ್ಯಾಂಕ್ ಖಾತೆಗೆ ನೇರವಾಗಿ ಎಲ್ ಪಿಜಿ ಸಬ್ಸಿಡಿ ಪಾವತಿ]
ಜೇಟ್ಲಿ ಭರವಸೆ: ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಭಾರತೀಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾವಣೆ ಕೈಗೊಳ್ಳಲು ಇದು ಸೂಕ್ತ ಸಮಯ. ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ಇನ್ನಷ್ಟು ಸ್ವಾಯತ್ತತೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಂ ರಾಜನ್ ಸಮಾವೇಶದಲ್ಲಿ ಭಾಗವಹಿಸಿದ್ದರು.












Click it and Unblock the Notifications